2nd PUC Supplementary Exam: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ (2nd PUC Supplementary Exam) ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮೇ 22ರಿಂದ ಜೂನ್ 2ರವರೆಗೆ ಪರೀಕ್ಷೆಗಳು ನಡೆಯಲಿವೆ. ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ದಿನಾಂಕ ಏಪ್ರಿಲ್ 21ರಿಂದ ಏಪ್ರಿಲ್ 26ರ ವರೆಗೆ ಅವಕಾಶ ನೀಡಲಾಗಿತ್ತು. ಅಗತ್ಯವಿರುವ ಕನಿಷ್ಠ ಅಂಕಗಳನ್ನು ಪಡೆಯಲು ವಿಫಲರಾದ ಅಭ್ಯರ್ಥಿಗಳು ಪೂರಕ ಪರೀಕ್ಷೆಯಲ್ಲಿ ಕಾಣಿಸಿಕೊಳ್ಳುವ ಮೂಲಕ ತಮ್ಮ ವರ್ಷವನ್ನು ಉಳಿಸಬಹುದು. ಪರೀಕ್ಷೆಗೆ ಹಾಜರಾಗಲು ಇದು ಮೊದಲ ಮತ್ತು ಕೊನೆಯ ಅವಕಾಶ ಎಂದು ವಿದ್ಯಾರ್ಥಿಗಳು ತಿಳಿದಿರಬೇಕು.
ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 21 ರಂದು ಪ್ರಕಟವಾಗಿತ್ತು. ಪರೀಕ್ಷೆಗಳು ಮಾರ್ಚ್ 9 ರಿಂದ 29 ರವರೆಗೆ ನಡೆದಿದ್ದವು. ಈ ವರ್ಷ, ವಿಜ್ಞಾನ ವಿಭಾಗದಲ್ಲಿ 2,44,129 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,269 ವಿದ್ಯಾರ್ಥಿಗಳ ನೋಂದಣಿಗಳು ನೋಂದಣಿ ಮಾಡಿಕೊಂಡಿದ್ದರು. ಕಲಾ ವಿಭಾಗದಲ್ಲಿ 2,34,815 ವಿದ್ಯಾರ್ಥಿಗಳು 2023ರ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು.
ಈ ವರ್ಷ ಪಿಯುಸಿ ಪರೀಕ್ಷೆಯಲ್ಲಿ ಒಟ್ಟು ಶೇ.74.67 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಸ್ಟ್ರೀಮ್‌ವಾರು, ವಿಜ್ಞಾನ ವಿಭಾಗವು 85.71 ಶೇಕಡಾ, ವಾಣಿಜ್ಯ – 75.89 ಶೇಕಡಾ, ಕಲೆ – 61.22 ಶೇಕಡಾದೊಂದಿಗೆ ಉತ್ತಮ ಸಾಧನೆ ಮಾಡಿದೆ.
ಮತ್ತಷ್ಟು ಶೈಕ್ಷಣಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:21 pm, Tue, 2 May 23