AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5,8th Public Exam 2023: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ವೇಳಾಪಟ್ಟಿ ಪ್ರಕಟ

2022-23ನೇ ಸಾಲಿನ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟ ಮಾಡಿದೆ.

5,8th Public Exam 2023: 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ವೇಳಾಪಟ್ಟಿ ಪ್ರಕಟ
ಪ್ರಾತಿನಿಧಿಕ ಚಿತ್ರImage Credit source: vijaykarnataka.com
ಗಂಗಾಧರ​ ಬ. ಸಾಬೋಜಿ
|

Updated on:Mar 16, 2023 | 9:21 PM

Share

ಬೆಂಗಳೂರು: 2022-23ನೇ ಸಾಲಿನ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ (Board exams) ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯನಿರ್ಣಯ ಮಂಡಳಿ ವೇಳಾಪಟ್ಟಿ ಪ್ರಕಟ ಮಾಡಿದೆ. ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್​ನಿಂದ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಮಾ. 27 ರಿಂದ ಏ. 1ರವರೆಗೆ ಬೋರ್ಡ್​ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಇನ್ನು 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಅನುಮತಿ ನೀಡಿ ಕರ್ನಾಟಕ ಹೈಕೋರ್ಟ್ (Karnataka High Court) ಬುಧವಾರ ತೀರ್ಪು ನೀಡಿದೆ. ಬೋರ್ಡ್ ಪರೀಕ್ಷೆ ನಡೆಸಲು ಶಿಕ್ಷಣ ಕಾಯ್ದೆಯಡಿ ನಿರ್ಬಂಧವಿಲ್ಲ ಎಂದಿರುವ ಹೈಕೋರ್ಟ್ ವಿಭಾಗೀಯ ಪೀಠ, ಈ ಹಿಂದೆ ಏಕಸದಸ್ಯ ಪೀಠ ನೀಡಿದ್ದ ಆದೇಶಕ್ಕೆ ತಡೆ ನೀಡಿದೆ. ಮಾರ್ಚ್ 27ರಿಂದ ಪರೀಕ್ಷೆ ನಡೆಸುವಂತೆ ಸರ್ಕಾರಕ್ಕೆ ವಿಭಾಗೀಯ ಪೀಠ ಸೂಚನೆ ನೀಡಿತ್ತು.

ಪಠ್ಯಕ್ರಮದಲ್ಲಿ ಉಲ್ಲೇಖಿಸಿರುವುದನ್ನು ಬಿಟ್ಟು ಬೇರೆ ಪ್ರಶ್ನೆಗಳನ್ನು ಕೇಳುವಂತಿಲ್ಲ, ಯಾರನ್ನೂ ಅನುತ್ತೀರ್ಣಗೊಳಿಸುವಂತಿಲ್ಲ ಎಂದು ಪೀಠ ನಿರ್ದೇಶನ ನೀಡಿದೆ. ಜತೆಗೆ, ಪರೀಕ್ಷೆಯ ಫಲಿತಾಂಶವನ್ನು ಸಾರ್ವಜನಿಕವಾಗಿ ಪ್ರಕಟಿಸುವಂತಿಲ್ಲ. ಫಲಿತಾಂಶವನ್ನು ಶಾಲೆಗೆ ಮಾತ್ರವೇ ತಲುಪಿಸಬೇಕು ಎಂದೂ ಸೂಚಿಸಿದೆ.

ಇದನ್ನೂ ಓದಿ: 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ವಿಚಾರ: ಮಾರ್ಚ್ 14ಕ್ಕೆ‌ ವಿಚಾರಣೆ ಮುಂದೂಡಿದ ಹೈಕೋರ್ಟ್

5ನೇ ತರಗತಿ ವೇಳಾಪಟ್ಟಿ

  • ಮಾರ್ಚ್ 27 ಸೋಮವಾರ- ಪ್ರಥಮ ಭಾಷೆ, ಕನ್ನಡ, ಇಂಗ್ಲಿಷ್​, ಹಿಂದಿ, ಉರ್ದು, ಮರಾಠಿ, ತೆಲಗು, ತಮಿಳು.
  • ಮಾರ್ಚ್ 28 ಮಂಗಳವಾರ- ದ್ವಿತೀಯ ಭಾಷೆ, ಇಂಗ್ಲಿಷ್​​, ಕನ್ನಡ.
  • ಮಾರ್ಚ್ 29 ಬುಧವಾರ- ಕೋರ್​ ವಿಷಯ, ಪರಿಸರ ಅಧ್ಯಯನ.
  • ಮಾರ್ಚ್ 30 ಗುರುವಾರ- ಕೋರ್​ ವಿಷಯ, ಗಣಿತ.

8ನೇ ತರಗತಿ ವೇಳಾಪಟ್ಟಿ

  • ಮಾರ್ಚ್ 27 ಸೋಮವಾರ- ಕನ್ನಡ, ಇಂಗ್ಲಿಷ್, ಇಂಗ್ಲಿಷ್ (NCERT), ಹಿಂದಿ, ಉರ್ದು, ಮರಾಠಿ, ತೆಲಗು, ತಮಿಳು, ಸಂಸ್ಕೃತ.
  • ಮಾರ್ಚ್ 28 ಮಂಗಳವಾರ- ದ್ವಿತೀಯ ಭಾಷೆ, ಇಂಗ್ಲಿಷ್​​, ಕನ್ನಡ.
  • ಮಾರ್ಚ್ 29 ಬುಧವಾರ- ಹಿಂದಿ, ಹಿಂದಿ (NCERT), ಕನ್ನಡ, ಇಂಗ್ಲಿಷ್​, ಅರೇಬಿಕ್​, ಪರ್ಪಿಯನ್​ ಉರ್ದು, ಸಂಸ್ಕೃತ, ಕೊಂಕಣಿ, ತುಳು.
  • ಮಾರ್ಚ್ 30 ಗುರುವಾರ- ಕೋರ್​ ವಿಷಯ, ಗಣಿತ.
  • ಮಾರ್ಚ್ 31 ಶುಕ್ರವಾರ- ಕೋರ್​ ವಿಷಯ, ವಿಜ್ಞಾನ.
  • ಏಪ್ರಿಲ್​ 01 ಶನಿವಾರ- ಕೋರ್​ ವಿಷಯ, ಸಮಾಜ ವಿಜ್ಞಾನ.

ಹೈಕೋರ್ಟ್ ಮೊರೆ ಹೋಗಿದ್ದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ

ಈ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ನಿರ್ಧರಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪಬ್ಲಿಕ್ ಪರೀಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು. 2022-23ನೇ ಸಾಲಿನ 5 ಮತ್ತು 8ನೇ ತರಗತಿ ವಿದ್ಯಾರ್ಥಿಗಳ ಶೈಕ್ಷಣಿಕ ಮೌಲ್ಯಮಾಪನ ವಿಧಾನವನ್ನು ಬದಲಿಸುವ ಕುರಿತಂತೆ 12 ಡಿಸೆಂಬರ್​ 2022 ರಂದು ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ಕ್ರಮ ಪ್ರಶ್ನಿಸಿ ರುಪ್ಸಾ ತಕರಾರು ಅರ್ಜಿ ಸಲ್ಲಿಸಿತ್ತು.

ಇದನ್ನೂ ಓದಿ: 5 ಮತ್ತು 8ನೇ ತರಗತಿಯ ಬೋರ್ಡ್ ಪರೀಕ್ಷೆ ರದ್ದು: ಹೈಕೋರ್ಟ್ ಏಕಸದಸ್ಯ ಪೀಠದಿಂದ ಆದೇಶ

ವಿಚಾರಣೆ ನಡೆಸಿದ್ದ ಏಕ ಸದಸ್ಯ ಪೀಠವು ಮಧ್ಯಂತ ತಡೆ ನೀಡಲು ನಿರಾಕರಿಸಿತ್ತು. ಬಳಿಕ ರುಪ್ಸಾ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್​​ ಎಸ್​. ಕಿಣಗಿ ಅವರ ನೇತೃತ್ವದ ವಿಭಾಗೀಯ ಪೀಠವು ಪ್ರಸಕ್ತ ಶೈಕ್ಷಣಿಕ ಸಾಲಿನ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸದಂತೆ ಸೂಚಿಸಿದೆ. ಈ ಹಿನ್ನೆಲೆ ಏಕಸದಸ್ಯ ಪೀಠ ಮಾ. 10 ರಂದು ತೀರ್ಪು ನೀಡಿತ್ತು.

ಏನಿದು ಪ್ರಕರಣ?

ಪ್ರಸಕ್ತ ಶೈಕ್ಷಣಿಕ ವರ್ಷದಿಂದ 5 ಮತ್ತು 8ನೇ ತರಗತಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿತ್ತು. ಇದನ್ನು ವಿರೋಧಿಸಿ ಪೋಷಕರ ಸಂಘಟನೆ ಕೋರ್ಟ್ ಮೊರೆ ಹೋಗಿತ್ತು. ಪೋಷಕರ ಮನವಿಗೆ ಸಮ್ಮತಿಸಿದ್ದ ನ್ಯಾಯಾಲಯ ಸರ್ಕಾರದ ಆದೇಶಕ್ಕೆ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡುವಂತೆ ಕೋರಿತ್ತು. ವಿಚಾರಣೆಯನ್ನು ಪೀಠವು ಮಾರ್ಚ್​ 14ಕ್ಕೆ ಮುಂದೂಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:09 pm, Thu, 16 March 23

Follow Us
ಗಂಗಾಧರ​ ಬ. ಸಾಬೋಜಿ
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್