ಬೆಂಗಳೂರು: ಸಾರಿಗೆ ಮತ್ತು ರಸ್ತೆ ಸುರಕ್ಷತೆ ವತಿಯಿಂದ 2022-23ನೇ ಸಾಲಿನ ರಾಜ್ಯದಲ್ಲಿನ ಯೆಲ್ಲೋ ಬೋರ್ಡ್ (Yellow Board) ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳ ಮೆಟ್ರಿಕ್ ನಂತರದ (Post Metric) ಉನ್ನತ ವಿದ್ಯಾಭ್ಯಾಸವನ್ನು ಉತ್ತೇಜಿಸಲು, “ವಿದ್ಯಾನಿಧಿ” ಮತ್ತು ಆರೋಗ್ಯ ಸೌಲಭ್ಯಕ್ಕಾಗಿ ವಿಶೇಷ ಯೋಜನೆ ಸೌಲಭ್ಯ ಪಡೆಯಲು ಆನ್ ಲೈನ್ ಮೂಲಕ ನವೆಂಬರ್ 08 ರಿಂದ ಅರ್ಜಿಗಳನ್ನು ಸಲ್ಲಿಸಲು ಪ್ರಾರಂಭಿಸಲಾಗಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ದಾಖಲೆಗಳು ಏನು ಬೇಕು?
ಚಾಲಕರು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ರಾಜ್ಯದ ಯಾವುದೇ ಪ್ರಾದೇಶಿಕ/ ಸಹಾಯಕ ಪ್ರಾದೇಶಿಕ ಸಾರಿಗೆ ಕಛೇರಿಗಳಲ್ಲಿ ಮೋಟಾರು ಕ್ಯಾಬ್/ ಆಟೋರಿಕ್ಷಾ ಕ್ಯಾಬ್ ವರ್ಗಗಳ ಸಾರಿಗೆ ವಾಹನಗಳನ್ನು ಚಲಾಯಿಸಲು ಸಾರಥಿ ತಂತ್ರಾಂಶದಲ್ಲಿ ಚಾಲ್ತಿಯಲ್ಲಿರುವ ಚಾಲನಾ ಅನುಜ್ಞಾಪತ್ರ ಹೊಂದಿರುವ (Yellow Board Taxi & Autorikshaw) ಚಾಲಕರಾಗಿರಬೇಕು.
ಅರ್ಜಿ ಸಲ್ಲಿಸುವುದು ಹೇಗೆ?
ಆಸಕ್ತ ವಿದ್ಯಾರ್ಥಿಗಳು ವೆಬ್ ಸೈಟ್ https://sevasindhu.karnataka.gov.in/sevasindhu/kannada ಮುಖಾಂತರ ಗ್ರಾಮ ಒನ್, ಕರ್ನಾಟಕ ಒನ್ ಮತ್ತು ಬೆಂಗಳೂರು ಒನ್ ಕೇಂದ್ರಗಳಲ್ಲಿ ಚಾಲಕರು/ ಪೋಷಕರ ಚಾಲನಾ ಅನುಜ್ಞಾಪತ್ರ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್ ಸಂಖ್ಯೆಯೊಂದಿಗೆ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಿದ ಅರ್ಹ ವಿದ್ಯಾರ್ಥಿಗಳು ಆಧಾರ್ ಜೋಡಿತ ಬ್ಯಾಂಕ್ ಖಾತೆ ಹೊಂದಿರಬೇಕು ಎಂದು ಸಾರಿಗೆ ಮತ್ತು ರಸ್ತೆ ಸುರಕ್ಷತೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:14 pm, Wed, 9 November 22