2nd PUC Exam: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ಆಲ್​ ದಿ ಬೆಸ್ಟ್ ​

2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 20ರವರೆಗೆ ನಡೆಯಲಿದೆ. 7,13,862 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ಅಳವಡಿಸಲಾಗಿದೆ ಮತ್ತು ಮೊಬೈಲ್, ಕ್ಯಾಲ್ಕುಲೇಟರ್‌ಗಳು ನಿಷೇಧಿಸಲಾಗಿದೆ. ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣದ ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷಾ ಅಕ್ರಮಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ.

2nd PUC Exam: ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ, ಆಲ್​ ದಿ ಬೆಸ್ಟ್ ​
ಸಾಂದರ್ಭಿಕ ಚಿತ್ರ
Updated By: ವಿವೇಕ ಬಿರಾದಾರ

Updated on: Mar 01, 2025 | 7:52 AM

ಬೆಂಗಳೂರು, ಮಾರ್ಚ್​ 01: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 (2nd PUC Exam) ಶನಿವಾರದಿಂದ (ಮಾರ್ಚ್​. 01) ರಾಜ್ಯಾದ್ಯಂತ ಆರಂಭವಾಗಿದ್ದು, ಮಾರ್ಚ್ 20ರವರೆಗೆ ನಡೆಯಲಿವೆ. ಒಟ್ಟು 1171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 7,13,862 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 6,61,474 ಹೊಸ ವಿದ್ಯಾರ್ಥಿಗಳು, 34,071 ಪುನರಾವರ್ತಿತ ವಿದ್ಯಾರ್ಥಿಗಳು, 18,317 ಖಾಸಗಿ ವಿದ್ಯಾರ್ಥಿಗಳು ದ್ವಿತೀಯ ಪಿಯು ಪರೀಕ್ಷೆ ಬರೆಯಲಿದ್ದಾರೆ.

ಎಲ್ಲ ಪರೀಕ್ಷಾ ಕೊಠಡಿಯೊಳಗೆ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಪರೀಕ್ಷಾ ಕೊಠಡಿಯೊಳಗೆ ಮೊಬೈಲ್, ಎಲೆಕ್ಟ್ರಾನಿಕ್ ವಾಚ್, ಕ್ಯಾಲುಕೇಟರ್ ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಾಲಾಗಿದೆ. ಜೆರಾಕ್ಸ್ ಅಂಗಡಿಗಳಿಗೆ ನಿರ್ಬಂಧಿಸಲಾಗಿದೆ. ಮತ್ತು ಧ್ವನಿವರ್ಧಕ ಬಳಕೆ ನಿಷೇಧಿಸಲಾಗಿದೆ.

ಸರ್ಕಾರಿ ಬಸ್​ಗಳಲ್ಲಿ ಉಚಿರ ಪ್ರಯಾಣ

ವಿದ್ಯಾರ್ಥಿಗಳು ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ ಬಿಎಂಟಿಸಿ ಹಾಗೂ ಕೆಎಸ್​ಆರ್​ಟಿಸಿ ಸಾಮಾನ್ಯ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.

ಇದನ್ನೂ ಓದಿ
ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆ ಪಾಸಾಗಬೇಕಿದ್ದರೆ ಶೇ 35 ಅಂಕ ಗಳಿಸಲೇಬೇಕು
ಪರೀಕ್ಷೆ ಬರೆಯುವ ಎಸ್ಎಸ್ಎಲ್​ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ
ದ್ವಿತೀಯ ಪಿಯು ಲಿಖಿತ ಪರೀಕ್ಷೆಯಲ್ಲಿ ಮಹತ್ವದ ಬದಲಾವಣೆ
ಸರ್ಕಾರಿ ಶಾಲಾ ಮಕ್ಕಳ ಹಾಜರಾತಿಗೆ ಇನ್ಮುಂದೆ ಫೇಸಿಯಲ್ ಅಟೆಂಡೆನ್ಸ್..!

ಪರೀಕ್ಷೆಗೆ ಹಾಜರಾಗುವವರ ಸಂಖ್ಯೆ ಹೆಚ್ಚಳ

‘‘ಹಿಂದಿನ ವರ್ಷಕ್ಕೆ ಹೋಲಿಸಿದರೆ, ದ್ವಿತೀಯ ಪಿಯುಸಿ ಮತ್ತು ಎಸ್‌ಎಸ್‌ಎಲ್‌ಸಿ ಎರಡಕ್ಕೂ ಹೆಸರು ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ 15,238 ಮಂದಿ ಹೆಚ್ಚಾಗಿದ್ದರೆ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡವರ ಸಂಖ್ಯೆಯಲ್ಲಿ 26,479 ಹೆಚ್ಚಳವಾಗಿದೆ’’ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದರು.

ಇದನ್ನೂ ಓದಿ: 25 ಸಾವಿರ ಪಿಯು ವಿದ್ಯಾರ್ಥಿಗಳಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಉಚಿತ ನೀಟ್ ಕೋಚಿಂಗ್

ವೆಬ್ ಕಾಸ್ಟಿಂಗ್ ವ್ಯವಸ್ಥೆ ಜಾರಿಗೆ

ಈ ಬಾರಿ ಪರೀಕ್ಷಾ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಿ ಪಾರದರ್ಶಕತೆ ಹೆಚ್ಚಿಸಲು ಪರೀಕ್ಷಾ ಕೇಂದ್ರಗಳ ಪ್ರತಿ ಕೊಠಡಿಯಲ್ಲೂಸಿಸಿಕ್ಯಾಮೆರಾ ಅವಳಡಿಕೆ ಜೊತೆಗೆ ಅಲ್ಲಿನ ಚಿತ್ರಣವನ್ನು ಜಿಲ್ಲಾ ಮಟ್ಟದ ನಿಯಂತ್ರಣ ಕೊಠಡಿಯಲ್ಲಿ ಕೂತು ವೀಕ್ಷಿಸಲು ವೆಬ್‌ ಕಾಸ್ಟಿಂಗ್ ಕಣ್ಣಾದಲು ವ್ಯವಸ್ಥೆ ಅಳವಡಿಸಲಾಗಿದೆ. ಉನ್ನತ ಅಧಿಕಾರಿಗಳು ಈ ಕೇಂದ್ರಗಳಲ್ಲಿ ಕುಳಿತು ತಮ್ಮ ಜಿಲ್ಲಾ ವ್ಯಾಪ್ತಿಯ ಯಾವುದೇ ಕೇಂದ್ರದ ಯಾವುದೇ ಕೊಠಡಿಯಲ್ಲಿನ ಆಗುಹೋಗುಗಳನ್ನು ವೀಕ್ಷಿಸುತ್ತಿರುತ್ತಾರೆ. ಯಾವುದೇ ವಿದ್ಯಾರ್ಥಿಗಳು ಪರೀಕ್ಷಾ ಅಕ್ರಮದಲ್ಲಿ ತೊಡಗಿರುವುದು, ಪರೀಕ್ಷಾ ಕೊಠಡಿ ಮೇಲ್ವಿಚಾರಕರು ಸಮಯಕ್ಕೆ ಸರಿಯಾಗಿ ಪ್ರಶ್ನೆಪತ್ರಿಕೆ, ಉತ್ತರ ಪತ್ರಿಕೆಗಳನ್ನು ನೀಡದೆ ಲೋಪವೆಸಗುವುದು, ಸಾಮೂಹಿಕ ನಕಲು ಮಾಡಿಸುವಂತಹ ಯಾವುದೇ ಅಕ್ರಮಗಳು ಕಂಡುಬಂದರೆ ತಕ್ಷಣ ಕಾನೂನು ಕ್ರಮ ಜರುಗಿಸಲಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಬಹಳ ಎಚ್ಚರಿಕೆಯಿಂದ ಪರೀಕ್ಷೆ ಬರೆಯಬೇಕು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:40 am, Sat, 1 March 25