ಕೆನರಾ ಬ್ಯಾಂಕ್‌ನಲ್ಲಿ ಬೃಹತ್ ಉದ್ಯೋಗಾವಕಾಶ: 3,500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ಕೆನರಾ ಬ್ಯಾಂಕ್ 3500 ಅಪ್ರೆಂಟಿಸ್ ಹುದ್ದೆಗಳಿಗೆ ರಾಷ್ಟ್ರೀಯ ಅಪ್ರೆಂಟಿಸ್‌ಷಿಪ್ ತರಬೇತಿ ಯೋಜನೆ (NATS) ಅಡಿಯಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಪದವೀಧರ ಯುವಕರಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಪ್ರಾಯೋಗಿಕ ಅನುಭವ ಪಡೆಯಲು ಇದೊಂದು ಉತ್ತಮ ಅವಕಾಶ. ಅರ್ಜಿ ಸಲ್ಲಿಕೆ ಅಕ್ಟೋಬರ್ 1ರಿಂದ ಆರಂಭಗೊಂಡು, ಅಕ್ಟೋಬರ್ 17 ರಂದು ಕೊನೆಗೊಳ್ಳುತ್ತದೆ. ಪರೀಕ್ಷೆಯಿಲ್ಲದೆ ಮೆರಿಟ್ ಆಧಾರದ ಮೇಲೆ ನೇರ ಆಯ್ಕೆ ಇರುತ್ತದೆ.

ಕೆನರಾ ಬ್ಯಾಂಕ್‌ನಲ್ಲಿ ಬೃಹತ್ ಉದ್ಯೋಗಾವಕಾಶ: 3,500 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
ಕೆನರಾ ಬ್ಯಾಂಕ್‌ನಲ್ಲಿ ಉದ್ಯೋಗಾವಕಾಶ
Image Credit source: Getty Images

Updated on: Oct 02, 2026 | 3:18 PM

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ಆರಂಭಿಸಲು ಬಯಸುವ ಯುವಜನತೆಗೆ ಕೆನರಾ ಬ್ಯಾಂಕ್ (Canara Bank) ಅತ್ಯುತ್ತಮ ಅವಕಾಶವನ್ನು ತಂದಿದೆ. ರಾಷ್ಟ್ರೀಯ ಅಪ್ರೆಂಟಿಸ್‌ಷಿಪ್ ತರಬೇತಿ ಯೋಜನೆ (NATS) ಅಡಿಯಲ್ಲಿ ದೇಶಾದ್ಯಂತ ಖಾಲಿ ಇರುವ ಒಟ್ಟು 3,500 ಅಪ್ರೆಂಟಿಸ್ (Apprentice) ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳನ್ನು ರಾಜ್ಯವಾರು ಕಾಯ್ದಿರಿಸಲಾಗಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಬ್ಯಾಂಕಿಂಗ್ ಕ್ಷೇತ್ರದ ಪ್ರಾಯೋಗಿಕ ಕಾರ್ಯಾನುಭವ ಸಿಗಲಿದೆ.

ಪ್ರಮುಖ ದಿನಾಂಕಗಳು ಮತ್ತು ಅರ್ಜಿ ಶುಲ್ಕದ ವಿವರ:

ಈ ಅಪ್ರೆಂಟಿಸ್ ಹುದ್ದೆಗಳಿಗೆ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆಯು 1 ಅಕ್ಟೋಬರ್ 2026 ರಿಂದ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು 17 ಅಕ್ಟೋಬರ್ 2026 ಕೊನೆಯ ದಿನವಾಗಿದೆ. ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 500ರೂ. ಆನ್‌ಲೈನ್ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಶುಲ್ಕ ಪಾವತಿಸಿ ಅರ್ಜಿಯನ್ನು ಪೂರ್ಣಗೊಳಿಸಬೇಕು.

ಶೈಕ್ಷಣಿಕ ಅರ್ಹತೆ ಮತ್ತು ವಯೋಮಿತಿ ನಿಬಂಧನೆಗಳು:

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Graduation) ಪೂರ್ಣಗೊಳಿಸಿರಬೇಕು. 1 ಜನವರಿ 2023 ಮತ್ತು 1 ಸೆಪ್ಟೆಂಬರ್ 2026 ರ ನಡುವೆ ಪದವಿ ಉತ್ತೀರ್ಣರಾದ ಅಭ್ಯರ್ಥಿಗಳು ಮಾತ್ರ ಈ ನೇಮಕಾತಿಗೆ ಅರ್ಹರಾಗಿರುತ್ತಾರೆ. ಜೊತೆಗೆ, ಅಭ್ಯರ್ಥಿಗಳ ವಯಸ್ಸು 20 ರಿಂದ 28 ವರ್ಷಗಳ ಒಳಗಿರಬೇಕು (ಅಂದರೆ, ಅಭ್ಯರ್ಥಿಗಳ ಜನ್ಮ ದಿನಾಂಕವು 2 ಸೆಪ್ಟೆಂಬರ್ 1998 ರಿಂದ 1 ಸೆಪ್ಟೆಂಬರ್ 2006 ರ ನಡುವೆ ಇರಬೇಕು).

ಇದನ್ನೂ ಓದಿ: ಎಸ್‌ಬಿಐ ನೇಮಕಾತಿ: ವಾರ್ಷಿಕ 97 ಲಕ್ಷ ರೂ.ವರೆಗೆ ವೇತನ; 207 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಪರೀಕ್ಷೆಯಿಲ್ಲದೆ ನಡೆಯಲಿದೆ ಅಭ್ಯರ್ಥಿಗಳ ನೇರ ಆಯ್ಕೆ:

ಈ ಕೆನರಾ ಬ್ಯಾಂಕ್ ಅಪ್ರೆಂಟಿಸ್ ಹುದ್ದೆಗಳಿಗೆ ಯಾವುದೇ ಲಿಖಿತ ಪರೀಕ್ಷೆ ಇರುವುದಿಲ್ಲ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಸಲ್ಲಿಸಿದ 12ನೇ ತರಗತಿ (PUC) ಮತ್ತು ಡಿಪ್ಲೊಮಾ/ಪದವಿ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಈ ಮೆರಿಟ್ ಪಟ್ಟಿಯನ್ನು ರಾಜ್ಯವಾರು ಪ್ರತ್ಯೇಕವಾಗಿ ತಯಾರಿಸಿ, ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಸರಳ ಹಂತಗಳು:

ಅರ್ಹ ಅಭ್ಯರ್ಥಿಗಳು NATS ನ ಅಧಿಕೃತ ಪೋರ್ಟಲ್ nats.education.gov.in ಗೆ ಭೇಟಿ ನೀಡಿ ‘Student Registration’ ಲಿಂಕ್ ಮೂಲಕ ಮೊದಲು ನೋಂದಾಯಿಸಿಕೊಳ್ಳಬೇಕು. ನೋಂದಣಿ ಪೂರ್ಣಗೊಂಡ ನಂತರ ಲಾಗಿನ್ ಆಗಿ ಅರ್ಜಿ ನಮೂನೆಯಲ್ಲಿ ಅಗತ್ಯ ವಿವರಗಳನ್ನು ಭರ್ತಿ ಮಾಡಬೇಕು. ನಂತರ 500ರೂ. ಅರ್ಜಿ ಶುಲ್ಕವನ್ನು ಆನ್‌ಲೈನ್‌ನಲ್ಲೇ ಪಾವತಿಸಿ, ಅರ್ಜಿಯನ್ನು ಸಬ್ಮಿಟ್ ಮಾಡಬೇಕು ಹಾಗೂ ಭವಿಷ್ಯದ ಉಲ್ಲೇಖಕ್ಕಾಗಿ ಅರ್ಜಿಯ ಪ್ರಿಂಟ್ ಔಟ್ ಪ್ರತಿಯನ್ನು ಡೌನ್‌ಲೋಡ್ ಮಾಡಿ ಇಟ್ಟುಕೊಳ್ಳಬೇಕು.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
Loading...
Unable to load recommendations.
Follow Us