AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಗುಡ್ ನ್ಯೂಸ್

Second PUC Exams: 2023-24ನೇ ಸಾಲಿನ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು ಇದೇ ಮಾರ್ಚ್​ 1 ರಿಂದ ಮಾ. 22ರ ವರೆಗೆ ನಡೆಯಲಿದ್ದು, ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಸಿಹಿ ಸುದ್ದಿಯೊಂದನ್ನ ನೀಡಿದೆ.

ಬೆಂಗಳೂರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಗುಡ್ ನ್ಯೂಸ್
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 21, 2024 | 4:20 PM

Share

ಬೆಂಗಳೂರು, (ಫೆಬ್ರವರಿ 21): ರಾಜ್ಯದ 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ Second PUC Exams) ಬರೆಯುವ ಬೆಂಗಳೂರಿನ ವಿದ್ಯಾರ್ಥಿಗಳಿಗೆ ಬಿಬಿಎಂಟಿಸಿ (BMTC) ಗುಡ್​ನ್ಯೂಸ್ ನೀಡಿದೆ. ಪರೀಕ್ಷೆ ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಸೇವೆ ನೀಡಲಿದೆ. ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ (Admission Ticket) ಉಚಿತವಾಗಿ ಪ್ರಯಾಣಿಸಬಹುದು. ಬಿಎಂಟಿಸಿ ವೋಲ್ವೋ ಬಸ್ ಹೊರತುಪಡಿಸಿ ಇನ್ನುಳಿದ ಎಲ್ಲಾ ಬಿಎಂಟಿಸಿ ಬಸ್ ನಲ್ಲಿ ಮನೆಯಿಂದ ಪರೀಕ್ಷಾ ಕೊಠಡಿ ವರೆಗೆ ಉಚಿತವಾಗಿ ಪ್ರಯಾಣಿಸಬಹದು.

ವಿದ್ಯಾರ್ಥಿಗಳ ಅನುಕೂಲಕ್ಕೆ ಪರೀಕ್ಷಾ ಕೇಂದ್ರಗಳ ಮುಂದೆಯೇ ಸ್ಟಾಪ್ ಕೊಡಲು ಚಾಲಕ ಹಾಗೂ ನಿರ್ವಹಕರಿಗೆ ಸೂಚನೆ ನೀಡಲಾಗಿದ್ದು. ಇನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳ ರೂಟ್ ನಲ್ಲಿ ಹೆಚ್ಚುವರಿ ಬಸ್ ಬಿಡಲು ಬಿಎಂಟಿಸಿ ಚಿಂತನೆ ನಡೆಸಿದೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಹಾಲ್​ ಟಿಕೆಟ್​​ ತೋರಿಸಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಬಹುದು.

ಇದನ್ನೂ ಓದಿ: SSLC PUC Exam 2024 Time Table: ದ್ವಿತೀಯ ಪಿಯುಸಿ, ಎಸ್ಎಸ್ಎಲ್​ಸಿ ಪರೀಕ್ಷೆ ದಿನಾಂಕ ಪ್ರಕಟ

ರಾಜ್ಯಾದ್ಯಂತ . ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ಪರೀಕ್ಷೆಗಳು ಆರಂಭವಾಗಲಿವೆ. ಸಾಮಾನ್ಯವಾಗಿ ಪ್ರತಿ ವರ್ಷವೂ ಸಹ ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಸಂಸ್ಥೆಗಳು ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸೇವೆ ನೀಡುತ್ತಾ ಬಂದಿವೆ. ​ ಸದ್ಯಕ್ಕೆ ಬೆಂಗಳೂರಿನ ವಿದ್ಯಾರ್ಥಿಗಳಿಗಾಗಿ ಉಚಿತ ಸೇವೆಯನ್ನು ಬಿಎಂಟಿಸಿ ಘೋಷಣೆ ಮಾಡಿದ್ದು, ಇನ್ನೂ ಇನ್ನುಳಿದ ಜಿಲ್ಲೆಗಳಿಗೆ ಕೆಎಸ್ಆರ್​ಟಿಸಿ ಈ ಬಗ್ಗೆ ಇನ್ನೂ ಯಾವುದೇ ಸುತ್ತೋಲೆ ಹೊರಡಿಸಿಲ್ಲ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ದ್ವಿತೀಯ ಪರೀಕ್ಷೆಗಳನ್ನು ಮಾರ್ಚ್​ 1ರಿಂದ ಮಾರ್ಚ್​ 22ರ ವರೆಗೆ ನಡೆಸುತ್ತಿದೆ. ಇದಕ್ಕೆ ಸಕಲ ಸಿದ್ಧತೆಯನ್ನು ಸಹ ಮಾಡಿಕೊಂಡಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು, ತಮ್ಮ ಶಾಲೆಗಳಿಗೆ ತೆರಳಿ ಪ್ರವೇಶ ಪತ್ರವನ್ನು ಪಡೆಯಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:55 pm, Wed, 21 February 24

Follow Us
TV9 Web
TV9 Web

TV9 Kannada

Read More
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್​ ಅಶೋಕ್​​
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸ್ಮಿತ್ ಮಚ್ಛಾರ್ ಚೇತರಿಕೆಗೆ ಕಾಶಿ ವಿಶ್ವನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಸೆಷನ್ಸ್ ಕೋರ್ಟ್‌ಗೆ ಮರು ಅರ್ಜಿ ಸಲ್ಲಿಸಲು ಪ್ರಿಯಾಂಕ್, ನಲಪಾಡ್‌ಗೆ ಸೂಚನೆ
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಯೋಗೇಶ್​​ ಗೌಡ ಕೊಲೆ ಕೇಸ್​​: ವಿನಯ್​​ ಕುಲಕರ್ಣಿಗೆ 'ಸುಪ್ರೀಂ' ಸಂಕಷ್ಟ?
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಪ್ರಶಾಂತ್, ಗಗನ್ ತಮಾಷೆ ಮಾತಿಗೆ ಬಿದ್ದು ಬಿದ್ದು ನಕ್ಕ ಸೋನಿಕಾ ಗೌಡ
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಬೋಗಸ್ ಫಾರ್ಮ್ ನೀಡಿ ಮತದಾರರ ಹೆಸರು ಡಿಲೀಟ್ ಆರೋಪ:  25 ಜನರ ವಿರುದ್ಧ FIR
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಉತ್ತರಾಖಂಡದಲ್ಲಿ ಭಾರೀ ಭೂಕುಸಿತ; ಗುಡ್ಡ ಕುಸಿಯುವ ಭಯಾನಕ ವಿಡಿಯೋ ವೈರಲ್
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಸೌಜನ್ಯ ಕೇಸ್​ ತನಿಖೆಗೆ ಮಂಗಳೂರಲ್ಲಿ ಎಸ್​ಐಟಿ ಕಚೇರಿ ಓಪನ್: ಮೊದಲ ಸಭೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ
ಕುರುಡುಮಲೆ ವಿನಾಯಕ ದೇಗುಲದಲ್ಲಿ ಮೋದಿ ಹೆಸರಲ್ಲಿ ಬಿ.ವೈ.ವಿಜಯೇಂದ್ರ ಪೂಜೆ