
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ISRO) ಕೃತಕ ಬುದ್ಧಿಮತ್ತೆ (AI) ಮತ್ತು ಯಂತ್ರ ಕಲಿಕೆ (ML) ವಿಷಯದಲ್ಲಿ ಆಸಕ್ತಿಯಿರುವ ಅಭ್ಯರ್ಥಿಗಳಿಗೆ ಉಚಿತ ಆನ್‌ಲೈನ್ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ. ‘ಜಲ ಸಂಪನ್ಮೂಲ ವಲಯದಲ್ಲಿ ಹೈಡ್ರೋ-ಇನ್ಫರ್ಮ್ಯಾಟಿಕ್ಸ್‌ಗಾಗಿ AI/ML’ (AI/ML for Hydro-informatics) ಎಂಬ ವಿಷಯದಡಿ ಈ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರು ಅಕ್ಟೋಬರ್ 4 ರೊಳಗಾಗಿ ಆನ್‌ಲೈನ್ ಮೂಲಕ ಉಚಿತವಾಗಿ ಅರ್ಜಿ ಸಲ್ಲಿಸಬಹುದು.
ಈ ತರಬೇತಿ ಕಾರ್ಯಕ್ರಮವನ್ನು ಡೆಹ್ರಾಡೂನ್‌ನಲ್ಲಿರುವ ಇಸ್ರೋದ ಅಂಗಸಂಸ್ಥೆಯಾದ ‘ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ರಿಮೋಟ್ ಸೆನ್ಸಿಂಗ್’ (IIRS) ನಡೆಸಿಕೊಡಲಿದೆ. ಜಲ ಸಂಪನ್ಮೂಲ ಕ್ಷೇತ್ರ ಹಾಗೂ ಹೈಡ್ರೋ-ಇನ್ಫರ್ಮ್ಯಾಟಿಕ್ಸ್ ವಿಭಾಗದಲ್ಲಿ AI ಮತ್ತು ML ತಂತ್ರಜ್ಞಾನಗಳ ಬಳಕೆಯ ಕುರಿತು ವಿದ್ಯಾರ್ಥಿಗಳು ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಸಂಪೂರ್ಣ ಡಿಜಿಟಲ್ ಜ್ಞಾನ ಒದಗಿಸುವುದು ಈ ತರಬೇತಿಯ ಮುಖ್ಯ ಉದ್ದೇಶವಾಗಿದೆ.
ಇದನ್ನೂ ಓದಿ: ಕಾಲೇಜಿನಲ್ಲಿ ರಾತ್ರಿ ಕಾವಲುಗಾರನ ಕೆಲಸ ಮಾಡುತ್ತಲೇ ಓದಿ ಸತತ 3 ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡ ಸಾಧಕ!
ತರಬೇತಿ ಕಾರ್ಯಕ್ರಮವನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಮತ್ತು ನಿಗದಿತ ಮಾನದಂಡಗಳನ್ನು ಪೂರೈಸುವ ಅಭ್ಯರ್ಥಿಗಳಿಗೆ ಇಸ್ರೋ ವತಿಯಿಂದ ‘ಕೋರ್ಸ್ ಭಾಗವಹಿಸುವಿಕೆ ಪ್ರಮಾಣಪತ್ರ’ವನ್ನು (Participation Certificate) ನೀಡಲಾಗುತ್ತದೆ. ಇದನ್ನು ಅಭ್ಯರ್ಥಿಗಳು ಇಸ್ರೋದ ‘e-class LMS’ ಪೋರ್ಟಲ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಇಸ್ರೋದ ಅಧಿಕೃತ ಪೋರ್ಟಲ್ isrolms.iirs.gov.in/edusatregistration ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಉಚಿತವಾಗಿ ನೋಂದಾಯಿಸಿಕೊಳ್ಳಬಹುದು.
ಶಿಕ್ಷಣಕ್ಕೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:39 pm, Sat, 19 September 26