ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿಗೆ ಎದುರಾಯ್ತು ಮತ್ತೊಂದು ಸಂಕಷ್ಟ, ಏನು?

ಬೆಂಗಳೂರು: ಡ್ರಗ್ಸ್​ ಮಾಫಿಯಾದೊಂದಿಗೆ ನಂಟು ಆರೋಪಕ್ಕೆ ಸಂಬಂಧಿಸಿದಂತೆ ಸದ್ಯ ನ್ಯಾಯಾಂಗ ಬಂಧನದಲ್ಲಿರುವ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಬೆಂಗಳೂರಿನ NDPS ವಿಶೇಷ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯವು ರಾಗಿಣಿ ಹಾಗೂ ಸಂಜನಾ ವಿಚಾರಣೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿತ್ತು. ಇದಕ್ಕೆ ಕೋರ್ಟ್​ ಅನುಮತಿ ನೀಡಿದೆ.

ಪರಪ್ಪನ ಅಗ್ರಹಾರ ಜೈಲಿನಲ್ಲೇ ವಿಚಾರಣೆ ನಡೆಸಲು ಅನುಮತಿ ಸಿಕ್ಕಿದ್ದು ED ಪರ SPP ಪ್ರಸನ್ನ ಕುಮಾರ್​ ಅರ್ಜಿ ಸಲ್ಲಿಸಿದ್ದರು. ಐದು ದಿನಗಳ ಕಾಲ ED ವಿಚಾರಣೆಗೆ ನ್ಯಾಯಾಲಯ ಅನುಮತಿ ನೀಡಿದೆ. ಹಾಗಾಗಿ, ED ಅಧಿಕಾರಿಗಳು ಜೈಲಿಗೆ ತೆರಳಿ ರಾಗಿಣಿ ಮತ್ತು ಸಂಜನಾ ವಿಚಾರಣೆ ನಡೆಸಲಿದ್ದಾರೆ.

Related Tags:

Related Posts :

Category:

error: Content is protected !!