3 ವರ್ಷಗಳ ಡಿಪ್ಲೊಮಾ ನೇರ ನೇಮಕಾತಿ, ಅನುಕಂಪದ ನೇಮಕಾತಿ, ಉನ್ನತ ಶಿಕ್ಷಣ ಪಡೆಯಲು ಪಿಯುಸಿಗೆ ಸಮ

TV9 Digital Desk

| Edited By: guruganesh bhat

Updated on:Sep 30, 2021 | 8:46 PM

2015ಕ್ಕಿಂತ ಹಿಂದಿನ‌ ವರ್ಷಗಳಲ್ಲಿ ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದು ಕಡ್ಡಾಯವಾಗಿದೆ.

3 ವರ್ಷಗಳ ಡಿಪ್ಲೊಮಾ ನೇರ ನೇಮಕಾತಿ, ಅನುಕಂಪದ ನೇಮಕಾತಿ, ಉನ್ನತ ಶಿಕ್ಷಣ ಪಡೆಯಲು ಪಿಯುಸಿಗೆ ಸಮ
ಸಾಂಕೇತಿಕ ಚಿತ್ರ

ಬೆಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆಯ 3 ವರ್ಷಗಳ ಡಿಪ್ಲೊಮಾ ಕೋರ್ಸ್​ಅನ್ನು ನೇರ ನೇಮಕಾತಿ ಅಥವಾ ಅನುಕಂಪದ ಆಧಾರದ ಮೇಲೆ ನೇಮಕಾತಿ ಹೊಂದಲು ಮತ್ತು ಉನ್ನತ ಶಿಕ್ಷಣ ಪಡೆಯಲು ಪಿಯುಸಿಗೆ ಸಮ ಎಂದು ರಾಜ್ಯ ಸರ್ಕಾರ ಘೋಷಿಸಿದೆ. ಕೆಪಿಎಎಸ್ಸಿ‌ ನಡೆಸುವ ಇಲಾಖಾ‌ ಪರೀಕ್ಷೆಗಳ‌ ಜತೆಗೆ ಕನ್ನಡ ಭಾಷಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದು ಕಡ್ಡಾಯ‌ವಾಗಲಿದೆ. 2015ಕ್ಕಿಂತ ಹಿಂದಿನ‌ ವರ್ಷಗಳಲ್ಲಿ ಡಿಪ್ಲೊಮಾ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆಯಲ್ಲಿ ತೇರ್ಗಡೆಯಾಗುವುದು ಕಡ್ಡಾಯವೆಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಬಿಇ ವ್ಯಾಸಂಗದ ಲ್ಯಾಟರಲ್ ಎಂಟ್ರಿಗೂ ಈ ಮೂಲಕ ಅವಕಾಶ ನೀಡಲಾಗಿದೆ. ಈ ಕುರಿತು ನಿರ್ಧರಿಸಲೆಂದು ಈಮುನ್ನ ಸಮಿತಿ ರಚಿಸಲು ಆದೇಶಿಸಲಾಗಿತ್ತು. ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಚರ್ಚೆ ನಡೆದಿದ್ದು, ಸಮಿತಿಯು ವಿಸ್ತಾರವಾಗಿ ಚರ್ಚಿ, ಸಾಧಕ-ಬಾಧಕಗನ್ನು ಪರಿಗಣಿಸಿ ದಿನಾಂಕ 31-03-2021ರಂದು ಸರ್ಕಾರಕ್ಕೆ ಸಭಾ ನಡವಳಿಯೊಂದಿಗೆ ವರದಿ ಸಲ್ಲಿಸಿದೆ.

Karnataka School Reopen: ದಸರಾ ಬಳಿಕ 1ರಿಂದ 5ನೇ ತರಗತಿ ಆರಂಭಕ್ಕೆ ಚಿಂತನೆ: ಶಿಕ್ಷಣ ಸಚಿವ ಬಿ ಸಿ ನಾಗೇಶ್ ದಸರಾ ಬಳಿಕ 1 ರಿಂದ 5ನೇ ತರಗತಿ ಆರಂಭಕ್ಕೆ ಚಿಂತನೆ ನಡೆಸಲಾಗಿದೆ ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು. ಈ ವಾರದಲ್ಲಿ ಸಿಎಂ ಹಾಗೂ ಕೊವಿಡ್ ತಾಂತ್ರಿಕಾ ಸಲಹಾ ಸಮಿತಿ ಚರ್ಚೆ ನಡೆಸಲಾಗುವುದು. ಸಭೆಯಲ್ಲಿ ಒಂದರಿಂದ ಐದರವರೆಗೆ ಶಾಲೆಗಳ ಆರಂಭಕ್ಕೆ ಮನವಿ ಮಾಡುತ್ತೇವೆ. ಆದರೆ ಸದ್ಯ ವೈರಲ್ ಇನ್ಫೆಕ್ಷನ್ ಡೆಂಘೀ ಜ್ವರದ ಕಾಟ ಇದೆ. ಹೀಗಾಗಿ 3,4,5 ನೇ ತರಗತಿ ಆರಂಭಿಸಲಾದರೂ ಅನುಮತಿ ನೀಡುವಂತೆ ಮನವಿ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.

ತಮಿಳುನಾಡು: 1ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ನ 1ರಿಂದ ಶಾಲೆ ಆರಂಭ ತಮಿಳುನಾಡಿನಲ್ಲಿ 1ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿಯೇ ಪಾಠ ಆರಂಭಿಸಲು ಸರ್ಕಾರ ನಿರ್ಧರಿಸಿದೆ. ಒಂದೂವರೆ ವರ್ಷದ ನಂತರ (19 ತಿಂಗಳು) ಅಂದರೆ ನವೆಂಬರ್ 1ರಿಂದ ಶಾಲೆಗಳು ಆರಂಭವಾಗಲಿವೆ. 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ ಕಳೆದ ಸೆ.1ರಿಂದಲೇ ಭೌತಿಕ ತರಗತಿಗಳು ನಡೆಯುತ್ತಿವೆ.

ದೀರ್ಘಾವಧಿಗೆ ಶಾಲೆಗಳು ನಡೆಯದ ಕಾರಣ ಕಲಿಕೆಯಲ್ಲಿ ಸಾಕಷ್ಟವಾಗಿದೆ ಎಂದು ವೈದ್ಯಕೀಯ ಪರಿಣಿತರು, ಪೋಷಕರು ಮತ್ತು ಶಿಕ್ಷಣ ತಜ್ಞರು ಅಭಿಪ್ರಾಯಟ್ಟಿದ್ದರು. ಅವರ ದೃಷ್ಟಿಕೋನವನ್ನು ಗಮನದಲ್ಲಿರಿಸಿಕೊಂಡು 1ರಿಂದ 8ನೇ ತರಗತಿವರೆಗಿನ ಎಲ್ಲ ಶಾಲೆಗಳಲ್ಲಿ ಭೌತಿಕ ತರಗತಿಗಳನ್ನು ನವೆಂಬರ್ 1ರಿಂದ ಆರಂಭಿಸಲು ಅನುಮತಿ ನೀಡಲಾಗಿದೆ. ಕೊವಿಡ್-19 ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಅನುಸರಿಸಿ ಶಾಲೆಗಳನ್ನು ನಡೆಸಬೇಕು ಎಂದು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: 

ಮೀರಾಬಾಯಿ ಕೊಪ್ಪಿಕರ್ ಹಾಗೂ ಸಿದ್ದಗಂಗಾ ಶಿಕ್ಷಣ ಸಂಸ್ಥೆಗೆ ಎರಡು ಸಾಲಿನ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ

World Heart Day 2021: ಇಂದು ವಿಶ್ವ ಹೃದಯ ದಿನ; ಇತಿಹಾಸ ಮಹತ್ವದ ಜತೆ ಉತ್ತಮ ಆರೋಗ್ಯಕ್ಕಾಗಿ ತಿಳಿಯಬೇಕಾದ ಮಾಹಿತಿ ಇಲ್ಲಿದೆ

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada