ಬೆಂಗಳೂರು, ಏ.03: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಮಂಡಳಿ (ಕೆಎಸ್ಇಎಬಿ) ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ಏಪ್ರಿಲ್ 3 2024 ಅಂದರೆ ಇಂದು ಪ್ರಕಟ ಮಾಡಲಾಗುವುದಿಲ್ಲ ಎಂದು ಹೇಳಿದ್ದಾರೆ. ಈ ಹಿಂದೆ ಏಪ್ರಿಲ್ 3ರಂದು ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಸಾಮಾಜಿಕ ಜಾಲತಾಣದಲ್ಲಿ ನಕಲಿ ನೋಟಿಸ್ ಹರಿದಾಡುತ್ತಿತ್ತು. ಕೆಎಸ್ಇಎಬಿ ಮೌಲ್ಯ ಮಾಪನ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಮತ್ತು ಪರೀಕ್ಷೆಯ ಫಲಿತಾಂಶವನ್ನು ಪ್ರಕಟ ಮಾಡುವ ದಿನಾಂಕವನ್ನು ಇನ್ನು ತಿಳಿಸಿಲ್ಲ ಎಂದು ಹೇಳಲಾಗಿದೆ.
ಸಾಮಾಜಿಕ ಜಾಲತಾಣದಲ್ಲಿ ಒಂದು ನೋಟಿಸ್ ವೈರಲ್ ಆಗಿತ್ತು. ಅದರಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮಾ.1ರಿಂದ 23ರವರೆಗೆ ನಡೆಸಲಾಗಿತ್ತು. ಎಲ್ಲಾ ಉತ್ತರ ಪ್ರತಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದೆ. ಹಾಗಾಗಿ ಪರೀಕ್ಷೆ ಫಲಿತಾಂಶವನ್ನು ಏಪ್ರಿಲ್ 3ರಂದು ಬೆಳಿಗ್ಗೆ 10 ಗಂಟೆಗೆ ಪ್ರಕಟಸಲಾಗುವುದು. ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯಿಂದ ಪತ್ರಿಕಾಗೋಷ್ಠಿ ಕರೆಯಲಾಗುವುದು. ಫಲಿತಾಂಶ ವು ಏಪ್ರಿಲ್ 3 ರಂದು ಬೆಳಿಗ್ಗೆ 11 ಗಂಟೆಗೆ karresults.nic.in ನಲ್ಲಿ ಲಭ್ಯವಿರುತ್ತದೆ ಎಂದು ಈ ನೋಟಿಸ್ನಲ್ಲಿ ನೀಡಲಾಗಿತ್ತು.
ಮೂಲಗಳ ಪ್ರಕಾರ, ಲೋಕಸಭೆ ಚುನಾವಣೆ ಪ್ರಾರಂಭವಾಗುವ ಮುನ್ನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ ಮಾಡಲಾಗುವುದು ಎಂದು ಹೇಳಲಾಗಿದೆ. ಫಲಿತಾಂಶವನ್ನು kseab.karnataka.gov.in ಮತ್ತು karresults.in ನಲ್ಲಿ ಅಧಿಕೃತ ವೆಬ್ಸೈಟ್ಗಳಲ್ಲಿ ಪ್ರಕಟ ಮಾಡಲಾಗುವುದು. ಇಲ್ಲಿ ನಿಮ್ಮ ಫಲಿತಾಂಶವನ್ನು ಪರಿಶೀಲನೆ ಮಾಡಲು ನಿಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ.
ಇದನ್ನೂ ಓದಿ: 5, 8, 9 ಮತ್ತು 11ನೇ ತರಗತಿ ಬೋರ್ಡ್ ಪರೀಕ್ಷೆಗೆ ಹೈಕೋರ್ಟ್ ಅಸ್ತು
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದ ದಿನಾಂಕ ಹಾಗೂ ಸಮಯ ಕುರಿತು ಮಂಡಳಿಯು ಇನ್ನೂ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. KSEAB ಪ್ರಸ್ತುತ ಮೌಲ್ಯಮಾಪನ ಮಾಡುತ್ತಿದೆ. ವಿಜ್ಞಾನ, ವಾಣಿಜ್ಯ, ಕಲೆ ವಿಭಾಗ ಸೇರಿದಂತೆ ಎಲ್ಲಾ ವಿಭಾಗಗಳ ಫಲಿತಾಂಶವನ್ನು ಏಕಕಾಲದಲ್ಲಿ ಪ್ರಕಟ ಮಾಡಲಾಗುವುದು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:39 am, Wed, 3 April 24