Education: 6 ವರ್ಷ ತುಂಬಿದ್ದರೆ ಮಾತ್ರ 1ನೇ ತರಗತಿ ದಾಖಲಾತಿಗೆ ಅವಕಾಶ; ಹೊಸ ಆದೇಶ ಹೊರಡಿಸಿದ ಕರ್ನಾಟಕ ಸರ್ಕಾರ

| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 27, 2022 | 8:28 AM

ಮಕ್ಕಳನ್ನು ಒಂದನೇ ತರಗತಿಗೆ ಸೇರಿಸಲು ವಯೋಮಿತಿ ನಿಗದಿ ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ  ಆದೇಶ ಹೊರಡಿಸಿದೆ.

Education: 6 ವರ್ಷ ತುಂಬಿದ್ದರೆ ಮಾತ್ರ 1ನೇ ತರಗತಿ ದಾಖಲಾತಿಗೆ ಅವಕಾಶ; ಹೊಸ ಆದೇಶ ಹೊರಡಿಸಿದ ಕರ್ನಾಟಕ ಸರ್ಕಾರ
ಸಾಂಧರ್ಬಿಕ ಚಿತ್ರ
Follow us on

ಬೆಂಗಳೂರು: ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ವಯೋಮಿತಿ ನಿಗದಿ ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಆಯಾ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಕಿಗೆ ಕಡ್ಡಾಯವಾಗಿ ಮಗುವಿನ ವಯಸ್ಸು 6 ವರ್ಷ ಪೂರ್ಣಗೊಂಡಿದ್ದರೆ ಮಾತ್ರ 1ನೇ ತರಗತಿಗೆ ಪ್ರವೇಶ ಪಡೆಯಲು ಸಾಧ್ಯ. ಶಿಕ್ಷಣ ಹಕ್ಕು ಕಾಯ್ದೆ 2009 (Right To Education – RTE) ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು 2012ರ ಅನ್ವಯ ವಯೋಮಿತಿ ನಿಗದಿಪಡಿಸಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ತಮ್ಮ ಆದೇಶದಲ್ಲಿ ಹೇಳಿದ್ದಾರೆ.

ಶಿಕ್ಷಣ ಹಕ್ಕು ಕಾಯ್ದೆಯ ಅನ್ವಯ 2016-17ನೇ ಶೈಕ್ಷಣಿಕ ವರ್ಷದಲ್ಲಿ ಎಲ್​ಕೆಜಿ ಪ್ರವೇಶಕ್ಕೆ ಮಗುವಿಗೆ 4 ವರ್ಷ, 10 ತಿಂಗಳು ತುಂಬಿರಬೇಕು ಎಂದು ನಿಯಮ ಮಾಡಲಾಯಿತು. ಅದಕ್ಕೂ ಮೊದಲು ಎಲ್​ಕೆಜಿ ಪ್ರವೇಶಕ್ಕೆ 3 ವರ್ಷ 10 ತಿಂಗಳು ಆಗಿದ್ದರೆ ಸಾಕಾಗಿತ್ತು. ಅದೇ ರೀತಿ 1ನೇ ತರಗತಿ 5 ವರ್ಷ 10 ತಿಂಗಳಿನಿಂದ 6 ವರ್ಷ 10 ತಿಂಗಳ ನಡುವೆ ಮಗುವಿನ ವಯಸ್ಸು ಇದ್ದರೆ ದಾಖಲಾತಿ ಮಾಡಿಕೊಳ್ಳಬಹುದು ಎಂದು ನಿಯಮ ರೂಪಿಸಿತ್ತು.

1ನೇ ತರಗತಿಗೆ ಪ್ರವೇಶಕ್ಕೆ ನಿಯಮ ರೂಪಿಸಿ ಸರ್ಕಾರ ಹೊರಡಿಸಿರುವ ಆದೇಶ

ಕರ್ನಾಟಕ ಸರ್ಕಾರವು ಈ ನಿಯಮವನ್ನು 2018ರಲ್ಲಿ ಮತ್ತೊಮ್ಮೆ ಸಡಿಲಿಸಿತ್ತು. 1ನೇ ತರಗತಿಗೆ ದಾಖಲಿಸಲು ಕನಿಷ್ಠ 5 ವರ್ಷ 5 ತಿಂಗಳು, ಗರಿಷ್ಠ 7 ವರ್ಷ ಆಗಿರಬೇಕು ಎಂದು ಅಧಿಸೂಚನೆ ಹೊರಡಿಸಿತು. ಇದೀಗ ಮತ್ತೊಮ್ಮೆ ಈ ಆದೇಶ ಮಾರ್ಪಾಟಾಗಿದ್ದು, ಆಯಾ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಕಿಗೆ ಕಡ್ಡಾಯವಾಗಿ ಮಗುವಿನ ವಯಸ್ಸು 6 ವರ್ಷ ಪೂರ್ಣಗೊಂಡಿದ್ದರೆ ಮಾತ್ರ 1ನೇ ತರಗತಿಗೆ ಪ್ರವೇಶ ಪಡೆಯಲು ಸಾಧ್ಯ ಎಂದು ಸರ್ಕಾರವು ಸ್ಪಷ್ಟಪಡಿಸಿದೆ.

Published On - 6:56 pm, Tue, 26 July 22