2nd PUC Supplementary Exam Timetable: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಗೊಂಡಿದ್ದು, ಆಗಸ್ಟ್ 12ರಿಂದ 25ರವರೆಗೆ ದ್ವಿತೀಯ ಪಿಯು ಪೂರಕ ಪರೀಕ್ಷೆ ನಡೆಯಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಾಲತಾಣದಲ್ಲಿ ಪ್ರವೇಶ ಪತ್ರ ಪಡೆಯಬಹುದಾಗಿದೆ.
ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಗೊಂಡಿದ್ದು, ಆಗಸ್ಟ್ 12ರಿಂದ 25ರವರೆಗೆ ದ್ವಿತೀಯ ಪಿಯು ಪೂರಕ ಪರೀಕ್ಷೆ ನಡೆಯಲಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಾಲತಾಣದಲ್ಲಿ ಪ್ರವೇಶ ಪತ್ರ ಪಡೆಯಬಹುದಾಗಿದೆ. ಜೂನ್ 18 ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಯಲ್ಲಿ ಅನುತ್ತೀರ್ಣರದವರು ಈಗ ಮತ್ತೆ ಪರೀಕ್ಷೆ ಬರೆಯಬಹುದಾಗಿದೆ. ಈ ಸಂಬಂಧ ಪದವಿ ಪೂರ್ವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಗೊಳಿಸಿದೆ.
2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗಿದೆ.
ಆಗಸ್ಟ್ 12ರಿಂದ ಆಗಸ್ಟ್ 25ರ ವರೆಗೆ ಪರೀಕ್ಷೆ ನಡೆಯಲಿವೆ.@BSBommai pic.twitter.com/RzkTl5CNgA
— B.C Nagesh (@BCNagesh_bjp) July 15, 2022
ಏ.23ರಿಂದ ಮೇ 18ರವರೆಗೆ ದ್ವಿತೀಯ ಪಿಯು ಪರೀಕ್ಷೆ ನಡೆದಿತ್ತು. ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ನಡೆದಿದ್ದ ಪಿಯು ಪರೀಕ್ಷೆ ನಡೆದಿತ್ತು.
ಪರೀಕ್ಷೆ ಬರೆದ ವಿದ್ಯಾರ್ಥಿಗಳ ಮಾಹಿತಿ ಹೀಗಿದೆ
ಕಳೆದ ಎಪ್ರಿಲ್ 23 ರಿಂದ ಮೇ 18ರವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆಗಾಗಿ ಒಟ್ಟು 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ರು. ಈ ಪೈಕಿ 3,46,936 ಬಾಲಕರು ಹಾಗೂ 3,37,319 ಬಾಲಕಿಯರು ದಾಖಲಾಗಿದ್ದರು. ರಾಜ್ಯಾದ್ಯಂತ ಒಟ್ಟು 1,076 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಕಲಾ ವಿಭಾಗಕ್ಕೆ 2,28,167 ಮಂದಿ, ವಾಣಿಜ್ಯ ವಿಭಾಗಕ್ಕೆ 2,45,519 ಮಂದಿ ಮತ್ತು ವಿಜ್ಞಾನ ವಿಭಾಗದಲ್ಲಿ 2,10,569 ಮಂದಿ ಪರೀಕ್ಷೆಗೆ ಕುಳಿತಿದ್ದರು.
ಪರೀಕ್ಷೆಯ ಮೊದಲ ದಿನ ಗೈರು ಹಾಜರಾದವರು
ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನ ತರ್ಕಶಾಸ್ತ್ರ, ಬ್ಯುಸಿನೆಸ್ ಸ್ಟಡೀಸ್ ವಿಷಯಗಳ ಪರೀಕ್ಷೆ ನಡೆಡಿದ್ದವು. ಪರೀಕ್ಷೆಯ ಮೊದಲ ದಿನವೇ 11,379 ವಿದ್ಯಾರ್ಥಿಗಳು ಹಲವು ಕಾರಣಗಳಿಂದ ಪರೀಕ್ಷೆಗೆ ಗೈರಾಗಿದ್ದಾರೆ. ತರ್ಕಶಾಸ್ತ್ರ ಪರೀಕ್ಷೆಗೆ 620 ವಿದ್ಯಾರ್ಥಿಗಳು ನೋಂದಾಯಿಸಿದ್ದು, 552 ಹಾಜರಾಗಿದ್ದರೆ 68 ವಿದ್ಯಾರ್ಥಿಗಳು ಗೈರುಹಾಜರಾಗಿದ್ದಾರೆ. ಬ್ಯುಸಿನೆಸ್ ಸ್ಟಡೀಸ್ ಪರೀಕ್ಷೆಗೆ 2,38,764 ವಿದ್ಯಾರ್ಥಿಗಳು ನೋಂದಾಯಿಸಿದರೆ 2,27,453 ಹಾಜರಾಗಿದ್ದು 11,311 ಗೈರು ಹಾಜರಾಗಿದ್ದಾರೆ.
ಕನ್ನಡ ಭಾಷೆ ಪರೀಕ್ಷೆಗೆ ಗೈರು ಹಾಜರಾದವರು
ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಕನ್ನಡ ಭಾಷಾ ವಿಷಯದ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದವರ ಪೈಕಿ 15,884 ಮಂದಿ ಹಾಜರಾಗಿದ್ದು, 1723 ಅಭ್ಯರ್ಥಿಗಳು ಗೈರಾಗಿದ್ದರು.
Published On - 6:32 pm, Fri, 15 July 22