ಸ್ವಮೂತ್ರ ಸೇವನೆ ಕ್ಯಾನ್ಸರ್​ಗೆ ಮುದ್ದು; ಪಠ್ಯದ ವಿರುದ್ಧ ಆಯುರ್ವೇದ ತಜ್ಞ ಡಾ‌.ಗಿರಿಧರ ಕಜೆ ಆಕ್ಷೇಪ

ಮೂರ್ತದಿಂದ ಏಡ್ಸ್ ಗುಣ ಎಂಬುದು ಪ್ರಾಚೀನ ಗ್ರಂಥಗಳಲ್ಲಿ ದಾಖಲಾಗಿರುವ ಸಾಧ್ಯತೆ ಇಲ್ಲವೇ ಇಲ್ಲ ಎಂದು ಆಯುರ್ವೇದ ತಜ್ಞ ಡಾ‌.ಗಿರಿಧರ ಕಜೆ ಹೇಳಿದ್ದಾರೆ.

ಸ್ವಮೂತ್ರ ಸೇವನೆ ಕ್ಯಾನ್ಸರ್​ಗೆ ಮುದ್ದು; ಪಠ್ಯದ ವಿರುದ್ಧ ಆಯುರ್ವೇದ ತಜ್ಞ ಡಾ‌.ಗಿರಿಧರ ಕಜೆ ಆಕ್ಷೇಪ
ಸ್ವಮೂತ್ರ ಸೇವನೆ ಕ್ಯಾನ್ಸರ್​ಗೆ ಮುದ್ದು; ಪಠ್ಯದ ವಿರುದ್ಧ ಆಯುರ್ವೇದ ತಜ್ಞ ಡಾ‌.ಗಿರಿಧರ ಕಜೆ ಆಕ್ಷೇಪ
Follow us
TV9 Web
| Updated By: Rakesh Nayak Manchi

Updated on:Nov 19, 2022 | 7:43 AM

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿ ಪಠ್ಯಕ್ರಮದ ಅನ್ವಯ ಮೈಸೂರು ವಿಶ್ವವಿದ್ಯಾನಿಲಯ (Mysore University)ದ ಪಠ್ಯಕ್ರಮದಲ್ಲಿ, ಪದವಿ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಏಡ್ಸ್ ಹಾಗೂ ಕ್ಯಾನ್ಸರ್ (AIDS and Cancer)​ಗೆ ಸ್ವಮೂತ್ರ (Urine) ಪಾನವೇ ಮದ್ದು ಎಂಬುದನ್ನು ಉಲ್ಲೇಖಿಸಲಾಗಿತ್ತು. ಈ ವಿಚಾರವಾಗಿ ವಿದ್ಯಾರ್ಥಿ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೆ ಆಯುರ್ವೇದ ತಜ್ಞ ಡಾ‌.ಗಿರಿಧರ ಕಜೆ (Dr Giridhara Kaje) ಅವರು ಕೂಡ ಸ್ವಮೂತ್ರದಿಂದ ಕ್ಯಾನ್ಸರ್ ಚಿಕಿತ್ಸೆಗೆ ಮದ್ದು ಎಂಬುದನ್ನು ಅಲ್ಲಗೆಳೆದಿದ್ದಾರೆ. ಸ್ವಮೂತ್ರದಿಂದ ಕ್ಯಾನ್ಸರ್ ಚಿಕಿತ್ಸೆ ಎಂಬ ಮಾಹಿತಿಯನ್ನು ಉಲ್ಲೇಖಿಸಿದಿ ಕೆ.ಭೈರಪ್ಪನವರ ಪಠ್ಯದ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ ಅವರು, ಮನುಷ್ಯ ಮೂತ್ರದಿಂದ ಕ್ಯಾನ್ಸರ್ ಗುಣಪಡಿಸುವ ಬಗ್ಗೆ ವೈಜ್ಞಾನಿಕ ದಾಖಲೆಗಳಿಲ್ಲ. ಮೂರ್ತದಿಂದ ಏಡ್ಸ್ ಗುಣ ಎಂಬುದು ಪ್ರಾಚೀನ ಗ್ರಂಥಗಳಲ್ಲಿ ದಾಖಲಾಗಿರುವ ಸಾಧ್ಯತೆ ಇಲ್ಲವೇ ಇಲ್ಲ. ಹಾಗಿದ್ದರೆ ಲೇಖಕರು ಯಾವ ನೆಲಯ ಮೇಲೆ ಈ ವಿಚಾರವನ್ನು ಬರೆದಿದ್ದಾರೆ? ಸ್ವಂತ ಅನುಭವದ ಮೇಲೆ ಈ ಅಂಶ ಉಲ್ಲೇಖಿಸಿದ್ದಾರಾ ಎಂದು ಪ್ರಶ್ನಿಸಿದರು.

ಪದವಿ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಏಡ್ಸ್ ಹಾಗೂ ಕ್ಯಾನ್ಸರ್​​​ಗೆ ಸ್ವಮೂತ್ರ ಪಾನವೇ ಮದ್ದು ಎಂಬುದನ್ನು ಉಲ್ಲೇಖಿಸಲಾಗಿದೆ. ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ವಿದ್ಯಾರ್ಥಿ ಸಂಘಟನೆಗಳು ಕೂಡಲೇ ಪಠ್ಯ ಹಿಂಪಡೆಯಲು ಹಾಗೂ ಸರ್ಕಾರದ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದವು.

ಇದನ್ನೂ ಓದಿ: ಶಾಲೆಗಳಲ್ಲಿ Meditation ಕಲಿಕೆ: ಟೀಕೆಗಳ ನಡುವೆ ಮಕ್ಕಳಿಗೆ ಧ್ಯಾನ ಕಲಿಸಲು ರೆಡಿಯಾಗುತ್ತಿರುವ ಶಿಕ್ಷಣ ಇಲಾಖೆ

ಪದವಿ ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ಏಡ್ಸ್, ಕ್ಯಾನ್ಸರ್​ಗೆ ಸ್ವಮೂತ್ರ ಪಾನವೇ ಮದ್ದು ಎಂದು ಹೇಳಿರುವುದು ಅತ್ಯಂತ ಅವೈಜ್ಞಾನಿಕ ಮತ್ತು ಮೂರ್ಖತನದ ಪರಮಾವಧಿ ಎಂದು ಟೀಕಿಸಲಾಗಿದೆ. ಮೂತ್ರ ಚಿಕಿತ್ಸೆಯು ಪ್ರಕೃತಿ ಚಿಕಿತ್ಸೆಯ ಒಂದು ಭಾಗ, ಮೂತ್ರ ಸ್ವಪಾನದಿಂದ ಏಡ್ಸ್, ಕ್ಯಾನ್ಸರ್, ಕಣ್ಣು, ಕಿವಿ, ಹಲ್ಲು ಹಾಗೂ ಚರ್ಮರೋಗಗಳನ್ನು ನಿಯಂತ್ರಿಸಬಹುದು ಎಂಬ ಅವೈಜ್ಞಾನಿಕವಾದ ಅಂಶಗಳನ್ನು ವಿಶ್ವವಿದ್ಯಾನಿಲಯದ ಪಠ್ಯಕ್ರಮದಲ್ಲಿ ಅಳವಡಿಸಿರುವುದು ದುರಂತವೇ ಸರಿ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕುತ್ತಿದ್ದರು.

ವೈದ್ಯಕೀಯ ಸಮಾಜಶಾಸ್ತ್ರ ಪುಸ್ತಕದಲ್ಲಿ ವೈಜ್ಞಾನಿಕವಾಗಿ ಸಾಬೀತಾಗಿರುವ ಅಂಶಗಳನ್ನು ಸೇರಿಸಬೇಕೆ ಹೊರತು ಕೇವಲ ಪ್ರಾಚೀನ ಗ್ರಂಥಗಳನ್ನು ಉಲ್ಲೇಖ ಮಾಡಿ ಈ ರೀತಿ ಪಠ್ಯಗಳನ್ನು ರಚಿಸಬಾರದು. ಈ ಕೂಡಲೇ ಪಠ್ಯವನ್ನು ಹಿಂಪಡೆಯಬೇಕು ಎಂದು AIDSO ವಿದ್ಯಾರ್ಥಿ ಸಂಘಟನೆ ಆಗ್ರಹಿಸಿತ್ತು. ಅಲ್ಲದೆ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಗೆ ವೈಜ್ಞಾನಿಕ, ಪ್ರಜಾತಂತ್ರ, ಧರ್ಮ ನಿರಪೇಕ್ಷತ ಶಿಕ್ಷಣವನ್ನು ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಬೇಕು ಎಂದು ಹೇಳಿತ್ತು.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:43 am, Sat, 19 November 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್