ಮದರಸಾಗಳಲ್ಲಿ ಇವತ್ತಿನ ಕಾಲದ ಶಿಕ್ಷಣ ಕೊಡುತ್ತಿಲ್ಲ, ಏಕರೂಪದ ಶಿಕ್ಷಣ ನೀಡುವ ಆಸೆ ನಮಗಿದೆ: ಬಿ.ಸಿ ನಾಗೇಶ್

| Updated By: ganapathi bhat

Updated on: Mar 21, 2022 | 11:53 AM

ಅನುದಾನ ಪಡೆಯುತ್ತಿರುವ ಮದರಸಾಗಳಲ್ಲಿ ಔಪಚಾರಿಕ ಶಿಕ್ಷಣ ನೀಡಲಾಗುತ್ತಿದೆ. ವೃತ್ತಿಪರ ಶಿಕ್ಷಣ ನೀಡುವುದಕ್ಕೆ ನಾವು ಪ್ರಯತ್ನ ಮಾಡುತ್ತೇವೆ. ಮದರಸಾಗಳಲ್ಲಿ ಶಿಕ್ಷಣ ಪದ್ಧತಿ ಜಾರಿಗೆ ಪ್ರಯತ್ನಿಸುತ್ತೇವೆ ಎಂದು ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಮದರಸಾಗಳಲ್ಲಿ ಇವತ್ತಿನ ಕಾಲದ ಶಿಕ್ಷಣ ಕೊಡುತ್ತಿಲ್ಲ, ಏಕರೂಪದ ಶಿಕ್ಷಣ ನೀಡುವ ಆಸೆ ನಮಗಿದೆ: ಬಿ.ಸಿ ನಾಗೇಶ್
ಶಿಕ್ಷಣ ಸಚಿವ ಬಿ ಸಿ ನಾಗೇಶ್
Follow us on

ಬೆಂಗಳೂರು: ಮದರಸಾಗಳಲ್ಲಿ ಇವತ್ತಿನ ಕಾಲದ ಶಿಕ್ಷಣವನ್ನು ಕೊಡುತ್ತಿಲ್ಲ. ಮದರಸಾಗಳು ಕೇಳಿದರೆ ಔಪಚಾರಿಕ ಶಿಕ್ಷಣ ಕೊಡಲು ಸಿದ್ಧ. ಏಕರೂಪದ ಶಿಕ್ಷಣ ನೀಡುವ ಆಸೆ ನಮಗಿದೆ. ಆದರೆ ಸದ್ಯಕ್ಕೆ ಈ ಬಗ್ಗೆ ಯಾವುದೇ ನಿರ್ಧಾರ ಮಾಡಿಲ್ಲ. ಈ ಬಗ್ಗೆ ಚರ್ಚೆ ಬಳಿಕ ಅಂತಿಮವಾಗಿ ನಿರ್ಧಾರ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಸೋಮವಾರ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿಕೆ ನೀಡಿದ್ದಾರೆ.

ಮದರಸಾಗಳಲ್ಲಿ ವೃತ್ತಿಪರ ಶಿಕ್ಷಣ ಸಿಗುತ್ತಿಲ್ಲ. ಮದರಸಾಗಳಿಗೆ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅನುದಾನ ನೀಡಲಾಗುತ್ತಿದೆ. ಅನುದಾನ ಪಡೆಯುತ್ತಿರುವ ಮದರಸಾಗಳಲ್ಲಿ ಔಪಚಾರಿಕ ಶಿಕ್ಷಣ ನೀಡಲಾಗುತ್ತಿದೆ. ವೃತ್ತಿಪರ ಶಿಕ್ಷಣ ನೀಡುವುದಕ್ಕೆ ನಾವು ಪ್ರಯತ್ನ ಮಾಡುತ್ತೇವೆ. ಮದರಸಾಗಳಲ್ಲಿ ಶಿಕ್ಷಣ ಪದ್ಧತಿ ಜಾರಿಗೆ ಪ್ರಯತ್ನಿಸುತ್ತೇವೆ ಎಂದು ಶಿಕ್ಷಣ ಇಲಾಖೆ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು. ಹೀಗಾಗಿ ಕೆಲ ಮದರಸಾಗಳನ್ನು ಶಿಕ್ಷಣ ಪದ್ಧತಿಗೆ ತರಲು ಪ್ರಯತ್ನ ಮಾಡುತ್ತೇವೆ ಎಂದು ಇದಕ್ಕೂ ಮೊದಲು ಸಚಿವ ಬಿ.ಸಿ. ನಾಗೇಶ್ ಹೇಳಿಕೆ ನೀಡಿದ್ದರು. ಅಲ್ಪಸಂಖ್ಯಾತ ಮಕ್ಕಳು ಇವತ್ತಿನ ಶಿಕ್ಷಣ ಪದ್ದತಿ (Education System) ಯಿಂದ ದೂರ ಉಳಿಯಬಾರದು. ಒಂದಷ್ಟುಕಡೆ ಮದರಸಾಗಳನ್ನು ಶಿಕ್ಷಣ ಪದ್ದತಿಯಲ್ಲಿ ತರುವ ಪ್ರಯತ್ನ ಮಾಡುತ್ತೇವೆ ಎಂದು ಗೋಕರ್ಣದಲ್ಲಿ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದರು.

ಅವರು ಸಹ ನಮ್ಮ ಎಲ್ಲಾ ಮಕ್ಕಳಂತೆ ಈ ಶಿಕ್ಷಣ ಪದ್ದತಿಗೆ ಬರಬೇಕು. ಅವರು ಸಹಿತ ಮುಂದುವರಿಯಬೇಕು ಎನ್ನುವಂತ ಕಾರಣದಿಂದ ಮುಂದಿನ ದಿನದಲ್ಲಿ ಈ ಬಗ್ಗೆ ಯೋಚನೆ ಮಾಡುತ್ತೇವೆ. ಅಲ್ಪಸಂಖ್ಯಾತ ನಾಯಕರ ಗಮನಕ್ಕೂ ಬಂದಿದೆ. ಮದರಸಕ್ಕೆ ಸೇರುವವರ ಸಂಖ್ಯೆ ಕಡಿಮೆಯಾಗಿ ನಮ್ಮ ಶಾಲೆಗೆ ಸೇರುವವರ ಸಂಖ್ಯೆ ಹೆಚ್ಚಾಗಿದೆ. ಇವತ್ತಿನ ಪ್ರಪಂಚದಲ್ಲಿ ಬದುಕುವುದಾದರೇ ಈ ಶಿಕ್ಷಣ ಪದ್ಧತಿ ಬೇಕು. ಅಲ್ಪಸಂಖ್ಯಾತರಿಗೆ ಈ ದೇಶದಲ್ಲಿ ಒಂದಷ್ಟು ಅವಕಾಶ ಮಾಡಿಕೊಟ್ಟಿದ್ದೀವಿ ಆ ಪ್ರಕಾರವಾಗಿ ಆಯ್ಕೆ ಮಾಡಿಕೊಳ್ಳುತ್ತಾರೆ. ಶಾಲೆಗೆ ಬರಲೇಬೇಕು ಎಂದು ಅವರ ಅಧಿಕಾರ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಶೇಕಡಾ 99.9 ಆ ಮಕ್ಕಳು ಶಾಲೆಗೆ ಬರುತ್ತಿದ್ದಾರೆ. ಶೇಕಡಾ 1 ಮಾತ್ರ ಬರುತ್ತಿಲ್ಲ. ಅವರನ್ನು ತರುವಂತ ಪ್ರಯತ್ನ ಮಾಡುತ್ತೇವೆ. ಆದರೆ ಎಳೆದುಕೊಂಡು ಬರುವ ಪ್ರಯತ್ನ ಮಾಡುವುದಿಲ್ಲ ಎಂದಿದ್ದರು

ಇದನ್ನೂ ಓದಿ: ಅಲ್ಪಸಂಖ್ಯಾತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು; ಕೆಲ ಮದರಸಾಗಳನ್ನು ಶಿಕ್ಷಣ ಪದ್ಧತಿಗೆ ತರಲು ಪ್ರಯತ್ನ: ಬಿಸಿ ನಾಗೇಶ್

ಇದನ್ನೂ ಓದಿ: ಅಲ್ಪಸಂಖ್ಯಾತ ಮಕ್ಕಳು ಶಿಕ್ಷಣ ಪದ್ಧತಿಯಿಂದ ದೂರ ಉಳಿಯಬಾರದು; ಶಿಕ್ಷಣ ಸಚಿವ ಬಿ.ಸಿ ನಾಗೇಶ್