AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

AICTE ಪ್ರಗತಿ ವಿದ್ಯಾರ್ಥಿವೇತನ: ತಾಂತ್ರಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 50,000ರೂ. ಪ್ರೋತ್ಸಾಹಧನ!

AICTE 'ಪ್ರಗತಿ ವಿದ್ಯಾರ್ಥಿವೇತನ ಯೋಜನೆ'ಯಡಿ ತಾಂತ್ರಿಕ ಶಿಕ್ಷಣ (ಬಿ.ಟೆಕ್/ಡಿಪ್ಲೊಮಾ) ಪಡೆಯುತ್ತಿರುವ ಅರ್ಹ ಮಹಿಳಾ ವಿದ್ಯಾರ್ಥಿಗಳಿಗೆ ವರ್ಷಕ್ಕೆ 50,000 ರೂ. ಪ್ರೋತ್ಸಾಹಧನ ನೀಡಲಾಗುತ್ತಿದ್ದು, 2026-27ರ ಸಾಲಿನ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದೆ.ಅಕ್ಟೋಬರ್ 31, 2026 ಕೊನೆಯ ದಿನವಾಗಿದೆ. ಅರ್ಹತೆ, ಕೋರ್ಸ್ ವಿವರ ಹಾಗೂ ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.

AICTE ಪ್ರಗತಿ ವಿದ್ಯಾರ್ಥಿವೇತನ: ತಾಂತ್ರಿಕ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿನಿಯರಿಗೆ ವರ್ಷಕ್ಕೆ 50,000ರೂ. ಪ್ರೋತ್ಸಾಹಧನ!
AICTE ಪ್ರಗತಿ ವಿದ್ಯಾರ್ಥಿವೇತನ
ಅಕ್ಷತಾ ವರ್ಕಾಡಿ
|

Updated on: Sep 20, 2026 | 3:04 PM

Share

ನೀವು ಬಿ.ಟೆಕ್ ಅಥವಾ AICTE ಮಾನ್ಯತೆ ಪಡೆದ ಯಾವುದೇ ತಾಂತ್ರಿಕ ಪದವಿಯನ್ನು (UG) ವ್ಯಾಸಂಗ ಮಾಡುತ್ತಿದ್ದು, ಆರ್ಥಿಕ ನೆರವಿನ ನಿರೀಕ್ಷೆಯಲ್ಲಿದ್ದರೆ ಇಲ್ಲಿದೆ ಪ್ರಮುಖ ಮಾಹಿತಿ. ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿಯು (AICTE) ‘ಪ್ರಗತಿ ವಿದ್ಯಾರ್ಥಿವೇತನ ಯೋಜನೆ’ಯಡಿ ಅರ್ಹ ಮಹಿಳಾ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವೆಚ್ಚಕ್ಕಾಗಿ ವರ್ಷಕ್ಕೆ 50,000ರೂ. ವರೆಗೆ ಆರ್ಥಿಕ ಸಹಾಯಧನವನ್ನು ಒದಗಿಸುತ್ತಿದೆ. 2026-27ರ ಶೈಕ್ಷಣಿಕ ಸಾಲಿನ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ಜೂನ್ 1 ರಿಂದ ಆರಂಭವಾಗಿದ್ದು, ಆಸಕ್ತ ಅರ್ಹ ವಿದ್ಯಾರ್ಥಿನಿಯರು ಅಕ್ಟೋಬರ್ 31 ರವರೆಗೆ ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟಲ್ (NSP) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವಿದ್ಯಾರ್ಥಿವೇತನದ ಮೊತ್ತ ಮತ್ತು ಬಳಕೆಯ ವಿವರ:

ಈ ಯೋಜನೆಯಡಿಯಲ್ಲಿ ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿನಿಗೆ ವರ್ಷಕ್ಕೆ 50,000ರೂ. ವಿದ್ಯಾರ್ಥಿವೇತನ ಸಿಗಲಿದೆ. ಈ ಹಣವನ್ನು ಕಾಲೇಜು ಶುಲ್ಕ, ಪುಸ್ತಕಗಳು, ಲೇಖನ ಸಾಮಗ್ರಿಗಳು, ಲ್ಯಾಪ್‌ಟಾಪ್/ಕಂಪ್ಯೂಟರ್, ಸಾಫ್ಟ್‌ವೇರ್ ಹಾಗೂ ಅಧ್ಯಯನಕ್ಕೆ ಅಗತ್ಯವಾದ ಇತರ ಸಲಕರಣೆಗಳನ್ನು ಖರೀದಿಸಲು ಬಳಸಬಹುದು. ಹಾಸ್ಟೆಲ್ ವೆಚ್ಚ ಹಾಗೂ ವೈದ್ಯಕೀಯ ವೆಚ್ಚಗಳಿಗೆ ಪ್ರತ್ಯೇಕ ಮೊತ್ತವನ್ನು ನೀಡಲಾಗುವುದಿಲ್ಲ.

ಕೋರ್ಸ್‌ ಅವಧಿಗೆ ಒಟ್ಟು ಲಭ್ಯವಾಗುವ ಸಹಾಯಧನ:

ಬಿ.ಟೆಕ್ ಅಥವಾ ತಾಂತ್ರಿಕ ಪದವಿಯ ಮೊದಲ ವರ್ಷಕ್ಕೆ (First Year) ನೇರವಾಗಿ ದಾಖಲಾದ ವಿದ್ಯಾರ್ಥಿನಿಯರಿಗೆ ಗರಿಷ್ಠ 4 ವರ್ಷಗಳ ಕಾಲ ವಿದ್ಯಾರ್ಥಿವೇತನ ಸಿಗಲಿದ್ದು, ಒಟ್ಟು 2 ಲಕ್ಷದವರೆಗೆ ಸೌಲಭ್ಯ ದೊರೆಯಲಿದೆ. ಅದೇ ರೀತಿ, ಲ್ಯಾಟರಲ್ ಎಂಟ್ರಿ (Lateral Entry) ಮೂಲಕ ನೇರವಾಗಿ ಎರಡನೇ ವರ್ಷಕ್ಕೆ ಪ್ರವೇಶ ಪಡೆದ ವಿದ್ಯಾರ್ಥಿನಿಯರು ಗರಿಷ್ಠ 3 ವರ್ಷಗಳ ಕಾಲ ಯೋಜನೆಯ ಪ್ರಯೋಜನ ಪಡೆಯಲಿದ್ದು, ಒಟ್ಟು 1.5 ಲಕ್ಷದವರೆಗೆ ಆರ್ಥಿಕ ನೆರವು ಪಡೆಯಬಹುದು.

ಇದನ್ನೂ ಓದಿ: ಕಾಲೇಜಿನಲ್ಲಿ ರಾತ್ರಿ ಕಾವಲುಗಾರನ ಕೆಲಸ ಮಾಡುತ್ತಲೇ ಓದಿ ಸತತ 3 ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡ ಸಾಧಕ!

ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತಾ ಮಾನದಂಡಗಳು:

ಈ ಯೋಜನೆಗೆ ಅರ್ಜಿ ಸಲ್ಲಿಸಲು ಅರ್ಜಿದಾರರು AICTE ಮಾನ್ಯತೆ ಪಡೆದ ಸಂಸ್ಥೆಗಳಲ್ಲಿ ಬಿ.ಟೆಕ್ ಅಥವಾ ಇತರ ತಾಂತ್ರಿಕ ಪದವಿ ಕೋರ್ಸ್‌ಗೆ ಪ್ರವೇಶ ಪಡೆದಿರಬೇಕು. ಕುಟುಂಬದ ವಾರ್ಷಿಕ ಆದಾಯವು 8 ಲಕ್ಷಕ್ಕಿಂತ ಕಡಿಮೆ ಇರಬೇಕಾದುದು ಕಡ್ಡಾಯವಾಗಿದೆ. ಒಂದು ಕುಟುಂಬದಿಂದ ಗರಿಷ್ಠ ಇಬ್ಬರು ಹೆಣ್ಣುಮಕ್ಕಳಿಗೆ ಮಾತ್ರ ಈ ಸೌಲಭ್ಯ ಸಿಗಲಿದೆ. ಜೊತೆಗೆ, ಅರ್ಜಿದಾರರು ಕೇಂದ್ರ, ರಾಜ್ಯ ಸರ್ಕಾರ ಅಥವಾ AICTE ನೀಡುವ ಯಾವುದೇ ಇತರ ಶೈಕ್ಷಣಿಕ ವಿದ್ಯಾರ್ಥಿವೇತನದ ಸೌಲಭ್ಯ ಪಡೆಯುತ್ತಿರಬಾರದು.

ಆಯ್ಕೆ ಪ್ರಕ್ರಿಯೆ ಮತ್ತು ಹಣ ಪಾವತಿ ವಿಧಾನ:

ಇದು ಸಂಪೂರ್ಣ ಮೆರಿಟ್ ಆಧಾರಿತ ವಿದ್ಯಾರ್ಥಿವೇತನವಾಗಿದ್ದು, ಅಭ್ಯರ್ಥಿಗಳ ಅರ್ಹತಾ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶವಾರು ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಿ ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಮೊತ್ತವನ್ನು ನೇರ ನಗದು ವರ್ಗಾವಣೆ (DBT) ಮೂಲಕ ನೇರವಾಗಿ ಅವರ ಆಧಾರ್ ಲಿಂಕ್ ಆಗಿರುವ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ. ಆಸಕ್ತ ವಿದ್ಯಾರ್ಥಿನಿಯರು ಕೊನೆಯ ದಿನಾಂಕದವರೆಗೂ ಕಾಯದೆ ತಕ್ಷಣವೇ NSP ಅಧಿಕೃತ ವೆಬ್‌ಸೈಟ್ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

ಶಿಕ್ಷಣಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ನಾನಾ ಪಾಟೇಕರ್ ಜೊತೆ ಕರಿ ಸುಬ್ಬು ಒಡನಾಟ ಶುರು ಆಗಿದ್ದು ಹೇಗೆ? ವಿವರಿಸಿದ ನಟ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಮುಂಬೈನ ಮುಲುಂಡ್ ಕಾರ್ಮಿಕರ ಕ್ಯಾಂಪ್‌ನಲ್ಲಿ ಭೀಕರ ಬೆಂಕಿ ದುರಂತ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ