ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ನಾಲ್ಕು ಕಾಲೇಜುಗಳಿಗೆ ಅನುಮತಿ: ಬಸವರಾಜ ಬೊಮ್ಮಾಯಿ

TV9 Digital Desk

| Edited By: ganapathi bhat

Updated on:Oct 12, 2021 | 8:55 PM

NEP: ರಾಷ್ಟ್ರೀಯ ಶಿಕ್ಷಣ ನೀತಿಯಿಂದ ದೊಡ್ಡ ಬದಲಾವಣೆ ಆಗಲಿದೆ. ಕರ್ನಾಟಕದ ತಾಂತ್ರಿಕ ಶಿಕ್ಷಣದಲ್ಲಿ ದೊಡ್ಡ ಬದಲಾವಣೆ ಆಗುತ್ತದೆ. ಇಷ್ಟು ದೊಡ್ಡ ಪ್ರಮಾಣದ ಬದಲಾವಣೆ ಯಾವತ್ತೂ ಆಗಿಲ್ಲ ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ನಾಲ್ಕು ಕಾಲೇಜುಗಳಿಗೆ ಅನುಮತಿ: ಬಸವರಾಜ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Follow us on

ಬೆಂಗಳೂರು: ಇಂಜಿಯರಿಂಗ್​ ಕಾಲೇಜುಗಳಲ್ಲಿ 4 ವರ್ಷದ ಬಿಎಸ್ಸಿ ಆನರ್ಸ್ ಆರಂಭಿಸಲು ಅನುಮತಿ ಪತ್ರ ನೀಡಲಾಗಿದೆ. ನೂತನ ಶಿಕ್ಷಣ ಪದ್ಧತಿ (NEP) ಅನುಸಾರ ಇಂಜಿನಿಯರಿಂಗ್ ಶಿಕ್ಷಣ ಅನುಷ್ಠಾನ ಮಾಡಲಾಗುವುದು ಎಂದು ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಇಂಜಿನಿಯರಿಂಗ್ ಶಿಕ್ಷಣಕ್ಕೆ ಒಪ್ಪಿಗೆ ನೀಡಲಾಗಿದೆ. ಈ ಸಂಬಂಧ ನಾಲ್ಕು ಕಾಲೇಜುಗಳಿಗೆ ಅನುಮತಿ ಪತ್ರವನ್ನು ನೀಡಲಾಗಿದೆ. ಕನ್ನಡ ಭಾಷೆಯಲ್ಲಿ ಇಂಜಿನಿಯರಿಂಗ್ ಸಿಲಬಸ್ ಬಿಡುಗಡೆ ಮಾಡಿರುವುದು ಹೊಸ ಅಧ್ಯಾಯವಾಗಿದೆ. ಇದೊಂದು ಐತಿಹಾಸಿಕ ದಿನ ಎಂದು ಸಿಎಂ ಬೊಮ್ಮಾಯಿ ಸಂತಸ ಹಂಚಿಕೊಂಡಿದ್ದಾರೆ.

ಅತ್ಯಂತ ಪ್ರಗತಿಪರವಾಗಿ ಎನ್​ಇಪಿ ಜಾರಿಗೊಳಿಸುವಲ್ಲಿ ಯಶಸ್ವಿ ಆಗಿದ್ದೇವೆ. ಸಚಿವ ಡಾ. ಅಶ್ವತ್ಥ್​​ ನಾರಾಯಣ ಯಶಸ್ವಿಯಾಗಿದ್ದಾರೆ. ಎನ್​ಇಪಿ ಅನುಸಾರ ಇಂಜಿನಿಯರಿಂಗ್ ಶಿಕ್ಷಣ ಅನುಷ್ಠಾನ ಮಾಡುತ್ತೇವೆ ಎಂದು ಬೊಮ್ಮಾಯಿ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯಿಂದ ದೊಡ್ಡ ಬದಲಾವಣೆ ಆಗಲಿದೆ. ಕರ್ನಾಟಕದ ತಾಂತ್ರಿಕ ಶಿಕ್ಷಣದಲ್ಲಿ ದೊಡ್ಡ ಬದಲಾವಣೆ ಆಗುತ್ತದೆ. ಇಷ್ಟು ದೊಡ್ಡ ಪ್ರಮಾಣದ ಬದಲಾವಣೆ ಯಾವತ್ತೂ ಆಗಿಲ್ಲ ಎಂದು ಅವರು ಹೇಳಿದ್ದಾರೆ.

ಉನ್ನತ ಶಿಕ್ಷಣದಲ್ಲಿ ದೊಡ್ಡ ಪ್ರಮಾಣದಲ್ಲಿ ತಯಾರಿ ಮಾಡಿ ರಾಷ್ಟ್ರೀಯ ಶಿಕ್ಷಣ ನೀತಿಗೊಳಪಡಿಸಲಾಗುತ್ತಿದೆ. ನಾನು ಕೂಡ ಇಂಜಿನಿಯರಿಂಗ್ ಸ್ಟೂಡೆಂಟ್ ಆಗಿದ್ದೆ. ನನ್ನ ವಿಷಯದ ಬಗ್ಗೆ ಹೊಸತನ ಕೊಡುವ ಪ್ರಯತ್ನ ಮಾಡಲಾಗಿದೆ. ಹೊಸತನ ಕೊಡುವ ಪ್ರಯತ್ನವನ್ನು ನಾನು ಉದ್ಘಾಟಿಸಿದ್ದೇನೆ. ನಾನೇ ಉದ್ಘಾಟನೆ ಮಾಡಿದ್ದು ತುಂಬಾ ಖುಷಿ ತಂದಿದೆ. ಬದಲಾವಣೆಗೆ ವಿದ್ಯಾರ್ಥಿಗಳು ತಯಾರಿ ಮಾಡಿಕೊಳ್ಳಬೇಕು ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮೊದಲು ಗುರುಗಳ ಮನಸ್ಥಿತಿ ಬದಲಾವಣೆಯಾಗಬೇಕು. ಬಳಿಕ ವಿದ್ಯಾರ್ಥಿಗಳ ಮನಸ್ಥಿತಿ ಬದಲಾವಣೆಯಾಗಲಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ನಂಬಿಕೆ ಇರಬೇಕು. ಹೊಸ ಶಿಕ್ಷಣ ನೀತಿ ಬರಬೇಕು. ಈಗ ಪರ್ಸೆಂಟೇಜ್ ಇದೆ ಇದು ಪರ್ಸೆಂಟೈಲ್ ಆಗಲಿ. ವಿರೋಧ ಪಕ್ಷಗಳು ಎನ್​​ಇಪಿಯನ್ನು ವಿರೋಧಿಸುತ್ತಿವೆ. ಆದ್ರೆ ನಮ್ಮ ಸರ್ಕಾರ ಗಟ್ಟಿ ನಿಲುವಿನಿಂದ ಜಾರಿಗೆ ತರ್ತಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.

ಎನ್​ಇಪಿ ಅನುಸಾರ ಇಂಜಿನಿಯರಿಂಗ್ ಶಿಕ್ಷಣ ಅನುಷ್ಠಾನ ಕಾರ್ಯಕ್ರಮದಲ್ಲಿ ಡಾ. ಅಶ್ವತ್ಥ್​ ನಾರಾಯಣ ಮಾತನಾಡಿದ್ದಾರೆ. 66 ಸಂಸ್ಥೆಗಳಿಗೆ ಬಿಎಸ್ಸಿ ಆನರ್ಸ್ ಆರಂಭಿಸಲು ಒಪ್ಪಿಗೆ ನೀಡಲಾಗಿದೆ. ಉನ್ನತ ಶಿಕ್ಷಣದಲ್ಲಿ ಗುಣಮಟ್ಟ ಹೆಚ್ಚಳಕ್ಕೆ ಪ್ರಯತ್ನ ಮಾಡಲಾಗುತ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಪ್ರಯತ್ನಿಸಲಾಗುತ್ತದೆ. ಎನ್​ಇಪಿಯನ್ನು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಅಳವಡಿಸಿ, ಉತ್ತಮವಾಗಿ ಸಂಸ್ಥೆಗಳನ್ನ ಬೆಳೆಸುವ ಪ್ರಯತ್ನ ನಡೆಸಲಾಗುತ್ತಿದೆ. ಈ ಕಾರ್ಯಕ್ಕೆ ಸರ್ಕಾರ ಸಹಕಾರ ನೀಡಲಿದೆ ಎಂದು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಕಲ್ಲಿದ್ದಲು, ಕೊರೊನಾ ಲಸಿಕೆ ಪೂರೈಸಲು ಮನವಿ; ದೆಹಲಿ ಪ್ರವಾಸ ಯಶಸ್ವಿಯಾಗಿದೆ ಎಂದ ಬಸವರಾಜ ಬೊಮ್ಮಾಯಿ

ಇದನ್ನೂ ಓದಿ: ‘ನಮ್ಮ ಮನೆಯಲ್ಲೂ ಹೆಂಡತಿ ಗದರುತ್ತಾರೆ’; ‘ಅನುಬಂಧ’ ಕಾರ್ಯಕ್ರಮದಲ್ಲಿ ಅಚ್ಚರಿ ವಿಚಾರ ಬಿಚ್ಚಿಟ್ಟ ಸಿಎಂ ಬಸವರಾಜ ಬೊಮ್ಮಾಯಿ

ತಾಜಾ ಸುದ್ದಿ

Related Stories

Most Read Stories

Click on your DTH Provider to Add TV9 Kannada