AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking News: ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಪೂರಕ ಪರೀಕ್ಷೆಯಲ್ಲಿ 65,233 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಒಟ್ಟು ಶೇಕಡಾವಾರು ಫಲಿತಾಂಶ 37.08% ಪ್ರಕಟವಾಗಿದೆ.

Breaking News: ಕರ್ನಾಟಕ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Sep 12, 2022 | 11:30 AM

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಪೂರಕ ಪರೀಕ್ಷೆಯಲ್ಲಿ 65,233 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಒಟ್ಟು ಶೇಕಡಾವಾರು ಫಲಿತಾಂಶ 37.08% ಪ್ರಕಟವಾಗಿದೆ. ಆ.12ರಿಂದ ಆ.25ರವರೆಗೆ ನಡೆದಿದ್ದ ಪೂರಕ ಪರೀಕ್ಷೆ ನಡೆಸಲಾಗಿತ್ತು. 1,85,415 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆಗೆ ಒಟ್ಟು 1,75,905 ವಿದ್ಯಾರ್ಥಿಗಳು ಹಾಜರಾಗಿದ್ದರು.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, 12-8-22 ರಿಂದ 25-8-22ರವರೆಗೆ ಪೂರಕ ಪರೀಕ್ಷೆ ನಡೆಸಲಾಗಿತ್ತು. 65,233 ವಿದ್ಯಾರ್ಥಿಗಳು ಪೂರಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು. 9,510 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ. 37.08%ದಷ್ಟು ಒಟ್ಟು ಶೇಕಡವಾರು ಫಲಿತಾಂಶ ಪ್ರಕಟವಾಗಿದೆ.

PUC II ಪೂರಕ ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು karresults.nic.in ನಲ್ಲಿ Karresults ನ ಅಧಿಕೃತ ಸೈಟ್ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು. ದ್ವೀತಿಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಕೆಳಗೆ ನೀಡಲಾದ ಈ ಸರಳ ಹಂತಗಳ ಮೂಲಕ ನಿಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.

ಫಲಿತಾಂಶಗವನ್ನು ಈ ಹಂತದಲ್ಲಿ ಪರಿಶೀಲಿಸಿ: 

1. Karresults.nic.in ನಲ್ಲಿ Karresults ನ ಅಧಿಕೃತ ಸೈಟ್‌ಗೆ ಭೇಟಿ ನೀಡಿ.

2. ಫಲಿತಾಂಶದ ಲಿಂಕ್​ನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.

3. ಫಲಿತಾಂಶದ ಲಿಂಕ್ ಪರಿಶೀಲಿಸಿ ಮತ್ತು ಲಾಗಿನ್ ವಿವರಗಳನ್ನು ನಮೂದಿಸಿ.

4. ನಿಮ್ಮ ಫಲಿತಾಂಶವನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ.

5. ಫಲಿತಾಂಶವನ್ನು ಪರಿಶೀಲಿಸಿ ಮತ್ತು ಅದನ್ನು ಡೌನ್‌ಲೋಡ್ ಮಾಡಿ.

6. ಮುಂದಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ಸಹ ಪಡೆದುಕೊಳ್ಳಬಹುದು

Published On - 11:07 am, Mon, 12 September 22