Kannada News Education 5 6 and 9th Classes state level valuation test exam provisional Time Table announced
5,8,9ನೇ ತರಗತಿ ಮೌಲ್ಯಾಂಕನ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
2023-24ನೇ ಸಾಲಿನ 5,8 ಮತ್ತು 9ನೇ ತರಗತಿಯ ಮೌಲ್ಯಂಕನ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಮಕ್ಕಳಿಗೆ ನಡೆಸಲಾಗುವ ಮೌಲ್ಯಂಕನ ಪರೀಕ್ಷೆಗಳು ಯಾವ ತರಗತಿಗೆ ಯಾವಾಗ ನಡೆಯಲಿವೆ ಎನ್ನುವ ವಿವರ ಈ ಕೆಳಗಿನಂತಿದೆ.
ಬೆಂಗಳೂರು, (ಡಿಸೆಂಬರ್ 26): 2023-24ನೇ ಸಾಲಿನ 5, 8 ಮತ್ತು 9ನೇ ತರಗತಿಯ ಮೌಲ್ಯಂಕನ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟವಾಗಿದೆ. ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಮಕ್ಕಳಿಗೆ ನಡೆಸಲಾಗುವ ಸಂಕಲನಾತ್ಮಕ ಮೌಲ್ಯಾಂಕನ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.