Bharat Bandh: ಬೆಂಗಳೂರು ಉತ್ತರ ವಿವಿ ಪರೀಕ್ಷೆ ರದ್ದಿಲ್ಲ; ಧಾರವಾಡ ವಿವಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು ಉತ್ತರ ವಿವಿಯ ವಿದ್ಯಾರ್ಥಿಗಳು ಸೆಪ್ಟೆಂಬರ್ 27ರಂದು ನಡೆಯಲಿರುವ ಪರೀಕ್ಷೆಗೆ ಹಾಜರಾಗಲೇಬೇಕು. ಗೈರುಹಾಜರಾದರೆ ಮತ್ತೊಮ್ಮೆ ಪರೀಕ್ಷೆ ಬರೆಯುವ ಅವಕಾಶವಿಲ್ಲ ಎಂದು ವಿವಿ ತಿಳಿಸಿದೆ.

Bharat Bandh: ಬೆಂಗಳೂರು ಉತ್ತರ ವಿವಿ ಪರೀಕ್ಷೆ ರದ್ದಿಲ್ಲ; ಧಾರವಾಡ ವಿವಿ ಪರೀಕ್ಷೆ ಮುಂದೂಡಿಕೆ
ಬೆಂಗಳೂರು ಉತ್ತರ ವಿಶ್ವವಿದ್ಯಾಲಯ
Edited By:

Updated on: Sep 26, 2021 | 8:40 PM

ಬೆಂಗಳೂರು: ಭಾರತ್ ಬಂದ್ ಇದ್ದರೂ ಸಹ ನಾಳೆ ಸೋಮವಾರ (ಸೆಪ್ಟೆಂಬರ್ 27) ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಪರೀಕ್ಷೆಗಳು ನಿಗದಿಯಾದಂತೆಯೇ ನಡೆಯಲಿವೆ. ಪದವಿ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಉತ್ತರ ವಿಶ್ವವಿದ್ಯಾಲಯದ ಒಟ್ಟು 66 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಗೈರಾದರೆ ಮತ್ತೆ ಪರೀಕ್ಷೆ ಬರೆಯುವುದಕ್ಕೆ ಅವಕಾಶವಿಲ್ಲ. ನಾಳೆಯ ಪರೀಕ್ಷೆಯಿಂದ ಯಾವುದೇ ವಿನಾಯಿತಿ ಇಲ್ಲ ಎಂದು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಜನಾರ್ದನ್‌ ಮಾಹಿತಿ ನೀಡಿದ್ದಾರೆ.

ಧಾರವಾಡ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ
ಕೃಷಿ ಕಾಯ್ದೆ ವಿರೋಧಿಸಿ ಸೋಮವಾರ (ಸೆಪ್ಟೆಂಬರ್ 27) ಭಾರತ್ ಬಂದ್ ಘೋಷಿಸಿರುವ ಬೆನ್ನಲ್ಲೇ ಕರ್ನಾಟಕ ವಿಶ್ವವಿದ್ಯಾಲಯ ವ್ಯಾಪ್ತಿಯ ಪದವಿ ಹಾಗೂ ಸ್ನಾತಕೋತ್ತರ ಪರೀಕ್ಷೆಗಳು ಮುಂದೂಡಲ್ಪಟ್ಟಿವೆ. ಪರೀಕ್ಷೆ ಮುಂದೂಡಿ ಕವಿವಿ ಮೌಲ್ಯಮಾಪನದ ಕುಲಸಚಿವ ಪ್ರೊ. ಎಚ್. ನಾಗರಾಜ್ ಆದೇಶಿದ್ದಾರೆ.

(Bharat Bandh September 27 Bengaluru North University exams are not postponed Karnataka University Exams Postponed)