ರಾಜ್ಯದ ಆರು ಇಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ: ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಆದೇಶ
ಮೂಲಭೂತ ಸೌಕರ್ಯದ ಕೊರತೆ, ಕಳಪೆ ಮಟ್ಟದ ಬೋಧನೆ ಕಾರಣಕ್ಕಾಗಿ ರಾಜ್ಯದ 6 ಇಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ ಹಾಕಲು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಿರ್ಧಾರ ಮಾಡಿದೆ. ಪ್ರಸ್ತುತ 2021-22ರ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಆರು ಕಾಲೇಜಗಳ ಸೇವೆ ಸ್ಥಗಿತವಾಗಲಿದೆ.
ಬೆಳಗಾವಿ: ಮೂಲಭೂತ ಸೌಕರ್ಯದ ಕೊರತೆ, ಕಳಪೆ ಮಟ್ಟದ ಬೋಧನೆ ಕಾರಣಕ್ಕಾಗಿ ರಾಜ್ಯದ 6 ಇಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ ಹಾಕಲು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಿರ್ಧಾರ ಮಾಡಿದೆ. ಪ್ರಸ್ತುತ 2021-22ರ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ಆರು ಕಾಲೇಜಗಳ ಸೇವೆ ಸ್ಥಗಿತವಾಗಲಿದ್ದು, ಸದರಿ ಕಾಲೇಜುಗಳ ವಿದ್ಯಾರ್ಥಿಗಳನ್ನು ಬೇರೆ ಕಾಲೇಜುಗಳಿಗೆ ವರ್ಗ ಮಾಡಲು ನಿರ್ಧಾರ ಮಾಡಲಾಗಿದೆ.
ಯಾವ ಯಾವ ಇಂಜಿನಿಯರಿಂಗ್ ಕಾಲೇಜುಗಳಿಗೆ ಬೀಗ?
1. ಬೆಂಗಳೂರಿನ ಆಲ್ಫಾ ಎಂಜಿನಿಯರಿಂಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ. 2. ಬೆಳಗಾವಿಯ ಶೇಖ್ ಎಂಜಿನಿಯರಿಂಗ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ. 3. ಬೆಂಗಳೂರಿನ ಇಸ್ಲಾಮಿಯಾ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ. 4. ಚಾಮರಾಜನಗರದ ಏಕಲವ್ಯ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ. 5. ಕೆಜಿಎಫ್‌ನ ಶ್ರೀ ವಿನಾಯಕ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ. 6. ಬೆಂಗಳೂರಿನ ಬಿಟಿಎಲ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಗೆ ಬೀಗ.
ಮೂಲಸೌಕರ್ಯ ವಂಚಿತ ಕಾರಣದಿಂದ ಈ ಆರು ಕಾಲೇಜುಗಳನ್ನು ಈ ವರ್ಷದಿಂದಲೇ ಮುಚ್ಚಲಿದ್ದು, ಅಲ್ಲಿನ ವಿದ್ಯಾರ್ಥಿಗಳಿಗೆ ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪರ್ಯಾಯ ವ್ಯವಸ್ಥೆ ಮಾಡಿಕೊಡಲಿದೆ.
ಶಾಲೆಗೆ ಮಕ್ಕಳು ಬರಲು ಕೊವಿಡ್ ನೆಗೆಟಿವ್ ವರದಿ ಕಡ್ಡಾಯ ಅಲ್ಲ ವಿದ್ಯಾರ್ಥಿಗಳು ಶಾಲೆಗೆ ಬರಲು ಕೊವಿಡ್ ನೆಗೆಟಿವ್ ವರದಿ ಕಡ್ಡಾಯವಲ್ಲ ಎಂದು ಮೈಸೂರಿನಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ಸ್ಪಷ್ಟಪಡಿಸಿದರು. ಒಂದು ವೇಳೆ ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟರೆ ಒಂದು ವಾರ ಆ ತರಗತಿಯನ್ನು ಅಮಾನತು ಮಾಡಲಾಗುತ್ತದೆ. ವಾರದ ಬಳಿಕ ಸ್ಯಾನಿಟೈಸ್ ಮಾಡಿ ಮತ್ತೆ ತರಗತಿ ಆರಂಭ (Karnataka School Reopen) ಮಾಡಲಾಗುತ್ತದೆ ಎಂದು ಅವರು ಖಚಿತಪಡಿಸಿದರು.
ಈ ಸಂದರ್ಭದಲ್ಲಿ ಶಾಲೆ ಆರಂಬಿಸುವುದು ಅಪಾಯವೆಂಬ ಅರಿವಿದೆ. ಆದರೆ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ತಜ್ಞರ ಅಭಿಪ್ರಾಯದಂತೆ ಶಾಲೆಗಳನ್ನು ಆರಂಭಿಸುತ್ತಿದ್ದೇವೆ. ಕೊರೊನಾ ಮಕ್ಕಳ ಮೇಲೆ ಅಂಥ ಪರಿಣಾಮ ಬೀರಲ್ಲ. ಪ್ರಾಣಹಾನಿಯಂತಹ ಸಮಸ್ಯೆಗಳು ಎದುರಾಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ ಸಚಿವ ಬಿ.ಸಿ.ನಾಗೇಶ್, 1ರಿಂದ 8ನೇ ತರಗತಿಯನ್ನೂ ಶೀಘ್ರದಲ್ಲೇ ಆರಂಭಿಸುತ್ತೇವೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ. ಕೊವಿಡ್ ಪಾಸಿಟಿವಿಟಿ ದರ ಶೇ.2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಆರಂಭಿಸುವುದಿಲ್ಲ. ಅಲ್ಲಿಯ ಮಕ್ಕಳಿಗೆ ಪರ್ಯಾಯ ಶಿಕ್ಷಣದ ಬಗ್ಗೆ ಮಾಹಿತಿ ಸಂಗ್ರಹಿಸಿ ಅಂತಹ ವಿಧಾನ ರೂಪಿಸಲಾಗುವುದು ಎಂದು ಅವರು ತಿಳಿಸಿದರು.
ಇದನ್ನೂ ಓದಿ: ಎಂಜಿನಿಯರಿಂಗ್ ಕಾಲೇಜುಗಳ ಶುಲ್ಕ ಹೆಚ್ಚಳ; ಕಾಲೇಜುಗಳ ಜತೆ ಸಭೆಯ ನಂತರ ಅಂತಿಮ ನಿರ್ಧಾರ: ಸಚಿವ ಡಾ ಅಶ್ವತ್ಥ ನಾರಾಯಣ
PM Modi Speech Today: 11 ಪ್ರಾದೇಶಿಕ ಭಾಷೆಗಳಲ್ಲಿ ಎಂಜಿನಿಯರಿಂಗ್ ಶಿಕ್ಷಣ: ನರೇಂದ್ರ ಮೋದಿ
(Belagavi VTU Decides to close 6 engineering college which lacks basic infrastructure for 2021-22)
Published On - 5:11 pm, Fri, 20 August 21