AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶ ಅರ್ಜಿ ಅವಧಿ ವಿಸ್ತರಣೆ: ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

2022-23ನೇ ಸಾಲಿನ ಮೆಟ್ರಿಕ್ ನಂತರ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಹೊಸದಾಗಿ ಪ್ರವೇಶಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಅರ್ಜಿಗಳನ್ನು ಆಹ್ವಾಸಲಾಗಿದೆ.

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ಪ್ರವೇಶ ಅರ್ಜಿ ಅವಧಿ ವಿಸ್ತರಣೆ: ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ಪ್ರಾತಿನಿಧಿಕ ಚಿತ್ರImage Credit source: udupixpress.com
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Jan 06, 2023 | 8:22 PM

Share

ಬೆಂಗಳೂರು: 2022-23ನೇ ಸಾಲಿನ ಮೆಟ್ರಿಕ್ ನಂತರ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಹೊಸದಾಗಿ ಪ್ರವೇಶಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (bcwd) ವತಿಯಿಂದ ಅರ್ಜಿಗಳನ್ನು ಆಹ್ವಾಸಲಾಗಿದೆ. ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವೃತ್ತಿಪರ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆನ್​ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನವನ್ನು ಜನವರಿ 20 ರವರೆಗೆ ವಿಸ್ತರಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನ

ತಾಲ್ಲೂಕಾವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರಗಳ ಪಡೆಯಲು ಇಲಾಖೆಯ ವೆಬ್ ಸೈಟ್ www.bcwd.karnataka.gov.in ಇಲ್ಲಿ ಭೇಟಿ ನೀಡಬಹುದಾಗಿದೆ. ವಿದ್ಯಾರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನವಾಗಿದೆ.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ವಿಳಾಸಕ್ಕೆ ಇ-ಮೇಲ್ ಮುಖಾಂತರ ಅಥವಾ ಸಹಾಯವಾಣಿ ಸಂಖ್ಯೆ: 080-22867628 ಅಥವಾ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ / ತಾಲ್ಲೂಕು ಅಧಿಕಾರಿಗಳಿಗೆ ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ನಗರ ಜಿಲ್ಲೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: CBSE 2023: ಸಿಬಿಎಸ್​ಇ 10, 12ನೇ ತರಗತಿ ಪರೀಕ್ಷಾ ದಿನಾಂಕ ಘೋಷಣೆ; ಫೆ. 15ರಿಂದ ಎಕ್ಸಾಂ ಆರಂಭ

ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಮಹಿಳೆಯರಿಂದ ಅರ್ಜಿ ಆಹ್ವಾನ

ಬೆಂಗಳೂರು ನಗರ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 2022-23ನೇ ಸಾಲಿನಲ್ಲಿ ಮಹಿಳಾಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭಿವೃದ್ಧಿ ಕ್ಷೇತ್ರದಲ್ಲಿ ಉತ್ತಮ ಹಾಗೂ ಆದರ್ಶ ಸೇವೆ ಸಲ್ಲಿಸುತ್ತಿರುವ ಸಂಘ-ಸಂಸ್ಥೆಗಳಿಗೆ ಹಾಗೂ ಕಲೆ, ಕ್ರೀಡೆ, ಸಾಹಿತ್ಯ, ಮಹಿಳೆಯರ ಅಭಿವೃದ್ಧಿ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಹಿಳೆಯರಿಗೆ “ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ” ಹಾಗೂ ಸಾಹಸ ಪ್ರದರ್ಶಿಸಿ ಹೋರಾಡಿದ ಮಹಿಳೆಗೆ “ವೀರ ಮಹಿಳೆ ಪ್ರಶಸ್ತಿ” ನೀಡಲು ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತ ಮಹಿಳೆಯರು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಕಿದ್ವಾಯಿ ಆಸ್ಪತ್ರೆ ಪಕ್ಕ, ಡಾ. ಎಂ.ಹೆಚ್. ಮರಿಗೌಡ ರಸ್ತೆ (ಹೊಸೂರು ಮುಖ್ಯ ರಸ್ತೆ), ಬೆಂಗಳೂರು-29 ಇಲ್ಲಿ ಅರ್ಜಿ ನಮೂನೆಯನ್ನು ಪಡೆದು ಜನವರಿ 15ರೊಳಗೆ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮತ್ತೊಂದು ಕೊಡುಗೆ: ಬೀದರ್​ನಲ್ಲಿ ನರ್ಸಿಂಗ್ ಕೋರ್ಸ್ ಆರಂಭಿಸಲು ಆರೋಗ್ಯ ವಿವಿ ಅನುಮತಿ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080-26578688 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್