ಫೇಲಾದ ಹಳೇ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಸುವರ್ಣವಕಾಶ ನೀಡಿದ ಬೆಂಗಳೂರು ವಿವಿ

2004ರಿಂದ 2027-18 ಸಾಲಿನ ಅವಧಿಯಲ್ಲಿ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳಿಗೆ ಪುನಃ ಪರೀಕ್ಷೆ ಬರೆಯಲು ಬೆಂಗಳೂರು ವಿಶ್ವವಿದ್ಯಾಲಯ ಅವಕಾಶ ಕಲ್ಪಿಸಿಕೊಟ್ಟಿದೆ.

ಫೇಲಾದ ಹಳೇ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಸುವರ್ಣವಕಾಶ ನೀಡಿದ ಬೆಂಗಳೂರು ವಿವಿ
Bangalore university
Updated By: ರಮೇಶ್ ಬಿ. ಜವಳಗೇರಾ

Updated on: Nov 17, 2022 | 11:10 PM

ಬೆಂಗಳೂರು: ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಫೇಲ್​ ಆಗಿರುವ ಹಳೇ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಬೆಂಗಳೂರು ವಿಶ್ವವಿದ್ಯಾಲಯ (Bengaluru University) ಅವಕಾಶ ನೀಡಿದೆ. ಈ ಮೂಲಕ ಅನುತ್ತೀರ್ಣಗೊಂಡು ಉನ್ನತ ಶಿಕ್ಷಣದಿಂದ ವಂಚಿತರಾಗಿರುವ ವಿದ್ಯಾರ್ಥಿಗಳಿಗೆ (Students) ಬೆಂಗಳೂರು ವಿವಿ  ಸುವರ್ಣವಕಾಶ ಕಲ್ಪಿಸಿಕೊಟ್ಟಿದೆ.

2004ರಿಂದ 2027-18 ಸಾಲಿನ ಅವಧಿಯಲ್ಲಿ ಅನುತ್ತೀರ್ಣಗೊಂಡಿರುವ ವಿದ್ಯಾರ್ಥಿಗಳಿಗೆ ಪುನಃ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಟ್ಟಿದೆ. ಪದವಿ ಹಾಗೂ ಸ್ನಾತಕೋತ್ತರ ಪದವಿಯ ಎಲ್ಲಾ ಸೆಮಿಸ್ಟರ್ ಪರೀಕ್ಷೆ ಹಾಗೂ ದೂರ ಶಿಕ್ಷಣ ಮೂಲಕ ಪದವಿ ವ್ಯಾಸಾಂಗ ಮಾಡಿದ್ದ ವಿದ್ಯಾರ್ಥಿಗಳಿಗೂ ಅನ್ವಯವಾಗಲಿದೆ. ಇದರೊಂದಿಗೆ ಅನುತ್ತೀರ್ಣಗೊಂಡಿದ್ದ ಹಲವು ವಿದ್ಯಾರ್ಥಿಗಳಿಗೆ ಬಯಸದೇ ಬಂದ ಭಾಗ್ಯವಾಗಿದೆ.

ಹಲವು ವಿದ್ಯಾರ್ಥಿಗಳು ಫೇಲಾಗಿ ಉನ್ನತ ಶಿಕ್ಷಣದಿಂದ ವಂಚಿತರಾಗಿ ಉನ್ನತ ಮಟ್ಟದ ಉದ್ಯೋಗ ಪಡೆದುಕೊಳ್ಳುವಲ್ಲಿ ವಿಫಲರಾಗಿದ್ದರು. ಹೀಗಾಗಿ ಇದನ್ನು ತಪ್ಪಿಸಿಸುವ ದೃಷ್ಟಿಯಿಂದ ಬೆಂಗಳೂರು ವಿಶ್ವವಿದ್ಯಾಲಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯುವ ಗೋಲ್ಡನ್ ಚಾನ್ಸ್ ಕೊಟ್ಟಿದೆ.

ಬೆಂಗಳೂರು ವಿವಿಯ 2004ರಿಂದ 2027-18 ಸಾಲಿನ ಅವಧಿಯಲ್ಲಿ ಫೇಲಾದ ವಿದ್ಯಾರ್ಥಿಗಳು ಪರೀಕ್ಷೆ ಶುಲ್ಕ ಕಟ್ಟಿ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದಾಗಿದ್ದು, 2023ರ ಫೆಬ್ರವರಿಯಲ್ಲಿ ಪರೀಕ್ಷೆಗಳನ್ನು ನಡೆಸಲು ವಿಶ್ವವಿದ್ಯಾಲಯ ಚಿಂತನೆ ನಡೆಸಿದೆ. ಪರೀಕ್ಷೆ ಶುಲ್ಕ, ಕೊನೆ ದಿನಾಂಕ ಸೇರಿದಂತೆ ಇತರೆ ಮಾಹಿತಿಯೊಂದಿಗೆ ಶೀಘ್ರದಲ್ಲೇ ಅಧಿಕೃತವಾಗಿ ಸುತ್ತೋಲೆ ಹೊರಡಿಸಲಿದೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:05 pm, Thu, 17 November 22