ಬೆಂಗಳೂರು, (ಫೆಬ್ರವರಿ 21): ರಾಜ್ಯದ 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ Second PUC Exams) ಬರೆಯುವ ಬೆಂಗಳೂರಿನ ವಿದ್ಯಾರ್ಥಿಗಳಿಗೆ ಬಿಬಿಎಂಟಿಸಿ (BMTC) ಗುಡ್ನ್ಯೂಸ್ ನೀಡಿದೆ. ಪರೀಕ್ಷೆ ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಸೇವೆ ನೀಡಲಿದೆ. ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ (Admission Ticket) ಉಚಿತವಾಗಿ ಪ್ರಯಾಣಿಸಬಹುದು. ಬಿಎಂಟಿಸಿ ವೋಲ್ವೋ ಬಸ್ ಹೊರತುಪಡಿಸಿ ಇನ್ನುಳಿದ ಎಲ್ಲಾ ಬಿಎಂಟಿಸಿ ಬಸ್ ನಲ್ಲಿ ಮನೆಯಿಂದ ಪರೀಕ್ಷಾ ಕೊಠಡಿ ವರೆಗೆ ಉಚಿತವಾಗಿ ಪ್ರಯಾಣಿಸಬಹದು.
ವಿದ್ಯಾರ್ಥಿಗಳ ಅನುಕೂಲಕ್ಕೆ ಪರೀಕ್ಷಾ ಕೇಂದ್ರಗಳ ಮುಂದೆಯೇ ಸ್ಟಾಪ್ ಕೊಡಲು ಚಾಲಕ ಹಾಗೂ ನಿರ್ವಹಕರಿಗೆ ಸೂಚನೆ ನೀಡಲಾಗಿದ್ದು. ಇನ್ನು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಪರೀಕ್ಷಾ ಕೇಂದ್ರಗಳ ರೂಟ್ ನಲ್ಲಿ ಹೆಚ್ಚುವರಿ ಬಸ್ ಬಿಡಲು ಬಿಎಂಟಿಸಿ ಚಿಂತನೆ ನಡೆಸಿದೆ. ಹೀಗಾಗಿ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳಬಹುದು.
ಇದನ್ನೂ ಓದಿ: SSLC PUC Exam 2024 Time Table: ದ್ವಿತೀಯ ಪಿಯುಸಿ, ಎಸ್ಎಸ್ಎಲ್ಸಿ ಪರೀಕ್ಷೆ ದಿನಾಂಕ ಪ್ರಕಟ
ರಾಜ್ಯಾದ್ಯಂತ . ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ಪರೀಕ್ಷೆಗಳು ಆರಂಭವಾಗಲಿವೆ. ಸಾಮಾನ್ಯವಾಗಿ ಪ್ರತಿ ವರ್ಷವೂ ಸಹ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಸಂಸ್ಥೆಗಳು ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಸೇವೆ ನೀಡುತ್ತಾ ಬಂದಿವೆ. ಸದ್ಯಕ್ಕೆ ಬೆಂಗಳೂರಿನ ವಿದ್ಯಾರ್ಥಿಗಳಿಗಾಗಿ ಉಚಿತ ಸೇವೆಯನ್ನು ಬಿಎಂಟಿಸಿ ಘೋಷಣೆ ಮಾಡಿದ್ದು, ಇನ್ನೂ ಇನ್ನುಳಿದ ಜಿಲ್ಲೆಗಳಿಗೆ ಕೆಎಸ್ಆರ್ಟಿಸಿ ಈ ಬಗ್ಗೆ ಇನ್ನೂ ಯಾವುದೇ ಸುತ್ತೋಲೆ ಹೊರಡಿಸಿಲ್ಲ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ದ್ವಿತೀಯ ಪರೀಕ್ಷೆಗಳನ್ನು ಮಾರ್ಚ್ 1ರಿಂದ ಮಾರ್ಚ್ 22ರ ವರೆಗೆ ನಡೆಸುತ್ತಿದೆ. ಇದಕ್ಕೆ ಸಕಲ ಸಿದ್ಧತೆಯನ್ನು ಸಹ ಮಾಡಿಕೊಂಡಿದೆ. ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು, ತಮ್ಮ ಶಾಲೆಗಳಿಗೆ ತೆರಳಿ ಪ್ರವೇಶ ಪತ್ರವನ್ನು ಪಡೆಯಬಹುದು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:55 pm, Wed, 21 February 24