ಘಟಿಕೋತ್ಸವ ಹಿನ್ನೆಲೆ; ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಪರೀಕ್ಷೆಗಳು ಮುಂದೂಡಿಕೆ

ಏಪ್ರಿಲ್ 6ರಿಂದ ನಡೆಯಬೇಕಿದ್ದ ಸ್ನಾತಕೋತ್ತರ ಪರೀಕ್ಷೆಗಳು ಏಪ್ರಿಲ್ 13ರಿಂದ ನಡೆಸಲು ನಿರ್ಧರಿಸಲಾಗಿದ್ದು, ಶೀಘ್ರವೇ ವಿವಿ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದು ಸುತ್ತೋಲೆ ಹೊರಡಿಸಲಾಗಿದೆ.

ಘಟಿಕೋತ್ಸವ ಹಿನ್ನೆಲೆ; ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಪರೀಕ್ಷೆಗಳು ಮುಂದೂಡಿಕೆ
ಬೆಂಗಳೂರು ನಗರ ವಿವಿ ಸುತ್ತೋಲೆ
Follow us
TV9 Web
| Updated By: shivaprasad.hs

Updated on:Mar 26, 2022 | 9:43 AM

ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯ (Bangalore City University) ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಬಗ್ಗೆ ವಿವಿ ಅಧಿಕೃತ ಆದೇಶ ಹೊರಡಿಸಿದೆ. ವಿವಿಯ ಘಟಿಕೋತ್ಸವ (Convocation) ಹಿನ್ನೆಲೆ ಪರೀಕ್ಷೆ ಮುಂದೂಡಲಾಗಿದೆ ಎಂದು ವಿವಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಅದರಂತೆ, 3, 5 ಮತ್ತು 7ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಏಪ್ರಿಲ್ 6ರಿಂದ ನಡೆಯಬೇಕಿದ್ದ ಸ್ನಾತಕೋತ್ತರ ಪರೀಕ್ಷೆಗಳು ಏಪ್ರಿಲ್ 13ರಿಂದ ನಡೆಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಶೀಘ್ರವೇ ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಎಸ್​​ಎಸ್​ಎಲ್​ಸಿ ಪರೀಕ್ಷೆಗೆ ಕೌಂಟ್​ಡೌನ್:

ಎಸ್ಎಸ್ಎಲ್​ಸಿ ಪರೀಕ್ಷೆಗೆ (SSLC Examinations 2022) ಕೌಂಟ್ ಡೌನ್ ಪ್ರಾರಂಭವಾಗಿದ್ದು, ಮಾರ್ಚ್​​ 28ರ ಸೋಮವಾರದಿಂದ ರಾಜ್ಯಾದ್ಯಂತ ಪರೀಕ್ಷೆ ಆರಂಭವಾಗಲಿದೆ. ಈ ಬಾರಿ 8,73,846 ವಿದ್ಯಾರ್ಥಿಗಳು ಎಸ್​ಎಸ್​​ಎಲ್​ಸಿ ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದ 15,387 ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದು, ಪರೀಕ್ಷೆ ಬರೆಯಲು 45,289 ಪರೀಕ್ಷಾ ಕೊಠಡಿಗಳ ಸಿದ್ಧತೆ ಮಾಡಲಾಗಿದೆ.

3,444 ಮುಖ್ಯ ಅಧೀಕ್ಷಕರ ನೇತೃತ್ವದಲ್ಲಿ SSLC ಪರೀಕ್ಷೆ ನಡೆಯಲಿದ್ದು, 49,817 ಕೊಠಡಿ ಮೇಲ್ವಿಚಾರಕರು ಭಾಗಿಯಾಗಲಿದ್ದಾರೆ. ಮಾರ್ಚ್ 28 ರಿಂದ ಎಪ್ರಿಲ್ 11ರವರೆಗೆ ಪರೀಕ್ಷೆ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 8,73,846 ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಈ ವರ್ಷ ಎಕ್ಸಾಂ ಬರೆಯುತ್ತಿದ್ದಾರೆ. ಅದರಲ್ಲಿ 4,52,732 ಗಂಡು ಮಕ್ಕಳು ಹಾಗೂ 4,21,110 ಹೆಣ್ಣು ಮಕ್ಕಳಿದ್ದಾರೆ. 04 ಜನ ತೃತಿಯ ಲಿಂಗಿಗಳು ಈ ಬಾರಿ ಪರೀಕ್ಷೆ ಎದುರಿಸುತ್ತಿದ್ದಾರೆ. ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ. ಪರೀಕ್ಷೆಗೆ ನೋಂದಾಯಿಸಿರುವ 15,387 ಶಾಲೆಗಳಲ್ಲಿ 5,717 ಸರ್ಕಾರಿ ಶಾಲೆಗಳು, 3,412 ಅನುದಾನಿತ ಶಾಲೆಗಳು ಹಾಗೂ 6,258 ಅನುದಾನ ರಹಿತ ಶಾಲೆಗಳಿವೆ. 3,444 ಪರೀಕ್ಷಾ ಕೇಂದ್ರಗಳಲ್ಲಿ 3,275 ಸಾಮಾನ್ಯ ಕೇಂದ್ರಗಳು ಹಾಗೂ 169 ಖಾಸಗಿ ಕೇಂದ್ರಗಳಿವೆ.

ಇದನ್ನೂ ಓದಿ:

8 ಬಾರಿ ಗೆದ್ದರೂ ಸತೀಶ್ ಮಹಾನಾರಿಗೆ ಸಚಿವ ಸ್ಥಾನ ಸಿಗದೆ ಇರುವುದಕ್ಕೆ ಇಲ್ಲಿದೆ ಕಾರಣ; ಕೆಲವೇ ದಿನಗಳಲ್ಲಿ ಅವರಿಗೆ ಕಾದಿದೆ ಗುಡ್​ ನ್ಯೂಸ್​ !

ಶಾಲೆಯ ಪರೀಕ್ಷೆಯಲ್ಲಿ ಪುನೀತ್​ ಬಗ್ಗೆ ಪ್ರಶ್ನೆ; ಸಖತ್​ ವೈರಲ್​ ಆಗಿದೆ ಪ್ರಶ್ನೆಪತ್ರಿಕೆಯ ಫೋಟೋ

Published On - 9:36 am, Sat, 26 March 22

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ