ನವದೆಹಲಿ, ಫೆಬ್ರವರಿ 25: ಒಂದನೇ ತರಗತಿ ಪ್ರವೇಶಾತಿಗೆ (admission) ಮಕ್ಕಳ ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ನಿಗದಿ ಮಾಡಿ ಕೇಂದ್ರ ಶಿಕ್ಷಣ ಸಚಿವಾಲಯ ನಿರ್ದೇಶನ ನೀಡಿದೆ. 2024-25ರ ಸಾಲಿನ ಪ್ರವೇಶಕ್ಕೆ ಕನಿಷ್ಠ ಆರು ವರ್ಷ ವಯಸ್ಸಿನವರಾಗಿರುವುದನ್ನು ಖಚಿತಪಡಿಸಿಕೊಳ್ಳುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯೂ ಸೂಚನೆ ನೀಡಿದೆ. ಈ ಕುರಿತಾಗಿ ಪತ್ರ ಬರೆಯಲಾಗಿದ್ದು, ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಮಕ್ಕಳ ಹಕ್ಕು (RTE) ಕಾಯ್ದೆಯ 2009 ರ ನಿಬಂಧನೆಗಳ ಪ್ರಕಾರ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
ರಾಷ್ಟ್ರೀಯ ಶಿಕ್ಷಣ ನೀತಿ (NEP) 2020ರ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣದ ಹಕ್ಕು (RTE) ಕಾಯಿದೆ, 2009 ರಲ್ಲಿ ಒಳಗೊಂಡಿರುವ ನಿಬಂಧನೆಗಳ ಪ್ರಕಾರ ಒಂದನೇ ತರಗತಿ ಪ್ರವೇಶಾತಿಗೆ ಮಕ್ಕಳ ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ನಿಗದಿ ಮಾಡಿದ್ದು, ಪ್ರವೇಶಾತಿಗೂ ಮುನ್ನ ಖಚಿತಪಡಿಸಿಕೊಳ್ಳುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ವಿನಂತಿಸಲಾಗಿದೆ.
.@EduMinOfIndia has written to all states and UTs requesting them to ensure that the age of admission to Grade 1 is 6+ years from the 2024-25 session onwards.
This is as per the provisions in the #NationalEducationPolicy 2020 and the Right of Children to Free and Compulsory… pic.twitter.com/942IAmyfmV
— All India Radio News (@airnewsalerts) February 25, 2024
2024-25 ಸಾಲಿನ ಹೊಸ ಪ್ರವೇಶಾತಿಗಳು ಶೀಘ್ರದಲ್ಲೇ ಪ್ರಾರಂಭವಾಗಲಿದೆ. ನಿಮ್ಮ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಒಂದನೇ ತರಗತಿ ಪ್ರವೇಶಾತಿಗೆ ಮಕ್ಕಳ ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ನಿಗದಿ ಪಡಿಸಲಾಗಿದೆ ಎಂದು ನಿರೀಕ್ಷಿಸಲಾಗಿದೆ. ಈ ವಿಷಯವನ್ನು ಪರಿಶೀಲಿಸಲು ಮತ್ತು ಆದೇಶದ ಅನುಷ್ಠಾನದ ಸ್ಥಿತಿಯನ್ನು ಹಂಚಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಕಾರ್ಯದರ್ಶಿ ಸೂಚಿಸಲಾಗಿದೆ.
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:05 pm, Sun, 25 February 24