AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ: ಪದವಿ ವಿದ್ಯಾರ್ಥಿಗಳಿಗೆ 4 ಲಕ್ಷ, ಸ್ನಾತಕೋತ್ತರಕ್ಕೆ ತಲಾ 6 ಲಕ್ಷ ರೂಪಾಯಿ

Scholarships for India's Brightest Students: ಭಾರತಾದ್ಯಂತ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಕಂಪ್ಯೂಟರ್ ಸೈನ್ಸ್ಸ್, ಗಣಿತ ಮತ್ತು ಕಂಪ್ಯೂಟಿಂಗ್, ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ನಲ್ಲಿ ಪದವಿಯಲ್ಲಿ ಅಭ್ಯಾಸ ಮಾಡುತ್ತಿರುವ ಮೊದಲ ವರ್ಷದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಯಾವುದೇ ಪ್ರವೇಶ ಶುಲ್ಕವಿಲ್ಲ.

ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ: ಪದವಿ ವಿದ್ಯಾರ್ಥಿಗಳಿಗೆ 4 ಲಕ್ಷ, ಸ್ನಾತಕೋತ್ತರಕ್ಕೆ ತಲಾ 6 ಲಕ್ಷ ರೂಪಾಯಿ
ರಿಲಯನ್ಸ್ ಫೌಂಡೇಷನ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ: ಪದವಿ ವಿದ್ಯಾರ್ಥಿಗಳಿಗೆ ತಲಾ 4 ಲಕ್ಷ ರೂ, ಸ್ನಾತಕೋತ್ತರಕ್ಕೆ ತಲಾ 6 ಲಕ್ಷ ರೂಪಾಯಿ
TV9 Web
| Updated By: ಸಾಧು ಶ್ರೀನಾಥ್​|

Updated on: Dec 21, 2021 | 7:29 AM

Share

ಸಮಾಜದ ಒಳಿತಿಗಾಗಿ ತಂತ್ರಜ್ಞಾನ ಅಭಿವೃದ್ಧಿ ಪಡಿಸುವ 100 ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನ ನೀಡುತ್ತಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. 60 ಮಂದಿ ಮೊದಲ ವರ್ಷದ ಪದವಿ ವಿದ್ಯಾರ್ಥಿಗಳಿಗೆ ತಲಾ 4 ಲಕ್ಷ ರೂಪಾಯಿ, 40 ಮಂದಿ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ತಲಾ 6 ಲಕ್ಷ ರೂಪಾಯಿ ವಿದ್ಯಾರ್ಥಿ ವೇತನ ನೀಡಲಾಗುತ್ತದೆ. 2020-21ನೇ ಸಾಲಿನಲ್ಲಿ ಮೊದಲ ಬಾರಿಗೆ 76 ವಿದ್ಯಾರ್ಥಿಗಳಿಗೆ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸಿತ್ತು (Scholarships for India’s Brightest Students).

ಭಾರತಾದ್ಯಂತ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್, ಕಂಪ್ಯೂಟರ್ ಸೈನ್ಸ್ಸ್, ಗಣಿತ ಮತ್ತು ಕಂಪ್ಯೂಟಿಂಗ್, ಎಲೆಕ್ಟ್ರಿಕಲ್/ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ನಲ್ಲಿ ಪದವಿಯಲ್ಲಿ ಅಭ್ಯಾಸ ಮಾಡುತ್ತಿರುವ ಮೊದಲ ವರ್ಷದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಯಾವುದೇ ಪ್ರವೇಶ ಶುಲ್ಕವಿಲ್ಲ.

ಪ್ರತಿಭಾನ್ವಿತ ವಿದ್ಯಾರ್ಥಿಗಳು ಸಾಮಾಜಿಕ ಒಳಿತಿಗಾಗಿ ಹೊಸತನವನ್ನು ಅನ್ವಷಿಸುವುದನ್ನು ಪ್ರೋತ್ಸಾಹಿಸುವ ಸಲುವಾಗಿ ಉದಾರವಾಗಿ ವಿದ್ಯಾರ್ಥಿ ವೇತನ ಅನುದಾನ ನೀಡುವುದು, ಆ ಮೂಲಕ ಅವರ ಕೌಶಲ್ಯಗಳನ್ನು ಪೋಷಿಸುವುದು ರಿಲಯನ್ಸ್ ಫೌಂಡೇಷನ್ ಉದ್ದೇಶವಾಗಿದೆ.

ವಿದ್ಯಾರ್ಥಿ ವೇತನ ಪಡೆದವರನ್ನು ತಜ್ಞರ ಸಂವಾದಗಳು, ಉದ್ಯಮದ ಮಾನ್ಯತೆ ಮತ್ತು ಸ್ವಯಂಸೇವಕ ಅವಕಾಶಗಳನ್ನು ಒಳಗೊಂಡಂತೆ ಅಸಾಧಾರಣವಾದ ಸಮಗ್ರ ಅಭಿವೃದ್ಧಿ ಕಾರ್ಯಕ್ರಮದೊಂದಿಗೆ ಪೋಷಿಸುತ್ತದೆ ಮತ್ತು ಬೆಂಬಲಿಸುತ್ತದೆ.

ಸಾಮಾಜಿಕ ಒಳಿತಿಗಾಗಿ ತಂತ್ರಜ್ಞಾನದ ಕಡೆಗೆ ವಿದ್ಯಾರ್ಥಿಗಳನ್ನು ಬೆಂಬಲಿಸುವ ಗುರಿಯೊಂದಿಗೆ ರಿಲಯನ್ಸ್ ಫೌಂಡೇಷನ್ ನೀಡುತ್ತಿರುವ ವಿದ್ಯಾರ್ಥಿ ವೇತನವು ಅತಿದೊಡ್ಡ ಮೊತ್ತದ ವಿದ್ಯಾರ್ಥಿವೇತನಗಳಲ್ಲಿ ಒಂದಾಗಿದೆ. ವಿದ್ಯಾರ್ಥಿಗಳು , ಹೆಚ್ಚುವರಿಯಾಗಿ, ಪ್ರಮುಖ ಜಾಗತಿಕ ತಜ್ಞರೊಂದಿಗೆ ಸಂವಹನ ನಡೆಸಲು, ಮಾರ್ಗದರ್ಶನ ಪಡೆಯಲು, ಇಂಟರ್ನ್​​ಷಿಪ್ ನಿರ್ವಹಿಸಲು ಅವಕಾಶ ಸಿಗುತ್ತದೆ.

2021 ರಲ್ಲಿ, 76 ಮೊದಲ ವರ್ಷದ ಪದವಿ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ (AI) ಮತ್ತು ಕಂಪ್ಯೂಟರ್ ಸೈನ್ಸಸ್ನಲ್ಲಿ ಮೊದಲ ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನವನ್ನು ನೀಡಲಾಯಿತು. ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನ ಪಡೆದ ಪ್ರತಿಭಾನ್ವಿತರು ಭಾರತದಾದ್ಯಂತ 14 ರಾಜ್ಯಗಳನ್ನು ಪ್ರತಿನಿಧಿಸುವ ದೇಶದ 21 ಉನ್ನತ ವಿಜ್ಞಾನ ಮತ್ತು ಇಂಜಿನಿಯರಿಂಗ್ ಸಂಸ್ಥೆಗಳಲ್ಲಿ ಆಯ್ದ ಅರ್ಹ ಪದವಿಗಳಲ್ಲಿ ಪೂರ್ಣಾವಧಿಗೆ ದಾಖಲಾಗಿದ್ದಾರೆ. ಈ ಮೊದಲ ಪ್ರತಿಭಾನ್ವಿತರು ಈಗಾಗಲೇ ಉದ್ಯಮದ ತಜ್ಞರೊಂದಿಗೆ ವೃತ್ತಿಪರವಾಗಿ ವರ್ಧಿಸುವ ಹಲವಾರು ಅವಧಿಗಳಲ್ಲಿ ಭಾಗವಹಿಸಿದ್ದಾರೆ.

ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿ ವೇತನ ನೀಡಲು ಕಠಿಣ ಮತ್ತು ಸ್ಪರ್ಧಾತ್ಮಕ ಆಯ್ಕೆ ಪ್ರಕ್ರಿಯೆಯ ಮೂಲಕ ಭಾರತದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಆಯ್ಕೆ ಮಾಡುತ್ತದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಮುಖ ಭಾರತೀಯ ಮತ್ತು ಅಂತರರಾಷ್ಟ್ರೀಯ ತಜ್ಞರ ಸಮಿತಿಯೊಂದಿಗೆ ಸಂದರ್ಶನಗಳನ್ನು ನಡೆಸಿದ ನಂತರ ಅರ್ಹತೆಯ ಆಧಾರದ ಮೇಲೆ ವಿದ್ಯಾರ್ಥಿ ವೇತನಕ್ಕೆ ಆಯ್ಕೆ ಮಾಡಲಾಗುತ್ತದೆ. ಎಲ್ಲಾ ಸಾಮಾಜಿಕ- ಆರ್ಥಿಕ ಹಿನ್ನೆಲೆಯ ವಿದ್ಯಾರ್ಥಿಗಳೂ ಅರ್ಜಿ ಸಲ್ಲಿಸಲು ಪ್ರೋತ್ಸಾಹಿಸಲಾಗುತ್ತದೆ.

ಬಾಲ್ಯದಿಂದ ಉನ್ನತ ಅಧ್ಯಯನದವರೆಗೆ ವಿಶ್ವ ದರ್ಜೆಯ ಶಿಕ್ಷಣ ಅಭಿವೃದ್ಧಿಪಡಿಸಲು ಮತ್ತು ಸುಧಾರಿಸಲು ರಿಲಯನ್ಸ್ ಫೌಂಡೇಶನ್ ಶ್ರಮಿಸುತ್ತಿದೆ. ರಿಲಯನ್ಸ್ ಫೌಂಡೇಶನ್ ಶಾಲೆಗಳು ವರ್ಷಕ್ಕೆ 14,000 ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತವೆ.

ರಿಲಯನ್ಸ್ ಫೌಂಡೇಶನ್ ವಿದ್ಯಾರ್ಥಿವೇತನದ ಕುರಿತು ಇನ್ನಷ್ಟು ಮಾಹಿತಿ ಇಲ್ಲಿದೆ: https://www.scholarships.reliancefoundation.org/

ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯ ಸುರಂಗ ನಿರ್ಮಾಣ ಪೂರ್ಣ
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ಯಾರದ್ದೋ ಜಿದ್ದಿನ ಮೇಲೆ ಸಿನಿಮಾ ನಿರ್ಮಿಸುತ್ತಿದ್ದಾರಾ ಯಶ್ ತಾಯಿ?
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ದೇವೇಗೌಡರನ್ನು ಪಕ್ಷ ಯಾವತ್ತೂ ನಿರ್ಲಕ್ಷಿಸಿಲ್ಲ: ನಿಖಿಲ್ ಕುಮಾರಸ್ವಾಮಿ
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ಗ್ರಾಹಕರಿಂದ ಆನ್ಲೈನ್ ಪೇಮೆಂಟ್ಸ್ ಸ್ವೀಕರಿಸಿದ್ದು ವ್ಯಾಪಾರಿಗಳ ಅಪರಾಧ!
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ದಲೈಲಾಮಾ ಹುಟ್ಟುಹಬ್ಬಕ್ಕೆ ವಿಶೇಷ ಹಾಡು ನಿರ್ಮಿಸಿದ ವಿಐಪಿ ಮೋಷನ್ ಪಿಕ್ಚರ್ಸ್
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಖರ್ಗೆಯವರನ್ನು ಭೇಟಿಯಾಗುವುದು 3-ದಿನ ಹಿಂದೆ ನಿಗದಿಯಾಗಿತ್ತು: ಜಾರಕಿಹೊಳಿ
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸಿಎಂ ಬದಲಾವಣೆ ವಿಷಯದಲ್ಲಿ ಸುರ್ಜೇವಾಲಾ ಚರ್ಚಿಸಿಲ್ಲ: ರಂಗನಾಥ್
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ಸುರ್ಜೆವಾಲಾ ಜೊತೆ ಸಿಎಂ ಬದಲಾವಣೆ, ಸಂಪುಟ ವಿಸ್ತರಣೆ ಚರ್ಚೆಯಾಗಿಲ್ಲ: ಸಿಎಂ
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ವರಿಷ್ಠರ ಮಟ್ಟದಲ್ಲಿ ನಡೆಯುವ ಚರ್ಚೆ ಬಿಎಸ್​ವೈ ಗೊತ್ತಿಲ್ಲದಿರುತ್ತದೆಯೇ?
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ
ಕೋರ್ಟ್​ ಎದುರು ನೆರೆದ ದರ್ಶನ್ ಫ್ಯಾನ್ಸ್; ನಟನಿಗೆ ಜೈಕಾರ