AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Public Exam 2023: ಸುಪ್ರೀಂಕೋರ್ಟ್ ವಿಚಾರಣೆ ನಡುವೆಯೇ ಇಂದಿನಿಂದ 5 ಮತ್ತು 8ನೇ ತರಗತಿ ಬೋರ್ಡ್‌ ಪರೀಕ್ಷೆ ಆರಂಭ

ಪರೀಕ್ಷೆ ಸಂಬಂಧ ಇಂದು ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಗೊಂದಲದ ನಡುವೆ ಪರೀಕ್ಷೆ ನಡೆಸಲು ಇಲಾಖೆ ಮುಂದಾಗಿದೆ.

Public Exam 2023: ಸುಪ್ರೀಂಕೋರ್ಟ್ ವಿಚಾರಣೆ ನಡುವೆಯೇ ಇಂದಿನಿಂದ 5 ಮತ್ತು 8ನೇ ತರಗತಿ ಬೋರ್ಡ್‌ ಪರೀಕ್ಷೆ ಆರಂಭ
ಪ್ರಾತಿನಿಧಿಕ ಚಿತ್ರ Image Credit source: asianetnews.com
ಆಯೇಷಾ ಬಾನು
| Updated By: Digi Tech Desk|

Updated on:Mar 27, 2023 | 9:49 AM

Share

ಬೆಂಗಳೂರು: ಇಂದಿನಿಂದ ಇದೇ ಮೊದಲ ಬಾರಿಗೆ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್‌ ಪರೀಕ್ಷೆಗಳು ಆರಂಭವಾಗಿವೆ. ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಖಾಸಗಿ ಶಾಲೆಗಳ 5, 8ನೇ ತರಗತಿ ಮಕ್ಕಳಿಗೆ ಪರೀಕ್ಷೆ ನಡೆಯಲಿದೆ. ಇದಕ್ಕಾಗಿ ಕರ್ನಾಟಕ ರಾಜ್ಯ ಶಾಲಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಪರೀಕ್ಷೆಗೆ ಎಲ್ಲಾ ರೀತಿಯ ಸಿದ್ಧತೆಯನ್ನು ಮಾಡಿಕೊಂಡಿದೆ. 5ನೇ ತರಗತಿ ಮಕ್ಕಳಿಗೆ ಇಂದಿನಿಂದ ಮಾ.30ರವರೆಗೆ ಪರೀಕ್ಷೆ ನಡೆಯಲಿದೆ. ಹಾಗೂ 8ನೇ ತರಗತಿ ಮಕ್ಕಳಿಗೆ ಏಪ್ರಿಲ್ 1ರವರೆಗೆ ಪರೀಕ್ಷೆ ನಡೆಯಲಿದೆ.

ಇನ್ನು ಮತ್ತೊಂದೆಡೆ ಪರೀಕ್ಷೆ ಸಂಬಂಧ ಇಂದು ಸುಪ್ರೀಂಕೋರ್ಟ್​ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ. ಗೊಂದಲದ ನಡುವೆ ಪರೀಕ್ಷೆ ನಡೆಸಲು ಇಲಾಖೆ ಮುಂದಾಗಿದೆ. ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನೇತೃತ್ವದಲ್ಲಿ ಪರೀಕ್ಷೆ ನಡೆಯಲಿದೆ. ಆಯಾ ಶಾಲೆಗಳೇ ಪರೀಕ್ಷಾ ಕೇಂದ್ರಗಳಾಗಿದ್ದು, ಸುಮಾರು 20 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಬಹುತೇಕ ಎಲ್ಲ ಪರೀಕ್ಷೆಗಳು ಮಧ್ಯಾಹ್ನದ ಅವಧಿಯಲ್ಲಿ ನಡೆಯಲಿವೆ.

ಇದನ್ನೂ ಓದಿ: 5,8th Public Exam 2023: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ವೇಳಾಪಟ್ಟಿ ಪ್ರಕಟ

5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ದಿನವೊಂದಕ್ಕೆ ಒಂದು ವಿಷಯದಂತೆ ಮೌಲ್ಯಾಂಕನ ನಡೆಸಲಾಗುತ್ತದೆ. ಪ್ರತಿ ವಿಷಯದ ಮೌಲ್ಯಂಕನಕ್ಕೆ ಎರಡು ಗಂಟೆಗಳ ಅವಧಿಯನ್ನು ನಿಗದಿಪಡಿಸಲಾಗಿದೆ. ತರಗತಿವಾರು ಪ್ರತಿ ವಿಷಯಕ್ಕೆ 40 ಅಂಕಗಳ ಲಿಖಿತ ಮೌಲ್ಯಾಂಕನಕ್ಕೆ 28 ಪ್ರಶ್ನೆಗಳನ್ನೊಳಗೊಂಡ 1 ಅಂಕದ 20 ಬಹುಆಯ್ಕೆ ಪ್ರಶ್ನೆಗಳು, 2 ಅಂಕಗಳ 5, 3 ಅಂಕಗಳ 2 ಹಾಗೂ 4 ಅಂಕಗಳ 1 ವಿವರಣಾತ್ಮಕ ಪ್ರಶ್ನೆಗಳು ಪ್ರತ್ಯಕ ಪ್ರಶ್ನೋತ್ತರ ಪತ್ರಿಕೆಯನ್ನು ನೀಡಲಾಗುತ್ತದೆ. 10 ಅಂಕಗಳ ಮೌಖಿಕ ಮೌಲ್ಯಾಂಕನವನ್ನು ಶಾಲಾ ಹಂತದಲ್ಲಿಯೇ ನಿರ್ವಹಿಸಲು ತಿಳಿಸಲಾಗಿದೆ. 40 ಅಂಕಗಳ ಲಿಖಿತ ಮೌಲ್ಯಾಂಕನ ಮತ್ತು 10 ಅಂಕಗಳ ಮೌಖಿಕ ಮೌಲ್ಯಾಂಕನದಲ್ಲಿ ವಿದ್ಯಾರ್ಥಿಗಳು ಗಳಿಸಿದ ಅಂಕಗಳನ್ನು 20 ಅಂಕಗಳಿಗೆ ಪರಿವರ್ತಿಸುವುದು. ಇಂದು ಸುಪ್ರೀಕೋರ್ಟ್ ಐದು ಹಾಗೂ ಎಂಟನೆ ತರಗತಿಗೆ ಪರೀಕ್ಷೆ ವಿಚಾರವಾಗಿ ವಿಚಾರಣೆ ನಡೆಸಲಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 9:35 am, Mon, 27 March 23

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ