ವಿದ್ಯಾರ್ಥಿಗಳ ಜೀವನದ ಮಹತ್ವದ ಘಟ್ಟ ಎಸ್‌ಎಸ್‌ಎಲ್‌ಸಿ. ಹತ್ತನೇ ತರಗತಿ ಆದ ಬಳಿಕ ಯಾವ ಕೋರ್ಸ್ ಆಯ್ಕೆ ಮಾಡಿಕೊಳ್ಳುತ್ತೇವೆ ಎನ್ನುವುದರ ನಿಮ್ಮ ಉದೋಗ್ಯ ಕ್ಷೇತ್ರವು ನಿರ್ಧಾರವಾಗುತ್ತದೆ. ಆದರೆ ಮಾಹಿತಿಯ ಕೊರತೆ ಕೋರ್ಸ್ ಗಳ ಆಯ್ಕೆಯಲ್ಲಿ ಎಡವುತ್ತಿದ್ದಾರೆ. ಈ ವೇಳೆಯಲ್ಲಿ ನಿಮ್ಮ ಆಯ್ಕೆ ಸರಿಯಾಗಿದ್ದರೆ ನೀವು ಅಂದುಕೊಂಡ ಕ್ಷೇತ್ರದಲ್ಲಿ ಉದ್ಯೋಗವನ್ನು ಗಿಟ್ಟಿಸಿಕೊಳ್ಳಬಹುದು.
* ವಿಜ್ಞಾನ : ಹತ್ತನೇ ತರಗತಿಯ ನಂತರ ಹೆಚ್ಚಿನವರು ವಿಜ್ಞಾನ ವಿಷಯವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಈ ಪಿಸಿಎಂ ವಿಷಯಗಳನ್ನು ಅಧ್ಯಯನ ಮಾಡಿದರೆ ಎಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸಸ್, ರಕ್ಷಣಾ ಸೇವೆಗಳು, ಮರ್ಚೆಂಟ್ ನೇವಿ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಮುಂದುವರೆಯಬಹುದು. ಪಿಸಿಬಿ ವಿಷಯಗಳನ್ನು ಓದಿದರೆ ಔಷಧ, ಫಿಸಿಯೋಥೆರಪಿ, ಕೃಷಿ, ಪೋಷಣೆ ಮತ್ತು ಆಹಾರ ಪದ್ಧತಿ, ದಂತವೈದ್ಯಶಾಸ್ತ್ರ ಹೀಗೆ ಹಲವರು ಆಯ್ಕೆಗಳಿವೆ.
* ವಾಣಿಜ್ಯ ವಿಭಾಗ : ವ್ಯವಹಾರಗಳಲ್ಲಿ ಆಸಕ್ತಿಯಿರುವ ವಿದ್ಯಾರ್ಥಿಗಳು ಪಿಯುಸಿಯಲ್ಲಿ ವಾಣಿಜ್ಯವನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಪಿಯುಸಿ ನಂತರ ಬಿಕಾಂ ಡಿಗ್ರಿ ಮಾಡಿ ಸ್ವಂತ ಬ್ಯುಸಿನೆಸ್ ಮಾಡಬಹುದು. ಅದಲ್ಲದೇ ವಾಣಿಜ್ಯ ವಿಷಯಗಳಲ್ಲಿ ಮುಂದುವರೆದರೆ ಚಾರ್ಟರ್ಡ್ ಅಕೌಂಟೆನ್ಸಿ, ಬ್ಯಾಂಕಿಂಗ್, ವಿಮೆ, ಹಣಕಾಸು ಹೀಗೆ ಹಲವಾರು ವೃತ್ತಿ ಆಯ್ಕೆಯನ್ನು ಕಾಣಬಹುದು.
* ಕಲಾ ವಿಭಾಗ : ಪಿಯುಸಿಯಲ್ಲಿ ಕಲಾ ವಿಭಾಗವನ್ನು ಆಯ್ಕೆ ಮಾಡಿಕೊಂಡರೆ ಸಮಾಜಶಾಸ್ತ್ರ, ಇತಿಹಾಸ, ಸಾಹಿತ್ಯ, ರಾಜ್ಯಶಾಸ್ತ್ರ, ಮನೋವಿಜ್ಞಾನ, ಅರ್ಥಶಾಸ್ತ್ರ, ತತ್ವಶಾಸ್ತ್ರ, ಲಲಿತಕಲೆ ವಿವಿಧ ವಿಷಯಗಳ ಬಗ್ಗೆ ಅಧ್ಯಯನ ಮಾಡಬಹುದು. ಕಲಾ ವಿಭಾಗದಲ್ಲಿ ಮುಂದುವರೆದರೆ ಪತ್ರಿಕೋದ್ಯಮ, ಸಾಹಿತ್ಯ, ಬರವಣಿಗೆ, ಶಿಕ್ಷಕರು ಹೀಗೆ ಹಲವಾರು ವೃತ್ತಿ ಆಯ್ಕೆಗಳು ವಿದ್ಯಾರ್ಥಿಗಳಿಗಿದೆ.
* ವೃತ್ತಿಪರ ಕೋರ್ಸ್‌ಗಳು : ಎಸ್‌ಎಸ್‌ಎಲ್‌ಸಿ ಬಳಿಕ ವೃತ್ತಿಪರ ಕೋರ್ಸ್‌ಗಳು ಇವೆ. ಸಾಫ್ಟ್‌ವೇರ್ ಡೆವಲಪ್‌ಮೆಂಟ್, ಫ್ಯಾಶನ್ ಡಿಸೈನಿಂಗ್, ಡೆಸ್ಕ್‌ಟಾಪ್ ಪಬ್ಲಿಷಿಂಗ್ , ಆಭರಣ ವಿನ್ಯಾಸ, ಪ್ರಯಾಣ ಮತ್ತು ಪ್ರವಾಸೋದ್ಯಮ, ಐಟಿಐ ಹೀಗೆ ವಿವಿಧ ಕೋರ್ಸ್‌ಗಳು ವಿದ್ಯಾರ್ಥಿಗಳಿಗೆ ಲಭ್ಯವಿದೆ.
ಇದನ್ನೂ ಓದಿ: ಇಂದು SSLC ಫಲಿತಾಂಶ ಪ್ರಕಟ, ರಿಸಲ್ಟ್ ನೋಡಲು ಈ ವೆಬ್ ಸೈಟ್ಗಳಿಗೆ ಭೇಟಿ ನೀಡಿ
* ಪ್ಯಾರಾ ಮೆಡಿಕಲ್ ಕೋರ್ಸ್‌ಗಳು : ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದ ಈ ಪ್ಯಾರಾ ಮೆಡಿಕಲ್ ಕೋರ್ಸ್ ಗಳನ್ನು ಹೆಚ್ಚಿನ ವಿದ್ಯಾರ್ಥಿಗಳ ಆಯ್ಕೆಗಳಲ್ಲಿ ಒಂದಾಗಿದೆ. ಈ ಕ್ಷೇತ್ರದಲ್ಲಿ ಎಕ್ಸ್-ರೇ ತಂತ್ರಜ್ಞ, ಡಯಾಲಿಸಿಸ್ ತಂತ್ರಜ್ಞ, ನರ್ಸಿಂಗ್ ಅಸಿಸ್ಟೆನ್ಸ್, ನೇತ್ರ ತಂತ್ರಜ್ಞ ಹೀಗೆ ಆಯ್ಕೆಗಳು ಹಲವಾರಿದೆ.
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:58 am, Thu, 9 May 24