Alert: ಸರ್ಕಾರಿ ಔಷಧ ವಿಜ್ಞಾನ ಮಹಾವಿದ್ಯಾಲಯದಲ್ಲಿ ಬಿ ಫಾರ್ಮಾ ಕೋರ್ಸ್ಗೆ ಜ 27ರಂದು ಪ್ರವೇಶ ಪರಿಶೀಲನೆ
BPharma in GCP: ವಿದ್ಯಾರ್ಥಿಗಳು ಕಾಲೇಜಿಗೆ ಬರುವಾಗ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಅಂಕಪಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿಇಒ) ದೃಢೀಕರಿಸಿದ ವ್ಯಾಸಂಗ ಪ್ರಮಾಣ ಪತ್ರ ಹಾಗೂ ಸಿಇಟಿ ಱಂಕ್ ಪ್ರಮಾಣ ಪತ್ರವನ್ನು ತರಬೇಕು
ಬೆಂಗಳೂರು: ನಗರದ ಸರ್ಕಾರಿ ಔಷಧ ವಿಜ್ಞಾನ ಮಹಾವಿದ್ಯಾಲಯದಲ್ಲಿ ಬಿ.ಫಾರ್ಮಾ ಪ್ರಥಮ ವರ್ಷದ ಕೋರ್ಸ್ಗಳಿಗೆ ಸೇರಲು ಇಚ್ಛಿಸುವ ವಿದ್ಯಾರ್ಥಿಗಳು ಜನವರಿ 27ರಂದು ಮೂಲ ದಾಖಲಾತಿಗಳೊಂದಿಗೆ ಆಯ್ಕೆ ಸಮಿತಿ ಎದುರು ಹಾಜರಾಗಬೇಕು ಎಂದು ವಿದ್ಯಾಲಯದ ಪ್ರಾಚಾರ್ಯರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳು ಕಾಲೇಜಿಗೆ ಬರುವಾಗ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಅಂಕಪಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು (ಬಿಇಒ) ದೃಢೀಕರಿಸಿದ ವ್ಯಾಸಂಗ ಪ್ರಮಾಣ ಪತ್ರ ಹಾಗೂ ಸಿಇಟಿ ಱಂಕ್ ಪ್ರಮಾಣ ಪತ್ರವನ್ನು ತರಬೇಕು. ಆಯ್ಕೆಯಾದ ವಿದ್ಯಾರ್ಥಿಗಳು ಅದೇ ದಿನ ₹ 14,450 ಪಾವತಿಸಿ ಕಾಲೇಜಿಗೆ ಪ್ರವೇಶ ಪಡೆಯಬೇಕು ಎಂದು ಸೂಚಿಸಲಾಗಿದೆ.
ಮಾಹಿತಿಗೆ ದೂರವಾಣಿ ಸಂಖ್ಯೆ 080 2222 2681, ಇಮೇಲ್ principal.gcp@gmail.com, ಜಾಲತಾಣ www.govtcopblr.org ನೋಡಬಹುದು.
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯಲ್ಲಿ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ
ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (CISF) ಹೆಡ್ ಕಾನ್ಸ್‌ಟೇಬಲ್ ಜಿಡಿ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ವಿಭಾಗದಲ್ಲಿ ಒಟ್ಟು 249 ಹುದ್ದೆಗಳು ಖಾಲಿಯಿದ್ದು, ಪುರುಷರು ಮತ್ತು ಮಹಿಳೆಯರಿಗಾಗಿ ಪ್ರತ್ಯೇಕ ನೇಮಕಾತಿ ನಡೆಯಲಿದೆ. ಅದರಂತೆ ಆಸಕ್ತ ಅಭ್ಯರ್ಥಿಗಳು ಅಭ್ಯರ್ಥಿಗಳು CISF-cisf.gov.in ನ ಅಧಿಕೃತ ವೆಬ್‌ಸೈಟ್‌ನಲ್ಲಿ ಹೆಚ್ಚಿನ ಮಾಹಿತಿಯನ್ನು ಪಡೆದು ಅರ್ಜಿ ಸಲ್ಲಿಸಬಹುದು. ಇನ್ನು ಈ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 31, 2022 ಆಗಿದ್ದು, ಅದಕ್ಕೂ ಮುನ್ನ ಅರ್ಜಿ ಸಲ್ಲಿಸಬೇಕಿದೆ. ಈ ನೇಮಕಾತಿ ಕುರಿತಾದ ಮತ್ತಷ್ಟು ಮಾಹಿತಿ ಈ ಕೆಳಗಿನಂತಿವೆ.
ಹುದ್ದೆಯ ವಿವರಗಳು: ಪುರುಷ ಅಭ್ಯರ್ಥಿಗಳಿಗೆ ಲಭ್ಯವಿರುವ ಖಾಲಿ ಹುದ್ದೆಗಳು- 181 ಮಹಿಳಾ ಅಭ್ಯರ್ಥಿಗಳಿಗೆ ಖಾಲಿ ಇರುವ ಹುದ್ದೆಗಳು- 68
ಅರ್ಹತಾ ಮಾನದಂಡ: ಅಭ್ಯರ್ಥಿಗಳು ಕ್ರೀಡೆ ಮತ್ತು ಅಥ್ಲೆಟಿಕ್ಸ್‌ನಲ್ಲಿ ರಾಜ್ಯ/ರಾಷ್ಟ್ರೀಯ/ಅಂತರರಾಷ್ಟ್ರೀಯ ಪ್ರತಿನಿಧಿಸುವ ಕ್ರೆಡಿಟ್‌ನೊಂದಿಗೆ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಯಿಂದ 12 ನೇ ತರಗತಿಯನ್ನು ಉತ್ತೀರ್ಣರಾಗಿರಬೇಕು.
ವಯೋಮಿತಿ: ಅಭ್ಯರ್ಥಿಗಳು ಆಗಸ್ಟ್ 1, 2021 ರಂತೆ 18 ವರ್ಷದಿಂದ 23 ವರ್ಷಗಳ ನಡುವೆ ಇರಬೇಕು.
ಅರ್ಜಿ ಶುಲ್ಕ: ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ ರೂ.100 ಪಾವತಿಸಬೇಕಾಗುತ್ತದೆ. ಮಹಿಳಾ ಅಭ್ಯರ್ಥಿಗಳಿಗೆ, SC ಮತ್ತು ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳ ಆಯ್ಕೆಯನ್ನು ಸೆಪ್ಟೆಂಬರ್ 1, 2019 ರಿಂದ ಮಾರ್ಚ್ 31, 2022 ರವರೆಗೆ ನಡೆದ ಕ್ರೀಡಾ ಪಂದ್ಯಾವಳಿಗಳಲ್ಲಿನ ಅವರ ಪ್ರದರ್ಶನದ ಆಧಾರದ ಮೇಲೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಭಾರತದ ಯಾವುದೇ ಪ್ರಾಂತ್ಯದಲ್ಲೂ ಕಾರ್ಯ ನಿರ್ವಹಿಸಲು ಸಿದ್ಧರಿರಬೇಕು.
ಪ್ರಮುಖ ದಿನಾಂಕಗಳು: ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಮಾರ್ಚ್ 31, 2022 ರಂದು ಅಥವಾ ಮೊದಲು ಕಳುಹಿಸಬೇಕಾಗುತ್ತದೆ.
ಇದನ್ನೂ ಓದಿ: ಸರಳೀಕೃತ ಪಿಯು ಪರೀಕ್ಷೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಚಿಂತನೆ ಇದನ್ನೂ ಓದಿ: Oxfam India Survey: ಭಾರತದ ಟಾಪ್ 10 ಶ್ರೀಮಂತರ ಸಂಪತ್ತಲ್ಲಿ 25 ವರ್ಷಗಳ ತನಕ ಮಕ್ಕಳಿಗೆ ನೀಡಬಹುದಂತೆ ಶಿಕ್ಷಣ
Published On - 7:02 pm, Wed, 19 January 22