ದ್ವಿತೀಯ ಪಿಯು ಫಲಿತಾಂಶ ಪ್ರಕಟ, ಆನ್‌ಲೈನ್‌ನಲ್ಲಿ ನೋಡೋದು ಹೇಗೆ? ಇಲ್ಲಿದೆ ವಿವರ
Karnataka 2nd PUC Result: ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, 11 ಗಂಟೆಯ ನಂತರ ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಾಗಲಿದೆ. ದ್ವಿತೀಯ ಪಿಯುಸಿ ಫಲಿತಾಂಶವನ್ನು ಎಲ್ಲಿ, ಹೇಗೆ ಪರಿಶೀಲಿಸಬಹುದು? ತಾತ್ಕಾಲಿಕ ಮಾರ್ಕ್‌ಶೀಟ್ ಡೌನ್‌ಲೋಡ್ ಮಾಡುವುದು ಹೇಗೆ ಎಂಬಿತ್ಯಾದಿ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.
ಬೆಂಗಳೂರು, ಏಪ್ರಿಲ್ 8: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು (PU Board) ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು (Second PU Result) ಪ್ರಕಟಿಸಿದೆ. ಇದೀಗ 11 ಗಂಟೆಯ ನಂತರ, ಪರೀಕ್ಷೆ ಬರೆದಿರುವ ಅಭ್ಯರ್ಥಿಗಳು ವೈಯಕ್ತಿಕ ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸುವ ಮೂಲಕ ಪಿಯು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮತ್ತು pue.kar.nic ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.
ದ್ವಿತೀಯ ಪಿಯುಸಿ ಫಲಿತಾಂಶವನ್ನು ಎಲ್ಲಿ, ಹೇಗೆ ಪರಿಶೀಲಿಸಬಹುದು?
ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶಗಳನ್ನು ಎರಡು ವೆಬ್‌ಸೈಟ್‌ಗಳಲ್ಲಿ ಬಿಡುಗಡೆ ಮಾಡಲಾಗುತ್ತದೆ. ಅವುಗಳೆಂದರೆ, karresults.nic.in ಮತ್ತು pue.kar.nic.in. ಆನ್‌ಲೈನ್‌ನಲ್ಲಿ ತಾತ್ಕಾಲಿಕ ಮಾರ್ಕ್‌ಶೀಟ್ ಡೌನ್‌ಲೋಡ್ ಮಾಡುವುದು ಹೇಗೆಂಬ ಹಂತ-ಹಂತದ ಮಾಹಿತಿ ಇಲ್ಲಿದೆ.
- ಹಂತ 1: ಅಧಿಕೃತ ವೆಬ್‌ಸೈಟ್‌ಗೆ ಹೋಗಿ- karresults.nic.in ಅಥವಾ pue.kar.nic
- ಹಂತ 2: ವೆಬ್ಸೈಟ್ನ ಮುಖಪುಟದಲ್ಲಿ KSEAB PUC ಫಲಿತಾಂಶ 2024 ಕ್ಕಾಗಿ ಲಿಂಕ್ ಅನ್ನು ಕ್ಲಿಕ್ ಮಾಡಿ.
- ಹಂತ 3: ನಿಮ್ಮ ಲಾಗಿನ್ ಕ್ರೆಡೆನ್ಶಿಯಲ್ಸ್ ನಮೂದಿಸಿ.
- ಹಂತ 4: ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2024 ಎಂಬ ಸಂದೇಶ ಸ್ಕ್ರೀನ್ ಮೇಲೆ ಕಾಣಿಸುತ್ತದೆ.
- ಹಂತ 5: ಸ್ಕೋರ್‌ಕಾರ್ಡ್ ಅನ್ನು ವೀಕ್ಷಿಸಿ ಮತ್ತು ಡೌನ್‌ಲೋಡ್ ಮಾಡಿ.
2024 ರ ದ್ವಿತೀಯ ಪಿಯು ಪರೀಕ್ಷೆಗೆ 3.3 ಲಕ್ಷ ಹುಡುಗರು ಮತ್ತು 3.6 ಲಕ್ಷ ಹುಡುಗಿಯರು ಹಾಜರಾಗಿದ್ದಾರೆ. ಅವರು ಪ್ರಸ್ತುತ 2024 ರ ದ್ವಿತೀಯ ಪಿಯುಸಿ ಫಲಿತಾಂಶಗಳ ಬಿಡುಗಡೆಗಾಗಿ ಕಾಯುತ್ತಿದ್ದಾರೆ. ಮಂಡಳಿಯು ಫಲಿತಾಂಶಗಳ ಜೊತೆಗೆ, ಉತ್ತೀರ್ಣದ ಪ್ರಮಾಣ, ಟಾಪರ್ಸ್ ಮತ್ತು ಇತರ ಅಂಕಿಅಂಶಗಳ ಪಟ್ಟಿಯನ್ನು ಬಿಡುಗಡೆ ಮಾಡಲಿದೆ.
ಇದನ್ನೂ ಓದಿ: ದ್ವಿತೀಯ ಪಿಯು ಫಲಿತಾಂಶ ಪ್ರಕಟ, ಶೇ 81.15 ಮಂದಿ ಉತ್ತೀರ್ಣ
2023 ರ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿನಿಯರು ಮೇಲುಗೈ ಸಾಧಿಸಿದ್ದರು. ವಿದ್ಯಾರ್ಥಿನಿಯರ ಪೈಕಿ ಶೇಕಡಾ 80.25 ರಷ್ಟು ಉತ್ತೀರ್ಣರಾಗಿದ್ದರೆ, ವಿದ್ಯಾರ್ಥಿಗಳ ಪೈಕಿ ಶೇಕಡಾ 69.05 ರಷ್ಟು ಉತ್ತೀರ್ಣರಾಗಿದ್ದರು. ಒಟ್ಟಾರೆ ಉತ್ತೀರ್ಣ ಪ್ರಮಾಣ ಶೇಕಡಾ 74.67 ರಷ್ಟಿತ್ತು. ಒಟ್ಟು 7,26,195 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹೆಚ್ಚಳದಲ್ಲಿ ಸ್ಥಿರತೆ ಕಂಡುಬಂದಿತ್ತು.
ಇನ್ನಷ್ಟು ಶಿಕ್ಷಣ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ
Published On - 8:25 am, Mon, 8 April 24