AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜ. 21ರಂದು ಬೆಳಗಾವಿಯಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ!

ಮಹಾತ್ಮ ಗಾಂಧೀಜಿಯವರು 1924ನೇ ಸಾಲಿನ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿರುವ ಶತಮಾನೋತ್ಸವದ ಅಂಗವಾಗಿ ಬೆಳಗಾವಿ ಸುವರ್ಣಸೌಧದಲ್ಲಿ ಜನವರಿ 21ರ'ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುತ್ಥಳಿ ಅನಾವರಣ' ಸಮಾರಂಭ ಆಯೋಜಿಸಲಾಗಿದೆ. ಹಾಗೇ ಗಾಂಧಿ ಭಾರತ ಸಮಾವೇಶ ಆಯೋಜಿಸಲಾಗಿದೆ. ಹಿನ್ನೆಲೆಯಲ್ಲಿ ಬೆಳಗಾವಿ ಗ್ರಾಮೀಣ, ನಗರ ಶೈಕ್ಷಣಿಕ ವಲಯದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಜ. 21ರಂದು ಬೆಳಗಾವಿಯಲ್ಲಿ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಡಳಿತ!
Belagavi School Holiday
Sahadev Mane
| Updated By: ರಮೇಶ್ ಬಿ. ಜವಳಗೇರಾ|

Updated on: Jan 20, 2025 | 8:54 PM

Share

ಬೆಳಗಾವಿ (ಜನವರಿ.20): ಗಾಂಧಿ ಭಾರತ ಸಮಾವೇಶ ಹಿನ್ನೆಲೆಯಲ್ಲಿ ನಾಳೆ ಅಂದರೆ ಜನವರಿ 21ರಂದು ಬೆಳಗಾವಿ ಗ್ರಾಮೀಣ, ನಗರ ಶೈಕ್ಷಣಿಕ ವಲಯದ ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆ, ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷಾ ದೃಷ್ಟಿಯಿಂದ ನಾಳೆ ಬೆಳಗಾವಿ ತಾಲೂಕಿನ ನಗರ ಹಾಗೂ ಗ್ರಾಮೀಣ ಭಾಗದ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಒಂದು ದಿನದ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.

ಬೆಳಗಾವಿ ಸುವರ್ಣ ಸೌಧದ ಬಳಿ ಗಾಂಧಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ದೇಶದ ವಿವಿಧ ಗಣ್ಯರು, ಸ್ವಾತಂತ್ರ್ಯ ಹೋರಾಟಗಾರರು, ಸಾರ್ವಜನಿಕರು, ಮಹಿಳೆಯರು ಹಾಗೂ ವೃದ್ಧರು ಸೇರಿ ಲಕ್ಷಾಂತರ ಜನರು ಭಾಗವಹಿಸಲಿದ್ದಾರೆ. ಅಲ್ಲದೇ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಂಭವವಿದ್ದು, ಶಾಲಾಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮವಾಗಿ ಬೆಳಗಾವಿ ತಾಲೂಕು ಶೈಕ್ಷಣಿಕ ವಲಯದ ಶಾಲೆಗಳಿಗೆ ರಜೆ ಘೋಷಣೆ ಮಾಡುವಂತೆ ಶಿಕ್ಷಣ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿತ್ತು. ಈ ಪ್ರಸ್ತಾವನೆಯನ್ನು ಪರಿಶೀಲನೆ ಮಾಡಿದ ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಅವರು ರಜೆ ನೀಡಿದ್ದಾರೆ.

ಬೆಳಗಾವಿ ಜಿಲ್ಲಾಧಿಕಾರಿ ಆದೇಶದಲ್ಲೇನಿದೆ?

ಮಹಾತ್ಮ ಗಾಂಧೀಜಿಯವರು 1924ನೇ ಸಾಲಿನ ಸ್ವಾತಂತ್ರ್ಯ ಸಂಗ್ರಾಮದ ಐತಿಹಾಸಿಕ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಅಧ್ಯಕ್ಷತೆ ವಹಿಸಿರುವ ಶತಮಾನೋತ್ಸವದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ‘ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪುತ್ಥಳಿ ಅನಾವರಣ’ ಸಮಾರಂಭದ ಪ್ರಯುಕ್ತ ಲಕ್ಷಾಂತರ ಜನ ಭಾಗವಹಿಸುವ ಸಂಭವವಿರುತ್ತದೆ. ಅಲ್ಲದೇ ವಾಹನ ಸಂಚಾರ ದಟ್ಟಣೆ ಹೆಚ್ಚಾಗುವ ಸಂಭವವಿರುವ ಕಾರಣ ಶಾಲಾಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಮುಂಜಾಗೃತಾ ಕ್ರಮ ಕೈಗೊಳ್ಳುವ ಅಗತ್ಯವಿದೆ.

ಆದ್ದರಿಂದ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿ.ಎನ್.ಎಸ್.ಎಸ್) 2023 ಕಲಂ 163 ರಡಿ ಪ್ರದತ್ತವಾದ ಅಧಿಕಾರದ ಮೇರೆಗೆ ಬೆಳಗಾವಿ ತಾಲೂಕು ಶೈಕ್ಷಣಿಕ ವಲಯ (ನಗರ & ಗ್ರಾಮೀಣ)ದ ಎಲ್ಲಾ ಸರಕಾರಿ ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಹಾಗೂ ಅಂಗನವಾಡಿಗಳಿಗೆ ಜ.21ರ ಮಂಗಳವಾರ ರಜೆ ಘೋಷಿಸಿ ಆದೇಶಿಸಲಾಗಿದೆ.

ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜೊತೆಗೆ, ಈ ರಜಾ ಅವಧಿಯನ್ನು ಮುಂದಿನ ಶೈಕ್ಷಣಿಕ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!