ಕರ್ನಾಟಕದಾದ್ಯಂತ ಏಕಕಾಲಕ್ಕೆ ಶಾಲೆಗಳನ್ನು ಬಂದ್ ಮಾಡುವುದಿಲ್ಲ: ಬಿಸಿ ನಾಗೇಶ್ ಸ್ಪಷ್ಟನೆ
ಒಂದು ವಾರದಲ್ಲಿ ರಾಜ್ಯದಲ್ಲಿ 900 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢವಾಗಿದೆ. 1 ರಿಂದ 10 ನೇ ತರಗತಿಯ 900 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ ಎಂದು ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಕರ್ನಾಟಕ ರಾಜ್ಯಾದ್ಯಂತ ಏಕಕಾಲಕ್ಕೆ ಶಾಲೆಗಳನ್ನು ಬಂದ್ ಮಾಡುವುದಿಲ್ಲ. ಕೊರೊನಾ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಜಿಲ್ಲಾಧಿಕಾರಿ ನಿರ್ಧರಿಸುತ್ತಾರೆ. ಶಾಲಾ- ಕಾಲೇಜು ಬಂದ್ ಬಗ್ಗೆ ಆಯಾ ಡಿಸಿ ನಿರ್ಧರಿಸ್ತಾರೆ ಎಂದು ಟಿವಿ9ಗೆ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಆಯಾ ಅಧಿಕಾರಿಗಳೇ ನಿರ್ಧರಿಸುವಂತೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕೊರೊನಾ ಹೆಚ್ಚಿರುವ ಜಿಲ್ಲೆಗಳಲ್ಲಿ ಡಿಸಿಗಳು ಈ ಬಗ್ಗೆ ನಿರ್ಧರಿಸ್ತಾರೆ ಎಂದು ತಿಳಿಸಿದ್ದಾರೆ.
ಅಲ್ಲಿನ ಅವಶ್ಯಕತೆಗಳಿಗೆ ತಕ್ಕಂತೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಯಾರೂ ಆತಂಕಕ್ಕೆ ಒಳಗಾಗುವುದು ಬೇಡ. ಮಕ್ಕಳ ಆರೋಗ್ಯದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ಮಾಡಲ್ಲ ಎಂದು ಟಿವಿ9ಗೆ ಶಿಕ್ಷಣ ಇಲಾಖೆ ಸಚಿವ ಬಿ.ಸಿ. ನಾಗೇಶ್ ಹೇಳಿಕೆ ನೀಡಿದ್ದಾರೆ. ಒಂದು ವಾರದಲ್ಲಿ ರಾಜ್ಯದಲ್ಲಿ 900 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢವಾಗಿದೆ. 1 ರಿಂದ 10 ನೇ ತರಗತಿಯ 900 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗುಲಿದೆ ಎಂದು ಬಿ.ಸಿ. ನಾಗೇಶ್ ಮಾಹಿತಿ ನೀಡಿದ್ದಾರೆ.
ಜನವರಿ 01 ರಿಂದ ಈವರೆಗೆ ಯಾವ ಜಿಲ್ಲೆಯಲ್ಲಿ ಎಷ್ಟು ಮಕ್ಕಳಿಗೆ (1ರಿಂದ 14 ವರ್ಷದ) ಕೊರೊನಾ ಸೋಂಕು ತಗುಲಿದೆ:
-
- ಕೋಲಾರ- 43
- ಮೈಸೂರು- 209
- ವಿಜಯಪುರ- 32
- ಗದಗ- 5
- ದಕ್ಷಿಣ ಕನ್ನಡ- 329
- ಚಿಕ್ಕಬಳಳಾಪುರ- 19
- ಬೆಳಗಾವಿ- 152
- ಚಿಕ್ಕಮಗಳೂರು- 58
- ಕೊಡಗು- 5
- ಕಲಬುರಗಿ- 10
- ಚಿತ್ರದುರ್ಗ- 10
- ದಾರವಾಡ- 41
- ಮಂಡ್ಯ- 124
- ಹಾಸನ- 58
- ದಾವಣಗೆರೆ- 43
- ಬೆಂಗಳೂರು ಗ್ರಾಮಾಂತರ- 71
ತುಮಕೂರು ಜಿಲ್ಲೆ ಶಿರಾ ತಾಲೂಕಿನ ಅಂಬೇಡ್ಕರ್ ವಸತಿ ಶಾಲೆಯಲ್ಲಿ 38 ಮಕ್ಕಳಿಗೆ ಕೊರೊನಾ ಸೋಂಕು ದೃಢವಾಗಿದೆ. ಬೆಳಗಾವಿಯ ಕಾಗವಾಡ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಶ್ರೀಮಂತ ಪಾಟೀಲ್‌ಗೆ ಕೊವಿಡ್ ಪಾಸಿಟಿವ್ ಆಗಿದೆ. ಮಹಾರಾಷ್ಟ್ರದ ಸಾಂಗ್ಲಿ ನಿವಾಸದಲ್ಲಿ ಹೋಮ್ ಐಸೋಲೇಷನ್ ಆಗಿದ್ದಾರೆ.
ಡಾ. ಬಾಲಗಂಗಾಧರನಾಥ ಶ್ರೀ ಜಯಂತಿ ಕಾರ್ಯಕ್ರಮ ಸ್ಥಳಾಂತರ
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆ, ಡಾ. ಬಾಲಗಂಗಾಧರನಾಥ ಶ್ರೀ ಜಯಂತಿ ಕಾರ್ಯಕ್ರಮ ಸ್ಥಳಾಂತರ ಮಾಡಲಾಗಿದೆ. ಚಿಕ್ಕಬಳ್ಳಾಪುರದಿಂದ ಆದಿಚುಂಚನಗಿರಿ ಸಂಸ್ಥಾನ ಮಠಕ್ಕೆ ಶಿಫ್ಟ್ ಮಾಡಲಾಗಿದೆ. ಈ ಬಗ್ಗೆ ಡಾ. ನಿರ್ಮಲಾನಂದನಾಥ ಸ್ವಾಮೀಜಿಯವರಿಂದ ನಿರ್ಧಾರ ಕೈಗೊಳ್ಳಲಾಗಿದೆ. ಜ.18ರಂದು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿತ್ತು, ಚಿಕ್ಕಬಳ್ಳಾಪುರದ ಶಾಖಾ ಮಠದಲ್ಲಿ ಆಚರಿಸಲು ನಿರ್ಧರಿಸಿದ್ರು. ಇದೀಗ ಕೊವಿಡ್ ಹಿನ್ನೆಲೆ ಮಠದಲ್ಲೇ ಸರಳವಾಗಿ ಕಾರ್ಯಕ್ರಮ ಆಚರಿಸಲು ನಿರ್ಧರಿಸಲಾಗಿದೆ.
ಇದನ್ನೂ ಓದಿ: ಸಿಎಂ ಬೊಮ್ಮಾಯಿಗೆ ಕೊರೊನಾ ಸೋಂಕು ಹಿನ್ನೆಲೆ; ಕರೆ ಮಾಡಿ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಇದನ್ನೂ ಓದಿ: ಕರ್ನಾಟಕದಲ್ಲಿ ಕೊವಿಡ್ ಮಾರ್ಗಸೂಚಿ ವಿಸ್ತರಣೆ ಮಾಡಿ ಆದೇಶ; ಜನವರಿ ಅಂತ್ಯದವರೆಗೆ ಕಠಿಣ ನಿಯಮ
Published On - 6:48 pm, Tue, 11 January 22