Rajasthan: 17 ವರ್ಷದ NEET ಆಕಾಂಕ್ಷಿ ಕೋಟಾದಲ್ಲಿ ಆತ್ಮಹತ್ಯೆ; ಒಂದು ವಾರದಲ್ಲಿ ಇದು 3ನೇ ಘಟನೆ

ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ಮತ್ತೊಬ್ಬ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಟಾದಲ್ಲಿ ಒಂದು ವಾರದಲ್ಲಿ ನಡೆದ ಮೂರನೇ ಘಟನೆ ಇದಾಗಿದೆ ಎಂದು ವರದಿಯಾಗಿದೆ.

Rajasthan: 17 ವರ್ಷದ NEET ಆಕಾಂಕ್ಷಿ ಕೋಟಾದಲ್ಲಿ ಆತ್ಮಹತ್ಯೆ; ಒಂದು ವಾರದಲ್ಲಿ ಇದು 3ನೇ ಘಟನೆ
ಸಾಂದರ್ಭಿಕ ಚಿತ್ರ
Follow us
ನಯನಾ ಎಸ್​ಪಿ
|

Updated on: May 16, 2023 | 6:39 PM

ರಾಜಸ್ಥಾನದ ಕೋಟಾ (Kota) ಜಿಲ್ಲೆಯಲ್ಲಿ ಮತ್ತೊಬ್ಬ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಆಕಾಂಕ್ಷಿ (Aspirant) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಟಾದಲ್ಲಿ ಒಂದು ವಾರದಲ್ಲಿ ನಡೆದ ಮೂರನೇ ಘಟನೆ ಇದಾಗಿದೆ ಎಂದು ವರದಿಯಾಗಿದೆ. ಮೃತ 17 ವರ್ಷದ ಯುವಕ ಬಿಹಾರದ ಪಾಟ್ನಾ ಜಿಲ್ಲೆಯ ನಿವಾಸಿ. ಜಿಲ್ಲೆಯ ಕೃಷ್ಣ ವಿಹಾರ್ ಪ್ರದೇಶದಲ್ಲಿ ಗುರುವಾರ (ಮೇ 11) ರಾತ್ರಿ ಈ ಘಟನೆ ನಡೆದಿದೆ. ಬಾಲಕನನ್ನು ಕವಲೇಶ್ ಎಂದು ಗುರುತಿಸಲಾಗಿದೆ. ಕವಲೇಶ್ ಪಿಜಿ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡಿದ್ದಾರೆ ಎಂದು ವರದಿಯಾಗಿದೆ. ಟೈಮ್ಸ್ ಆಫ್ ಇಂಡಿಯಾದಲ್ಲಿ ಪ್ರಕಟವಾದ ವರದಿಯ ಪ್ರಕಾರ, ಪೊಲೀಸರು ಶುಕ್ರವಾರ (ಮೇ 12) ಬೆಳಗ್ಗೆ ಕವಲೇಶ್ ಅವರ ದೇಹವನ್ನು ವಶಪಡಿಸಿಕೊಂಡರು.

ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಎಂಬಿಎಸ್ ಆಸ್ಪತ್ರೆಗೆ ಕಳುಹಿಸಲಾಯಿತು. ಆತ್ಮಹತ್ಯೆ ಪತ್ರವನ್ನೂ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೋಚಿಂಗ್ ಸೆಂಟರ್‌ನಲ್ಲಿ ದಿನನಿತ್ಯದ ಪರೀಕ್ಷೆಗಳಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗದೆ ಒತ್ತಡದ ಕಾರಣದಿಂದ ಇಂತಹ ನಿರ್ಧಾರ ತೆಗೆದುಕೊಳ್ಳುತ್ತಿರುವುದಾಗಿ ಇಡುತ್ತಿರುವುದಾಗಿ ಪತ್ರದಲ್ಲಿ ಬಾಲಕ ಹೇಳಿದ್ದಾನೆ.

ಮೃತರು ಗುರುವಾರ ಸಂಜೆ ತನ್ನ ಸಹಪಾಠಿಗಳನ್ನು ಭೇಟಿಯಾಗಿದ್ದರು ಮತ್ತು ಸಾಮಾನ್ಯ ಸ್ಥಿತಿಯಲ್ಲಿದ್ದರು. ಶುಕ್ರವಾರ ಬೆಳಗ್ಗೆ ಕವಲೇಶ್ ತನ್ನ ಕೊಠಡಿಯಿಂದ ಹೊರಗೆ ಬಾರದಿದ್ದಾಗ, ಪಿಜಿ ವಸತಿ ನಿಲಯದ ಪಾಲಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಬಾಗಿಲು ಒಡೆದು ನೋಡಿದಾಗ ಕವಲೇಶ್ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ.

ಕಳೆದ ವಾರ ಉತ್ತರ ಪ್ರದೇಶದ 15 ವರ್ಷದ ನೀಟ್ ಆಕಾಂಕ್ಷಿ ಕೋಟಾದ ತನ್ನ ಹಾಸ್ಟೆಲ್ ಕೋಣೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಆದರೆ, ಮೃತದೇಹದಿಂದ ಯಾವುದೇ ಪತ್ರ ಪತ್ತೆಯಾಗಿಲ್ಲ. ವಿದ್ಯಾರ್ಥಿಯು ಬುಲಂದ್‌ಶಹರ್ ಜಿಲ್ಲೆಯ ಖುರ್ಜಾ ಪಟ್ಟಣದ ನಿವಾಸಿಯಾಗಿದ್ದು, NEET UG 2023 ಗೆ ತಯಾರಿ ನಡೆಸಲು ಒಂದು ತಿಂಗಳ ಹಿಂದೆ ಕೋಟಾಗೆ ತೆರಳಿದ್ದರು. ಸೋಮವಾರ (ಮೇ 8), 22 ವರ್ಷದ NEET ಆಕಾಂಕ್ಷಿ ಕಟ್ಟಡದ 10 ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕಾಲೇಜು ಪರೀಕ್ಷೆಯಲ್ಲಿ ಫೇಲ್..ಹೇಳಿದ್ದು ಕಿಡ್ನಾಪ್ ಕಥೆ; ನಿಜವಾಗಿ ನಡೆದದ್ದೇನು?

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಈ ವರ್ಷದ ಪದವಿಪೂರ್ವ (NEET-UG) 2023 ಪರೀಕ್ಷೆಗಾಗಿ ಈ ವರ್ಷದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯನ್ನು ಮೇ 7, 2023 ರಂದು ನಡೆಸಲಾಗಿತ್ತು. 20 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು (Candidates) ಭಾರತದ ಏಕೈಕ ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದರು. NEET UG ಅನ್ನು 13 ಭಾಷೆಗಳಲ್ಲಿ ನಡೆಸಲಾಗುತ್ತದೆ, ಅದರ ಮೂಲಕ MBBS ಸೇರಿದಂತೆ 10 ಕೋರ್ಸ್‌ಗಳಿಗೆ ಪ್ರವೇಶವನ್ನು ನೀಡಲಾಗುತ್ತದೆ. ದೇಶದಾದ್ಯಂತ 499 ಸ್ಥಳಗಳಲ್ಲಿ ಲಿಖಿತ ರೂಪದಲ್ಲಿ ಪರೀಕ್ಷೆಯನ್ನು ನಡೆಸಲಾಯಿತು.

ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು