Kannada News Education 2025-26 Academic Year TimeTable Final: What's Changed? Here is the detail, Karnataka news in kannada
2025-26ನೇ ಶೈಕ್ಷಣಿಕ ಸಾಲಿನ ವೇಳಾಪಟ್ಟಿ ಅಂತಿಮ: ಏನೇನು ಬದಲಾವಣೆ? ಇಲ್ಲಿದೆ ವಿವರ
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉನ್ನತ ಶಿಕ್ಷಣ ಇಲಾಖೆಯಡಿ ಬರುವ ರಾಜ್ಯದ ಸಾರ್ವಜನಿಕ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಸಂಯೋಜಿತ ಕಾಲೇಜುಗಳಿಗೆ ಸಂಬಂಧಿಸಿದಂತೆ ಶೈಕ್ಷಣಿಕ ವೇಳಾಪಟ್ಟಿಯನ್ನು ಸುಗಮವಾಗಿ ಜಾರಿಗೊಳಿಸಲು ಅನುವಾಗುವಂತೆ ಉನ್ನತ ಶಿಕ್ಷಣ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿಗೆ ವೇಳಾಪಟ್ಟಿಯನ್ನು ಪ್ರಕಟಿಸಲು ಆದೇಶಿಸಲಾಗಿದೆ.
2025-26ನೇ ಶೈಕ್ಷಣಿಕ ಸಾಲಿನ ವೇಳಾಪಟ್ಟಿ ಅಂತಿಮ: ಏನೇನು ಬದಲಾವಣೆ? ಇಲ್ಲಿದೆ ವಿವರ
ಬೆಂಗಳೂರು, ಅಕ್ಟೋಬರ್ 04: ಕರ್ನಾಟಕ ಸಾರ್ವಜನಿಕ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಸಂಯೋಜಿತ ಕಾಲೇಜುಗಳಿಗೆ 2025-26ನೇ ಶೈಕ್ಷಣಿಕ ಸಾಲಿನ ವೇಳಾಪಟ್ಟಿಯನ್ನು ಅಂತಿಮಗೊಳಿಸುವಂತೆ ಉನ್ನತ ಶಿಕ್ಷಣ ಇಲಾಖೆ (Higher Education Department) ಆದೇಶ ಹೊರಡಿಸಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಉನ್ನತ ಶಿಕ್ಷಣ ಸಚಿವ ಡಾ. ಎಂಸಿ ಸುಧಾಕರ್ ಕೂಡ ವೇಳಾಪಟ್ಟಿಯನ್ನು ಪುನರಾವಲೋಕಿಸಿ ಅನುಮೋದಿಸಿದ್ದಾರೆ.
ಪ್ರಕಟಣೆಯಲ್ಲಿ ಏನಿದೆ?
ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಉನ್ನತ ಶಿಕ್ಷಣ ಇಲಾಖೆಯಡಿ ಬರುವ ರಾಜ್ಯದ ಸಾರ್ವಜನಿಕ ಮತ್ತು ಖಾಸಗಿ ವಿಶ್ವವಿದ್ಯಾಲಯಗಳ ಸಂಯೋಜಿತ ಕಾಲೇಜುಗಳಿಗೆ ಸಂಬಂಧಿಸಿದಂತೆ ಶೈಕ್ಷಣಿಕ ವೇಳಾಪಟ್ಟಿಯನ್ನು ಸುಗಮವಾಗಿ ಜಾರಿಗೊಳಿಸಲು ಅನುವಾಗುವಂತೆ ಉನ್ನತ ಶಿಕ್ಷಣ ಇಲಾಖೆಯು 2025-26ನೇ ಶೈಕ್ಷಣಿಕ ಸಾಲಿಗೆ ವೇಳಾಪಟ್ಟಿಯನ್ನು ಪ್ರಕಟಿಸಲು ಆದೇಶಿಸಲಾಗಿದೆ.
2025-26ನೇ ಸಾಲಿನ ಶೈಕ್ಷಣಿಕ ಮತ್ತು ಸಂಯೋಜನಾ ವೇಳಾಪಟ್ಟಿಯು ಅಕ್ಟೋಬರ್ 2024 ರಂದು ಪ್ರಾರಂಭವಾಗಿ ಮಾರ್ಚ್, ಏಪ್ರಿಲ್ 2025ರಲ್ಲಿ ಅಂತ್ಯಗೊಳ್ಳಲಿದೆ. ಹಾಗಾಗಿ ನಿಗದಿತ ವೇಳಾಪಟ್ಟಿಯಂತೆ ತರಗತಿಗಳು ಪ್ರಾರಂಭಗೊಳ್ಳಲಿವೆ.
ಈ ಕೆಳಕಂಡಂತೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ:
ವಿಶ್ವವಿದ್ಯಾಲಯಗಳ ವ್ಯಾಪ್ತಿಯಲ್ಲಿನ ವೃತ್ತಿಪರವಲ್ಲದ ಸ್ನಾತಕ, ಸ್ನಾತಕೋತ್ತರ ಪದವಿ ಕಾರ್ಯಕ್ರಮಗಳಿಗೆ 2025-26ನೇ ಸಾಲಿನ ಸಂಯೋಜನ ಪ್ರಕ್ರಿಯೆ ವೇಳಾಪಟ್ಟಿ-ಸದರಿ ವೇಳಾಪಟ್ಟಿಯು ಕಾಲೇಜುಗಳ ವೃತ್ತಿಪರವಲ್ಲದ ಸ್ನಾತಕ ಹಾಗೂ ಸ್ನಾತಕೋತ್ತರ ಕೋರ್ಸ್ ಸಂಬಂಧಿತ ಹೊಸ ಕೋರ್ಸ್ಗಳ ಸಂಯೋಜನೆ, ವಿದ್ಯಾರ್ಥಿ ಪ್ರಮಾಣ ಹೆಚ್ಚಳ, ಬದಲಾವಣೆ ಇತ್ಯಾದಿಯನ್ನು ಒಳಗೊಂಡಿರುತ್ತದೆ. ಈ ಪ್ರಕ್ರಿಯೆಯು ಯುಯುಸಿಎಂಎಸ್ (UUCMS) ಆನ್‌ಲೈನ್ ಪೋರ್ಟಲ್‌ನಲ್ಲಿ ನಡೆಯಲಿದೆ.
2025-26ನೇ ಸಾಲಿಗೆ ಇಂಜಿನಿಯರಿಂಗ್ ಮತ್ತು ಇತರೆ ತ್ರಿಪದ ಕೋರ್ಸ್ಗಳಿಗೆ ನಿರಾಕ್ಷೇಪಣೆ ಪ್ರಮಾಣ ಪತ್ರವನ್ನು ನೀಡಿ ಸೀಟ್ ಮ್ಯಾಟ್ರಿಕ್‌ಸ್ನಲ್ಲಿ ಅಳವಡಿಸುವ ಪ್ರಕ್ರಿಯೆ ಪ್ರಸ್ತಾಪಿತ ಶೈಕ್ಷಣಿಕ ಚಟುವಟಿಕೆಗಳು ಎಐಸಿಟಿಇ ಹಾಗೂ ನೀಟ್ ಫಲಿತಾಂಶದ ಆಧಾರದ ಮೇಲೆ ಅಂತಿಮಗೊಳ್ಳಲಿದೆ.
ಖಾಸಗಿ ವಿಶ್ವವಿದ್ಯಾಲಯಗಳಿಗೆ 2025-26ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಪಟ್ಟಂತೆ ಹೊಸ ಕೋರ್ಸ್ಗಳ ಸಂಯೋಜನೆ, ವಿದ್ಯಾರ್ಥಿ ಪ್ರಮಾಣ ಹೆಚ್ಚಳ, ಕೋರ್ಸ್‌ಗಳ ಬದಲಾವಣೆ, ವೃತ್ತಿಪರ ಕೋರ್ಸ್ಗಳ ಸೀಟ್ ಮ್ಯಾಟ್ರಿಕ್ಸ್ ವೇಳಾಪಟ್ಟಿಯನ್ನು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಪರಿಶೀಲನೆಯ ನಂತರ ಹೊರಡಿಸಲಾಗುವುದು.
ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿನ ಸಂಯೋಜಿತ ಕಾಲೇಜಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ಏಕರೂಪತೆ ಮತ್ತು ನಿಖರತೆಗಾಗಿ 2025-26ನೇ ಶೈಕ್ಷಣಿಕ ವೇಳಾಪಟ್ಟಿಯನ್ನು ಹೊರಡಿಸಲಾಗುತ್ತಿದೆ.