
ಇತ್ತೀಚೆಗೆ ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶಾದ್ಯಂತ ವಿದ್ಯಾರ್ಥಿಗಳಿಂದ ಭಾರಿ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ್ ಅವರು ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಪ್ರಲ್ಹಾದ್ ಜೋಶಿ ಅವರನ್ನು ನಿಯೋಜಿಸಲಾಗಿದೆ. ಆದ್ದರಿಂದ ದೇಶಾದ್ಯಂತ ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳಿಗೆ ಅಗತ್ಯವಿರುವ ಪ್ರವೇಶ ಪರೀಕ್ಷೆಗಳನ್ನು ನಡೆಸುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency – NTA)ಯ ಜವಾಬ್ದಾರಿ ಹಾಗೂ ನೀಟ್ ಹೊರತಾಗಿ ಇದು ನಡೆಸುವ ಇನ್ನುಳಿದ ಪರೀಕ್ಷೆಗಳು ಯಾವುವು ಎಂಬುದರ ಸಮಗ್ರ ಮಾಹಿತಿಯನ್ನು ಇಲ್ಲಿ ತಿಳಿದುಕೊಳ್ಳಿ.
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency – NTA) ಭಾರತ ಸರ್ಕಾರದ ಶಿಕ್ಷಣ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುವ ಅತ್ಯಂತ ಪ್ರಮುಖ ಶೈಕ್ಷಣಿಕ ಸಂಸ್ಥೆಯಾಗಿದೆ. ದೇಶಾದ್ಯಂತ ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಕೋರ್ಸ್‌ಗಳಿಗೆ ಅಗತ್ಯವಿರುವ ಪ್ರವೇಶ ಪರೀಕ್ಷೆಗಳನ್ನು ಪಾರದರ್ಶಕ, ನ್ಯಾಯಯುತ ಮತ್ತು ಅತ್ಯಂತ ದಕ್ಷತೆಯಿಂದ ನಡೆಸುವುದು ಈ ಸಂಸ್ಥೆಯ ಮೂಲ ಉದ್ದೇಶವಾಗಿದೆ.
ಭಾರತದಲ್ಲಿ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳನ್ನು ನಡೆಸುವಲ್ಲಿ ಏಕರೂಪತೆ ಮತ್ತು ಉನ್ನತ ಗುಣಮಟ್ಟವನ್ನು ತರುವ ನಿಟ್ಟಿನಲ್ಲಿ ಶಿಕ್ಷಣ ಸಚಿವಾಲಯವು 2018 ರಲ್ಲಿ NTA ಅನ್ನು ಸ್ಥಾಪಿಸಿತು. ಅಂದಿನಿಂದ ಇಂದಿನವರೆಗೆ ಈ ಸಂಸ್ಥೆಯು ಭಾರತದ ಶಿಕ್ಷಣ ವ್ಯವಸ್ಥೆಯಲ್ಲಿ ಬೃಹತ್ ಪರೀಕ್ಷಾ ಏಜೆನ್ಸಿಯಾಗಿ ಬೆಳೆದು ನಿಂತಿದೆ.
ಸ್ಥಾಪನೆಯಾದ ಅತ್ಯಲ್ಪ ಅವಧಿಯಲ್ಲೇ NTA ಕ್ರಾಂತಿಕಾರಿ ಪ್ರಗತಿಯನ್ನು ಸಾಧಿಸಿದೆ. ಶಿಕ್ಷಣ ಸಚಿವಾಲಯದ ಅಧಿಕೃತ ಅಂಕಿ-ಅಂಶಗಳ ಪ್ರಕಾರ, ಇದುವರೆಗೆ 66 ಮಿಲಿಯನ್‌ಗೂ ಹೆಚ್ಚು (6.6 ಕೋಟಿ+) ಅಭ್ಯರ್ಥಿಗಳು NTA ನಡೆಸುವ ವಿವಿಧ ಪರೀಕ್ಷೆಗಳಿಗೆ ನೋಂದಾಯಿಸಿಕೊಂಡಿದ್ದಾರೆ. ಅಲ್ಲದೆ, ಸಂಸ್ಥೆಯು ಯಶಸ್ವಿಯಾಗಿ 270 ಕ್ಕೂ ಹೆಚ್ಚು ರಾಷ್ಟ್ರೀಯ ಮಟ್ಟದ ಪರೀಕ್ಷೆಗಳನ್ನು ಸಂಘಟಿಸಿ ಸೈ ಎನಿಸಿಕೊಂಡಿದೆ.
ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ಕಠಿಣ ಹಾಗೂ ಪ್ರಸಿದ್ಧ ಪರೀಕ್ಷೆಗಳನ್ನು NTA ನಡೆಸುತ್ತದೆ:
ಪಾರದರ್ಶಕತೆ ಮತ್ತು ತಂತ್ರಜ್ಞಾನ ಆಧಾರಿತ ಪರೀಕ್ಷಾ ವ್ಯವಸ್ಥೆಯ ಮೂಲಕ NTA ಭಾರತೀಯ ಶಿಕ್ಷಣ ಕ್ಷೇತ್ರದಲ್ಲಿ ಕೋಟ್ಯಂತರ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಕನಸುಗಳಿಗೆ ಬಲವಾದ ತಡಿಪಾಯ ಹಾಕಿಕೊಟ್ಟಿದೆ.
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.