ಬೆಂಗಳೂರು ಸಮಾಜ ಕಲ್ಯಾಣ ಇಲಾಖೆ (Bengaluru Social Welfare Department) ವತಿಯಿಂದ ಬೆಂಗಳೂರು ನಗರ ಜಿಲ್ಲೆಯ ಪ್ರತಿಷ್ಠಿತ ವಸತಿ ಶಾಲೆಗಳಿಗೆ 2023-24ನೇ ಸಾಲಿನಲ್ಲಿ 6ನೇ ತರಗತಿ ಸೇರ ಬಯಸುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ (SC/ST) ಪ್ರತಿಭಾವಂತ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 2022-23ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ ಶೇ.60 ಕಿಂತ ಹೆಚ್ಚು ಅಂಕ ಗಳಿಸಿ ಉತ್ತೀರ್ಣರಾಗಿರಬೇಕು, ಕುಟುಂಬದ ವಾರ್ಷಿಕ ವರಮಾನ ರೂ. 2 ಲಕ್ಷಗಳ ಒಳಗಿರಬೇಕು. ಒಂದೇ ಕುಟುಂಬದ ಎರಡು ಮಕ್ಕಳಿಗೆ ಮಾತ್ರ, ಅಂದರೆ, ಒಬ್ಬ ಬಾಲಕ ಮತ್ತು ಬಾಲಕಿ, ಬಾಲಕ ಇಲ್ಲದಿದ್ದಲ್ಲಿ ಇಬ್ಬರು ಬಾಲಕಿಯರಿಗೆ ಮಾತ್ರ ಅವಕಾಶ ನೀಡಲಾಗುವುದು.
ಅರ್ಜಿ ನಮೂನೆ ಮತ್ತು ವಿವರಗಳನ್ನು ಬೆಂಗಳೂರು ನಗರ ಜಿಲ್ಲೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರ ಕಚೇರಿ ಹಾಗೂ ಆಯಾ ತಾಲ್ಲೂಕಿನ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿ ಹಾಗೂ ಆಯಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಅರ್ಜಿಗಳನ್ನು ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಮೇ 30 ರೊಳಗಾಗಿ ಸಲ್ಲಿಸಬಹುದು.
ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರು ನಗರ ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಸರ್ಕಾರಿ ಸಂಸ್ಥೆಗಳಾದ ಎಸ್.ಜೆ. ಸರ್ಕಾರಿ ಪಾಲಿಟೆಕ್ನಿಕ್, ಕಾಲೇಜ್ ಹಾಗೂ ಎಂ.ಇ.ಐ ಪಾಲಿಟೆಕ್ನಿಕ್, ಕಾಲೇಜ್ ನಲ್ಲಿ 2023-24ನೇ ಸಾಲಿನ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಅರೆಕಾಲಿಕ (ಪಾರ್ಟ್ ಟೈಮ್) ಪ್ರವೇಶಾತಿಗಾಗಿ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರಿನ ಸಿಇಟಿ ಪರೀಕ್ಷಾರ್ಥಿಗಳಿಗೆ ಟ್ರಾಫಿಕ್ ಕಂಟಕ ನಿಶ್ಚಿತ; ಪರೀಕ್ಷಾ ಕೇಂದ್ರಗಳಿಗೆ ಬೇಗ ಹೋಗುವಂತೆ ಕಟ್ಟಾಜ್ಞೆ
ಆಸಕ್ತ ವಿದ್ಯಾರ್ಥಿಗಳು ವೆಬ್ ಸೈಟ್ dtetech.karnataka.gov.in ಅಥವಾ dtetech.karnataka.gov.in/kartechnical ನಲ್ಲಿ ಪ್ರವೇಶ ಅರ್ಜಿಯನ್ನು ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಜೂನ್ 15 ರೊಳಗಾಗಿ ಪ್ರಾಚಾರ್ಯರವರ ಕಛೇರಿ, ಎಸ್.ಜೆ.ಸರ್ಕಾರಿ (ಸಂಜೆ) ಪಾಲಿಟೆಕ್ನಿಕ್, ಬೆಂಗಳೂರು ಇಲ್ಲಿ ಸಲ್ಲಿಸಬಹುದು ಎಂದು ಬೆಂಗಳೂರಿನ ಶ್ರೀ ಜಯಚಾಮರಾಜೇಂದ್ರ (ಸರ್ಕಾರಿ) ಸಂಜೆ ಪಾಲಿಟೆಕ್ನಿಕ್, ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.