Karnataka SSLC Exam 2022 Time Table: ಎಸ್‌ಎಸ್‌ಎಲ್‌ಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ
Karnataka SSLC Exam 2022 Schedule in Kannada: 2023ರ ಮಾರ್ಚ್-ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಇಂದು(ಡಿಸೆಂಬರ್ 05) ಪ್ರಕಟಿಸಿದೆ.
ಬೆಂಗಳೂರು: 2022-23ನೇ ಸಾಲಿನ ಕರ್ನಾಟಕ ಎಸ್‌ಎಸ್‌ಎಲ್‌ಸಿ(10ನೇ ತರಗತಿ) ಪರೀಕ್ಷೆಯ ಅಂತಿಮ ವೇಳಾಪಟ್ಟಿ (Karnataka SSLC Exam Final Time Table) ಪ್ರಕಟವಾಗಿದೆ. 2023ರ ಮಾರ್ಚ್-ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ(karnataka secondary education examination board) ಇಂದು (ಡಿಸೆಂಬರ್ 05) ಪ್ರಕಟಿಸಿದ್ದು, ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆಗಳು ನಡೆಯಲಿವೆ.
ಇದನ್ನೂ ಓದಿ: Karnataka 2nd PUC Exam Timetable : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ
2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ (SSLC Annual Exam 2023) ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅ.29 ಪ್ರಕಟಿಸಿತ್ತು. ಏಪ್ರಿಲ್ 1ರಿಂದ ಏ, 15ರವರೆಗೆ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಿದ್ದು, ಈ ಬಗ್ಗೆ ಏನಾದರೂ ಆಕ್ಷೇಪಣೆಗಳು ಇದ್ದರೆ ನವೆಂಬರ್ 28ರವರೊಳಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಿತ್ತು. ಇದೀಗ ಅಂತಿಮವಾಗಿ ಕರ್ನಾಟಕ ಪ್ರೌಢಶಾಲಾ ಶಿಕ್ಷಣ ಪರೀಕ್ಷಾ ಮಂಡಳಿ ಫೈನಲ್ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿರುವ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಟ್ವಿಟ್ಟರ್ನಲ್ಲಿ ಮಾಹಿತಿ ನೀಡಿದ್ದು, ಯಾವ ದಿನ ಯಾವ ವಿಷಯದ ಪರೀಕ್ಷೆ ನಡೆಯಲಿದೆ ಎನ್ನುವ ವೇಳಾಪಟ್ಟಿ ಕೆಳಗಿನಂತಿದೆ ನೋಡಿ.
2023ರ ಮಾರ್ಚ್-ಏಪ್ರಿಲ್‌ನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ.
ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ಪರೀಕ್ಷೆ ನಡೆಯಲಿವೆ.@BSBommai pic.twitter.com/Ixjl3xzEn8
— B.C Nagesh (@BCNagesh_bjp) December 5, 2022
ದಿನಾಂಕ | ವಿಷಯ |
31-03-2023 | ಪ್ರಥಮ ಭಾಷೆ ಪರೀಕ್ಷೆ ( ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ) |
04-04-2023 | ಗಣಿತ |
06-04-2023 | ದ್ವಿತೀಯ ಭಾಷೆ (ಇಂಗ್ಲಿಷ್, ಕನ್ನಡ) |
10-04-2023 | ವಿಜ್ಞಾನ |
12-04-2023 | ತೃತೀಯ ಭಾಷೆ (ತೃತೀಯ ಭಾಷೆ ಪರೀಕ್ಷೆ ತೃತೀಯ ಭಾಷೆ-ಹಿಂದಿ, ಕನ್ನಡ, ಇಂಗ್ಲಿಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು |
15-04-2023 | ಸಮಾಜ ವಿಜ್ಞಾನ |
Published On - 5:24 pm, Mon, 5 December 22