SSLC-PUC: ಪರೀಕ್ಷೆ ಬರೆಯುವ ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ
SSLC And 2nd PUC Exams 2025: 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1 ರ ಅಂತಿಮ ವೇಳಾಪಟ್ಟಿಯನ್ನು ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪ್ರಕಟಿಸಿದೆ. ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ -1 ನಡೆಯುತ್ತಿದ್ದರೆ, ಮಾರ್ಚ್ 21ರಿಂದ ಏಪ್ರಿಲ್ 04-04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ -1 ನಡೆಯಲಿವೆ. ಇದರ ಮಧ್ಯ ಇದೀಗ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಸಿಹಿಸುದ್ದಿಯೊಂದನ್ನು ನೀಡಿದೆ.

ಬೆಂಗಳೂರು, (ಫೆಬ್ರವರಿ 19): ಸಾರಿಗೆ ವಿಭಾಗಗಳಲ್ಲಿ ಬೆಂಗಳೂರಿನ ಜೀವನಾಡಿಯಾಗಿರುರುವ ಬಿಎಂಟಿಸಿ ಆಗಾಗ ಹೊಸ ಹೊಸ ಯೋಜನೆಯನ್ನು ಜಾರಿಗೆ ತರುತ್ತಲೇ ಇರುತ್ತದೆ. ಹಾಗಯೇ ಇದೀಗ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಪರೀಕ್ಷೆ ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಉಚಿತ ಸೇವೆ ಘೋಷಿಸಿದೆ. ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ಪರೀಕ್ಷೆಗಳು ನಡೆಯಲಿದ್ದು, ವಿದ್ಯಾರ್ಥಿಗಳು ಹಾಲ್ ಟಿಕೆಟ್ ತೋರಿಸಿ (Admission Ticket) ಉಚಿತವಾಗಿ ಪ್ರಯಾಣಿಸಬಹುದು.
ಬಿಎಂಟಿಸಿ ವೋಲ್ವೋ ಬಸ್ ಹೊರತುಪಡಿಸಿ ಇನ್ನುಳಿದ ಎಲ್ಲಾ ಬಿಎಂಟಿಸಿ ಬಸ್ ನಲ್ಲಿ ಮನೆಯಿಂದ ಪರೀಕ್ಷಾ ಕೊಠಡಿ ವರೆಗೆ ಉಚಿತವಾಗಿ ಪ್ರಯಾಣಿಸಬಹದು. ಇನ್ನು ವಿದ್ಯಾರ್ಥಿಗಳ ಅನುಕೂಲಕ್ಕೆ ಪರೀಕ್ಷಾ ಕೇಂದ್ರಗಳ ಮುಂದೆಯೇ ಸ್ಟಾಪ್ ಕೊಡಲು ಚಾಲಕ ಹಾಗೂ ನಿರ್ವಹಕರಿಗೆ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: SSLC And PUC Exam Time Table: ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯು ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
ಸದ್ಯಕ್ಕೆ ಬಿಎಂಟಿಸಿ ಉಚಿತ ಬಸ್ ಸೇವೆ ಘೋಷಣೆ ಮಾಡಿದೆ. ಇನ್ನು ಕೆಎಸ್ಆರ್ಟಿಸಿ ಸಹ ಎಸ್ಎಸ್ಎಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ ಸೇವೆ ನೀಡುವ ಸಾಧ್ಯತೆಗಳಿವೆ.
ಈಗಾಗಲೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಾರ್ಚ್ 1ರಿಂದ ಮಾರ್ಚ್ 20ರವರೆಗೆ ದ್ವಿತೀಯ ಪಿಯು ಪರೀಕ್ಷೆ -1 ನಡೆಯುತ್ತಿದ್ದರೆ, ಮಾರ್ಚ್ 21ರಿಂದ ಏಪ್ರಿಲ್ 04 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು -1 ನಡೆಯಲಿವೆ.
ಇನ್ನು ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಹೋಗುವ ಮುನ್ನ ದಿನ ಬೇಕಾದ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕು. ಪರೀಕ್ಷೆಗೆ ಹೋಗುವ ದಿನ ಮೊದಲಿಗೆ ಹಾಲ್ ಟಿಕೆಟ್ ಮರೆಯದೇ ತೆಗೆದುಕೊಂಡು ಹೋಗಿ. ಹಾಗೇ ಹಾಲ್ ಟಿಕೆಟ್ನಲ್ಲಿ ನೀಡಿರುವಂತೆ ಮಾರ್ಗಸೂಚಿಗಳನ್ನು ವಿದ್ಯಾರ್ಥಿಗಳು ಅನುಸರಿಸಬೇಕು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ