ಬೆಂಗಳೂರು ಬಂದ್; ನಗರದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರಿನ ಸರ್ಕಾರಿ/ಅನುದಾನಿತ/ ಅನುದಾನ ರಹಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಿ ನಗರ ಡಿಸಿ ದಯಾನಂದ್ ಘೋಷಿಸಿದ್ದಾರೆ. ಶಿಕ್ಷಕರು, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಹಿನ್ನೆಲೆ ಸಮಸ್ಯೆ ಆಗಬಾರದೆಂದು ಉಪನ್ಯಾಸಕರಿಗೂ ರಜೆ ಘೋಷಿಸಿ ಬೆಂಗಳೂರು ನಗರ ಡಿಸಿ ಕೆ.ಎ.ದಯಾನಂದ್​ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಬಂದ್; ನಗರದ ಎಲ್ಲಾ ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Sep 26, 2023 | 6:46 AM

ಬೆಂಗಳೂರು, ಸೆ.26: ಪಕ್ಕದ ರಾಜ್ಯ ತಮಿಳುನಾಡಿಗೆ ಹರಿಯುತ್ತಿರುವ ನೀರು ಉಳಿಸಿಕೊಳ್ಳಲು ರೈತ ಸಂಘಟನೆಗಳು, ಕನ್ನಡ ಪರ ಹೋರಾಟಗಾರರು ಇಂದು ಬೀದಿಗಿಳಿಯಲಿದ್ದಾರೆ (Cauvery Water Dispute). ನಾಡಿನಾದ್ಯಂತ ಕಾವೇರಿಗಾಗಿ ಹೋರಾಟ ತೀವ್ರಗೊಂಡಿದ್ದು, ಇವತ್ತು ಇಡೀ ಬೆಂಗಳೂರು ಸ್ತಬ್ಧವಾಗಲಿದೆ (Bengaluru Bandh). ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬೆಂಗಳೂರು ಬಂದ್ ಆಗಲಿದೆ. 97ಕ್ಕೂ ಹೆಚ್ಚು ಸಂಘಟನೆಗಳು ಬೆಳಗ್ಗೆ ಟೌನ್​ಹಾಲ್​ನಿಂದ ಫ್ರೀಡಂಪಾರ್ಕ್​ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿವೆ. ಹೀಗಾಗಿ ಇಂದು ಬೆಂಗಳೂರು ನಗರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸರ್ಕಾರಿ/ಅನುದಾನಿತ/ ಅನುದಾನ ರಹಿತ ಹಾಗೂ ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ನೀಡಿ ನಗರ ಡಿಸಿ ದಯಾನಂದ್ ಘೋಷಿಸಿದ್ದಾರೆ. ಶಿಕ್ಷಕರು, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಹಿನ್ನೆಲೆ ಸಮಸ್ಯೆ ಆಗಬಾರದೆಂದು ಉಪನ್ಯಾಸಕರಿಗೂ ರಜೆ ಘೋಷಿಸಿ ಬೆಂಗಳೂರು ನಗರ ಡಿಸಿ ಕೆ.ಎ.ದಯಾನಂದ್​ ಆದೇಶ ಹೊರಡಿಸಿದ್ದಾರೆ.

ಇಂದಿನ ಬಂದ್‌ಗೆ ಖಾಸಗಿ ಶಿಕ್ಷಣ ಒಕ್ಕೂಟ ರೂಪ್ಸಾ ಬೆಂಬಲ ನೀಡಿದೆ. ರೂಪ್ಸಾ ವ್ಯಾಪ್ತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಪೋಷಕರ ಸಂಘಟನೆಗಳು, ಖಾಸಗಿ ಶಾಲಾ ವಾಹನಗಳ ಮಾಲೀಕರು ಕೂಡಾ ಬಂದ್​ಗೆ ಬೆಂಬಲ ಘೋಷಿಸಿದ್ದಾರೆ. ಖಾಸಗಿ ಸಾರಿಗೆ ಒಕ್ಕೂಟದ 37 ಸಂಘಟನೆಗಳು ಬಂದ್‌ಗೆ ಸಾಥ್‌ ಕೊಟ್ಟಿವೆ. ಪ್ರವಾಸೋದ್ಯಮ ವಾಹನಗಳ ಮಾಲೀಕರು, ಸಣ್ಣ ಕೈಗಾರಿಕೆಗಳ ಒಕ್ಕೂಟ, ಬೆಂಗಳೂರು ವಕೀಲರ ಸಂಘ, ಬಿಡಿಎ ನೌಕರರ ಸಂಘ & BWSSB ನೌಕರರ ಸಂಘ , ಬೆಂಗಳೂರು ಬೀದಿ ಬದಿ ಸಂಘ, ಬಿಬಿಎಂಪಿ ನೌಕರರ ಸಂಘ, ಕರ್ನಾಟಕ ಜ್ಯುವೆಲ್ಲರಿ ಅಸೋಸಿಯೇಷನ್ ಸೇರಿದಂತೆ 95 ಸಂಘಟನೆಗಳು ಬಂದ್‌ಗೆ ಬೆಂಬಲ ಘೋಷಣೆ ಮಾಡಿವೆ.

ಇದನ್ನೂ ಓದಿ: Bengaluru Bandh News Live Updates: ಕಾವೇರಿ ವಿವಾದ: ಇಂದು ಬೆಂಗಳೂರು ಬಂದ್‌

ಇಂದು ಟಿ.ನರಸೀಪುರ ಬಂದ್​

ಇನ್ನು ಮತ್ತೊಂದೆಡೆ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿ ಇಂದು ಟಿ.ನರಸೀಪುರ ಕೂಡ ಬಂದ್ ಮಾಡಲಾಗಿದೆ. ಮೈಸೂರು ಜಿಲ್ಲೆಯಲ್ಲಿ ರೈತರು, ಹೋರಾಟಗಾರರ ಆಕ್ರೋಶ ಮುಂದುವರಿದಿದೆ. ಕಾವೇರಿ, ಕಬಿನಿ ಹಿತರಕ್ಷಣಾ ಸಮಿತಿಯಿಂದ ಇಂದು ಟಿ.ನರಸೀಪುರ ಬಂದ್​ ಕರೆ ಕೊಡಲಾಗಿದೆ. ಬಂದ್ ಹಿನ್ನೆಲೆ ಇಂದು ಸರ್ಕಾರಿ ಅನುದಾನ, ಅನುದಾನ ರಹಿತ ಶಾಲೆಗಳಿಗೆ ರಜೆ ಘೋಷಿಸಿ ಟಿ.ನರಸೀಪುರ ಬಿಇಒ ಶೋಭಾ ಆದೇಶ ಹೊರಡಿಸಿದ್ದಾರೆ.

ಮೈಸೂರು ಜಿಲ್ಲೆ ಟಿ.ನರಸೀಪುರ ಬಂದ್​ಗೆ 20ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ನೀಡಿವೆ. ರೈತ ಸಂಘಟನೆ, ದಲಿತ ಸಂಘರ್ಷ ಸಮಿತಿ, ಆಟೋ & ಕಾರು ಚಾಲಕರ ಸಂಘ, ಕರ್ನಾಟಕ ಪ್ರತಿಧ್ವನಿ ವೇದಿಕೆ ಸೇರಿದಂತೆ ಹಲವು ಸಂಘಟನೆಗಳು ಬೆಂಬಲ ನೀಡಿವೆ. ಟಿ.ನರಸೀಪುರ ಬಂದ್​ಗೆ ಎಲ್ಲರೂ ಸಹಕಾರ ನೀಡುವಂತೆ ರೈತರು ಮನವಿ ಮಾಡಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ
3 ಸುಲಭ ಕ್ಯಾಚ್ ಕೈಚೆಲ್ಲಿದ ಜೈಸ್ವಾಲ್: ಆಕ್ರೋಶ ಹೊರಹಾಕಿದ ರೋಹಿತ್ ಶರ್ಮಾ