AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

B.Sc Nursing, B.Pharma, Pharma.D ಕೋರ್ಸ್​: ಅಂತಿಮ ಸುತ್ತಿನ ಸೀಟು ಹಂಚಿಕೆ

B.Sc Nursing, B.Pharma, Pharma.D ಕೋರ್ಸುಗಳಿಗೆ ಅಂತಿಮ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಇಚ್ಛಿಸುವವರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಒಂದಿಷ್ಟು ಸೂಚನೆಗಳನ್ನ ನೀಡಿದೆ. ಅ.6ರ ಬೆಳಿಗ್ಗೆ 11 ಗಂಟೆಯ ಒಳಗೆ ಹೊಸದಾಗಿ ತಮ್ಮ ಇಚ್ಛೆ/ಆಯ್ಕೆಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಲು ಸೂಚಿಸಿದೆ.

B.Sc Nursing, B.Pharma, Pharma.D ಕೋರ್ಸ್​: ಅಂತಿಮ ಸುತ್ತಿನ ಸೀಟು ಹಂಚಿಕೆ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಪ್ರಸನ್ನ ಹೆಗಡೆ
|

Updated on: Oct 03, 2025 | 9:02 PM

Share

ಬೆಂಗಳೂರು, ಅಕ್ಟೋಬರ್​ 03: B.Sc Nursing, B.Pharma, Pharma.D ಕೋರ್ಸುಗಳಿಗೆ ಅಂತಿಮ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅ.6ರ ಬೆಳಿಗ್ಗೆ 11 ಗಂಟೆಯ ಒಳಗೆ ಹೊಸದಾಗಿ ತಮ್ಮ ಇಚ್ಛೆ/ಆಯ್ಕೆಗಳನ್ನು ಆದ್ಯತಾ ಕ್ರಮದಲ್ಲಿ ದಾಖಲಿಸಲು KEA ವೆಬ್ ಸೈಟ್ ನಲ್ಲಿ ಲಿಂಕ್ ತೆರೆಯಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (Karnataka Examinations Authority)  ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.

ಬಿ.ಎಸ್ಸಿ. ನರ್ಸಿಂಗ್ ಕೋರ್ಸಿಗೆ ಸರ್ಕಾರ ಹೆಚ್ಚಿಸಿರುವ ಸೀಟುಗಳು, ಹಿಂದಿನ ಸೀಟುಗಳ ಹಂಚಿಕೆಯ ನಂತರ ಭರ್ತಿಯಾಗದೆ ಉಳಿದಿರುವ/ರದ್ದುಗೊಂಡಿರುವ/ಹೊಸದಾಗಿ ಸೇರಿಸಲಾದ ಬಿ.ಫಾರ್ಮ ಮತ್ತು ಫಾರ್ಮ-ಡಿ ಸೀಟುಗಳನ್ನು ಈ ಹಂಚಿಕೆಗೆ ಪರಿಗಣಿಸಲ್ಪಡುತ್ತವೆ. ಸರ್ಕಾರಿ ಕಾಲೇಜುಗಳಲ್ಲಿರುವ ಸೀಟುಗಳು ಹಾಗೂ ಖಾಸಗಿ ಕಾಲೇಜುಗಳ ‘ಜಿ’ ಸೀಟುಗಳು ಸಹ ಈ ಹಂಚಿಕೆ ವ್ಯಾಪ್ತಿಗೆ ಒಳಪಡುತ್ತವೆ. ಅಭ್ಯರ್ಥಿಗಳು ಈ ಹಿಂದಿನ ಸುತ್ತುಗಳಲ್ಲಿ ದಾಖಲಿಸಿದ ಇಚ್ಛೆ/ಆಯ್ಕೆಗಳನ್ನು ಈ ಹಂತದ ಹಂಚಿಕೆಗೆ ಪರಿಗಣಿಸುವುದಿಲ್ಲ. ಕಾಲೇಜುವಾರು, ವರ್ಗವಾರು ಮತ್ತು ಕೋರ್ಸುವಾರು ವಿವರವಾದ ಸೀಟ್ ಮ್ಯಾಟ್ರಿಕ್ಸ್ ಅನ್ನು ಕೆಇಎ ವೆಬ್ ಸೈಟಿನಲ್ಲಿ ಪ್ರಕಟಿಸಲಾಗಿದೆ. ಅದನ್ನು ನೋಡಿಕೊಂಡೇ ಆಯ್ಕೆ ದಾಖಲಿಸಬೇಕು. 10 ಸಾವಿರ‌ ರೂಪಾಯಿ ಕಾಷನ್ ಡೆಪಾಸಿಟ್ ಮಾಡಬೇಕು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: ಎಂಜಿನಿಯರಿಂಗ್ ಸೇವೆಗಳ ಪರೀಕ್ಷೆಗೆ ಅರ್ಜಿ ಪ್ರಕ್ರಿಯೆ ಆರಂಭ

ಇದು ಅಂತಿಮ ಸುತ್ತಿನ ಸೀಟು ಹಂಚಿಕೆಯಾಗಿರುವುದರಿಂದ ಆಯ್ಕೆ ಎಂಟ್ರಿ ಮಾಡಿದ ಕಾಲೇಜಿನಲ್ಲಿ ಸೀಟು ಹಂಚಿಕೆಯಾದರೆ ಕಡ್ಡಾಯವಾಗಿ ಪ್ರವೇಶ ಪಡೆಯಬೇಕು. ಹೀಗಾಗಿ, ಅಭ್ಯರ್ಥಿಗಳು ಸೇರಬಹುದಾದ ಕಾಲೇಜನ್ನು ಖಚಿತಪಡಿಸಿಕೊಂಡು ಎಂಟ್ರಿ ನಮೂದಿಸಬೇಕು. ಸೀಟ್ ಮ್ಯಾಟ್ರಿಕ್ಸ್ ನ ಪರಿಷ್ಕೃತ ಮಾಹಿತಿಗಾಗಿ ಅಭ್ಯರ್ಥಿಗಳು ಕೆಇಎ ವೆಬ್ ಸೈಟ್ ಗಮನಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ