ಶಾಲಾ ಶ್ರೇಯೋಭಿವೃದ್ಧಿಗೆ ಪೋಷಕರಿಂದ ಪ್ರತಿ ತಿಂಗಳು 100 ರೂ. ದೇಣಿಗೆ ಸಂಗ್ರಹ: ಶಿಕ್ಷಣ ಇಲಾಖೆ ಸುತ್ತೋಲೆ
ಸರ್ಕಾರಿ ಶಾಲೆಗಳ ಶೌಚಾಲಯ, ವಿದ್ಯುತ್ ಬಿಲ್, ಕಡಿಯುವ ನೀರು ನಿರ್ವಹಣೆಗೆ ಮಾಸಿಕ ವಿದ್ಯಾರ್ಥಿಗಳ ಪೋಷಕರಿಂದ 100 ರೂಪಾಯಿ ದೇಣಿಗೆ ರೂಪದಲ್ಲಿ ಪಡೆಯಲು ಎಸ್ಡಿಎಮ್ಸಿಗಳಿಗೆ ಅವಕಾಶ ನೀಡಿ ಎಡವಟ್ಟು ಮಾಡಿಕೊಂಡಿದೆ.
ಬೆಂಗಳೂರು: ಸಾರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಅಭಿವೃದ್ಧಿ (Department) ಹಾಗೂ ಮೇಲುಸ್ತುವಾರಿ ಸಮಿತಿಯು ಶಾಲೆಯ ಅಭಿವೃದ್ಧಿಗಾಗಿ ದಾನ, ದೇಣಿಗೆಗಳನ್ನು (Donation) ಸ್ವೀಕರಿಸುವ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆ (Education Department) ಮಹತ್ವದ ಸುತ್ತೋಲೆ ಹೊರಡಿಸಿದೆ. ಸರ್ಕಾರಿ ಶಾಲೆಗಳ ಶೌಚಾಲಯ, ವಿದ್ಯುತ್ ಬಿಲ್, ಕಡಿಯುವ ನೀರು ನಿರ್ವಹಣೆಗೆ ಮಾಸಿಕ ವಿದ್ಯಾರ್ಥಿಗಳ ಪೋಷಕರಿಂದ 100 ರೂಪಾಯಿ ದೇಣಿಗೆ ರೂಪದಲ್ಲಿ ಪಡೆಯಲು ಎಸ್ಡಿಎಮ್ಸಿಗಳಿಗೆ ಅವಕಾಶ ನೀಡಿ ಎಡವಟ್ಟು ಮಾಡಿಕೊಂಡಿದೆ. ಹಿಗಾಗಿ ಸರ್ಕಾರಿ ಶಾಲಾ ಬಡ ಪಾಲಕರ ಬಳಿ ಹಣ ಸುಲಿಗೆಗೆ ಶಿಕ್ಷಣ ಇಲಾಖೆ ಮುಂದಾಗಿದೆ ಎನ್ನಲಾಗುತ್ತಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತರಿಂದ ಹೊರಡಿಸಲಾದ ಸುತ್ತೋಲೆಗೆ ಈಗ ಪೋಷಕರು, ಶಿಕ್ಷಣ ತಜ್ಞರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಕ್ಕಳ ವಿದ್ಯಾಭ್ಯಾಸಕ್ಕೆ ದಕ್ಕೆ ತರೋಕೆ ಶಿಕ್ಷಣ ಸಚಿವರು ಹೊರಟ್ಟಿದ್ದಾರೆ. ಮೂರು ತಿಂಗಳಿಗೊಮ್ಮೆ ಪೋಷಕರು ಸಭೆಗೆ ಸಹ ಬರೋದಿಲ್ಲ. ಬಡ ವಿದ್ಯಾರ್ಥಿಗಳು ಉಚಿತ ಶಿಕ್ಷಣ ಅಂತ ಪೋಷಕರ ಮಕ್ಕಳನ್ನ ತಂದು ಸರ್ಕಾರಿ ಶಾಲೆಗೆ ಬಿಡುತ್ತಾರೆ. ಇದೀಗ ಸರ್ಕಾರ ವಸೂಲಿಗೆ ಮುಂದಾದ್ರೆ ಹೇಗೆ ಎಂದು ಪ್ರಶ್ನಿಸಿದ್ದಾರೆ. ಉಚಿತ ಮತ್ತು ಕಡ್ಡಾಯ ಶಿಕ್ಷಣಕ್ಕಾಗಿ ಮಕ್ಕಳ ಹಕ್ಕು ಕಾಯಿದೆ 2009ರ ಸ್ಪಷ್ಟ ಉಲ್ಲಂಘನೆ ಎಂದು ಕಿಡಿ ಕಾರಿದರು.
ಹೆಚ್ಚುವರಿ ಹಣಕಾಸಿನ ನೆರವು:
ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಕಲ್ಪಸಲು ಪ್ರತಿ ವರ್ಷ ಸರ್ಕಾರ ಬಜೆಟ್ನಲ್ಲಿ ಅನುದಾನ ಬಿಡುಗಡೆ ಮಾಡುತ್ತದೆ. ಆದರೆ, ಕೆಲವೊಮ್ಮೆ ಅಗತ್ಯತೆಗೆ ಹೆಚ್ಚುವರಿ ಹಣಕಾಸಿನ ನೆರವು ಬೇಕಾಗುವುದರಿಂದ, ಪ್ರತಿ ವಿದ್ಯಾರ್ಥಿಗಳ ಪೋಷಕರಿಂದ ದಾನ ದೇಣಿಗೆ, ಕೊಡುಗೆ ರೂಪದಲ್ಲಿ ಮಾಸಿಕ 100 ರೂಪಾಯಿ ಹಣವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಖಾತೆಗೆ ಸಂದಾಯ ಮಾಡಿಕೊಂಡು ಶಾಲಾಭಿವೃದ್ಧಿ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಬಳಸಬಹುದು ಎಂದು ಶಿಕ್ಷಣ ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.
ವ್ಯಾಪಕ ಆಕ್ರೋಶ:
ಶಿಕ್ಷಣ ಇಲಾಖೆಯ ಸುತ್ತೋಲೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಶಿಕ್ಷಣ ಇಲಾಖೆ ನಡೆಗೆ ಪೋಷಕರು ಹಾಗೂ ಖಾಸಗಿ ಶಾಲಾ ಸಂಘಟನೆಗಳಿಂದಲೂ ವಿರೋಧ ಕೇಳಿಬರುತ್ತಿದೆ. ಶಾಲೆಗಳ ಖಾಸಗಿರಣದ ಹುನ್ನಾರ ಎಂದು ಪೋಷಕರು ಕಿಡಿಕಾರಿದ್ದಾರೆ. ಮಕ್ಕಳ ಮೂಲಭೂತ ಶಿಕ್ಷಣ ಹಕ್ಕನ್ನು ಶಿಕ್ಷಣ ಇಲಾಖೆ ಕಿತ್ತುಕೊಳ್ಳಲು ಮುಂದಾಗಿದ್ದು, ಮಕ್ಕಳನ್ನ ಶಾಲೆಯಿಂದ ಹೊರ ಹಾಕುವ ಹುನ್ನಾರ ಇದು ಎಂದಿದ್ದಾರೆ. ಕರ್ನಾಟಕದ್ಯಾಂತ ಮುಂದಿನ ದಿನಗಳಲ್ಲಿ ಪೋಷಕರಿಂದ ಹೋರಾಟ ಮಾಡುತ್ತೇವೆ ಎಂದು ಪೋಷಕರ ಸಂಘಟನೆಯಿಂದ ಆಕ್ರೋಶ ವ್ಯಕ್ತಪಡಿಸಲಾಗಿದೆ.
ರಾಜ್ಯ ಸರ್ಕಾರ ಸುತ್ತೋಲೆ ವಾಪಸ್ ಪಡೆಯಬೇಕು: ಹೆಚ್.ವಿಶ್ವನಾಥ್
ಇನ್ನು ಈ ವಿಚಾರವಾಗಿ ಮೈಸೂರಿನಲ್ಲಿ ಬಿಜೆಪಿ ಎಂಎಲ್ಸಿ ಹೆಚ್.ವಿಶ್ವನಾಥ್ ಪ್ರತಿಕ್ರಿಯೆ ನೀಡುದ್ದು, ಸರ್ಕಾರಿ ಶಾಲೆಗಳ ನಿರ್ವಹಣೆಗೆ 100 ರೂಪಾಯಿ ಶುಲ್ಕ ಯಾಕೆ? ರಾಜ್ಯ ಸರ್ಕಾರ ತಕ್ಷಣ ಈ ಸುತ್ತೋಲೆ ವಾಪಸ್ ಪಡೆಯಬೇಕು ಎಂದರು. ಸರ್ಕಾರಿ ಶಾಲೆಯಲ್ಲಿ ಓದೋರು ಆರ್ಥಿಕವಾಗಿ ಹಿಂದುಳಿದವರು. ಇವತ್ತು ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ತಂದಿದ್ದಾರೆ. ಕನ್ನಡ ಶಾಲೆ ಮುಚ್ಚಲು ಏನು ಹುನ್ನಾರ ಆಗಬೇಕೋ ಅದು ಆಗುತ್ತಿದೆ ಎಂದು ವಾಗ್ದಾಳಿ ಮಾಡಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:04 pm, Sat, 22 October 22