AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE 10th Result 2022: ಇಂದು ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಪ್ರಕಟ ಸಾಧ್ಯತೆ

ಈ ವರ್ಷ ಸುಮಾರು 35 ಲಕ್ಷ ವಿದ್ಯಾರ್ಥಿಗಳು ಏಪ್ರಿಲ್ 26ರಿಂದ ಜೂನ್ 15ರವರೆಗೆ ನಡೆದ CBSE 10ನೇ, 12ನೇ ತರಗತಿ ಪರೀಕ್ಷೆಗಳಿಗೆ ಹಾಜರಾಗಿದ್ದರು. ಇಂದು ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ.

CBSE 10th Result 2022: ಇಂದು ಸಿಬಿಎಸ್​ಇ 10ನೇ ತರಗತಿ ಫಲಿತಾಂಶ ಪ್ರಕಟ ಸಾಧ್ಯತೆ
ಸಾಂದರ್ಭಿಕ ಚಿತ್ರImage Credit source: Live Mint
TV9 Web
| Edited By: |

Updated on:Jul 04, 2022 | 12:28 PM

Share

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) 10ನೇ ತರಗತಿಯ ಬೋರ್ಡ್ ಪರೀಕ್ಷೆ 2022 ಫಲಿತಾಂಶಗಳನ್ನು ಇಂದು (ಜುಲೈ 4) ಪ್ರಕಟಿಸುವ ಸಾಧ್ಯತೆಯಿದೆ. ಸಿಬಿಎಸ್​ಇಯ ಅಧಿಕೃತ ವೆಬ್‌ಸೈಟ್ cbseresults.nic.in ಅಥವಾ results.gov.inನಲ್ಲಿ CBSE 10ನೇ ತರಗತಿ ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಪರಿಶೀಲಿಸಬಹುದು. ಈ ವರ್ಷ ಸುಮಾರು 35 ಲಕ್ಷ ವಿದ್ಯಾರ್ಥಿಗಳು ಏಪ್ರಿಲ್ 26ರಿಂದ ಜೂನ್ 15ರವರೆಗೆ ನಡೆದ CBSE 10ನೇ, 12ನೇ ತರಗತಿ ಪರೀಕ್ಷೆಗಳಿಗೆ ಹಾಜರಾಗಿದ್ದರು. CBSE 10ನೇ ತರಗತಿಗೆ ಒಟ್ಟು 21 ಲಕ್ಷ ವಿದ್ಯಾರ್ಥಿಗಳು ಮತ್ತು 14 ಲಕ್ಷ ವಿದ್ಯಾರ್ಥಿಗಳು CBSE 12ನೇ ಪರೀಕ್ಷೆಗೆ ಹಾಜರಾಗಿದ್ದರು.

ವಿದ್ಯಾರ್ಥಿಗಳು ಪರೀಕ್ಷಾ ಸಂಗಮ ವೆಬ್​ಸೈಟ್​ನಲ್ಲಿ (parikshasangam.cbse.gov) ಕೂಡ ತಮ್ಮ ಸ್ಕೋರ್‌ಗಳನ್ನು ಪರಿಶೀಲಿಸಬಹುದು. ಸಿಬಿಎಸ್​ಇ ಪರೀಕ್ಷೆ ಸಂಬಂಧಿತ ಚಟುವಟಿಕೆಗಳನ್ನು ಈ ವೆಬ್​ಸೈಟ್​ನಲ್ಲೇ ನೋಡಬಹುದು. CBSE ಬೋರ್ಡ್ ಒಂದೇ ಕಡೆ ಬೋರ್ಡ್ ಪರೀಕ್ಷೆಯ ಫಲಿತಾಂಶಗಳು, ಮಾದರಿ ಪತ್ರಿಕೆಗಳು ಮತ್ತು ಇತರ ವಿವರಗಳನ್ನು ನೀಡಲು ‘ಪರೀಕ್ಷಾ ಸಂಗಮ’ ಎಂಬ ಪೋರ್ಟಲ್ ಅನ್ನು ಪ್ರಾರಂಭಿಸಿತು. cbsedigitaleducation.com ಪ್ರಕಾರ, ಹೊಸದಾಗಿ ಪ್ರಾರಂಭಿಸಲಾದ ಪರೀಕ್ಷಾ ಸಂಗಮ್ ಪೋರ್ಟಲ್ ಶಾಲೆಯ ಪ್ರಾದೇಶಿಕ ಕಚೇರಿಗಳು ಮತ್ತು CBSE ಮಂಡಳಿಯ ಪ್ರಧಾನ ಕಛೇರಿಯಿಂದ ನಡೆಸಲಾಗುವ ವಿವಿಧ ಪರೀಕ್ಷೆ ಸಂಬಂಧಿತ ಪ್ರಕ್ರಿಯೆಗಳ ಮಾಹಿತಿಯನ್ನು ನೀಡುತ್ತದೆ.

CBSE 10ನೇ ತರಗತಿಯ ಫಲಿತಾಂಶವನ್ನು ಹೇಗೆ ಪರಿಶೀಲಿಸುವುದು ಎಂಬ ಮಾಹಿತಿ ಇಲ್ಲಿದೆ:

ಅಧಿಕೃತ ವೆಬ್‌ಸೈಟ್‌ cbse.gov.in, cbseresults.nic.inಗೆ ಭೇಟಿ ನೀಡಿ.

CBSE 10 ನೇ ಫಲಿತಾಂಶ 2022 ಎಂಬ ಲಿಂಕ್ ಕ್ಲಿಕ್ ಮಾಡಿ. ಲಾಗಿನ್ ದಾಖಲಾತಿಗಳನ್ನು ನಮೂದಿಸಿ

ಸಲ್ಲಿಸು (ಸಬ್ಮಿಟ್) ಎಂಬಲ್ಲಿ ಕ್ಲಿಕ್ ಮಾಡಿ. ಆಗ ಫಲಿತಾಂಶವು ಸ್ಕ್ರೀನ್ ಮೇಲೆ ಗೋಚರಿಸುತ್ತದೆ.

ಫಲಿತಾಂಶವನ್ನು ಡೌನ್‌ಲೋಡ್ ಮಾಡಿ, ಪ್ರಿಂಟ್ ತೆಗೆದುಕೊಳ್ಳಿ.

ಡಿಜಿ ಲಾಕರ್ ಮೂಲಕ ಸಿಬಿಎಸ್‌ಇ 10ನೇ ತರಗತಿ ಫಲಿತಾಂಶವನ್ನು ಡೌನ್‌ಲೋಡ್ ಮಾಡುವುದು ಹೇಗೆ?:

ಅಧಿಕೃತ ವೆಬ್‌ಸೈಟ್‌ digilocker.gov.inಗೆ ಭೇಟಿ ನೀಡಿ.

ನಿಮ್ಮ ಆಧಾರ್ ಸಂಖ್ಯೆ ಮತ್ತು ಇತರ ವಿವರಗಳಂತಹ ನಿಮ್ಮ ಲಾಗಿನ್ ವಿವರಗಳನ್ನು ನಮೂದಿಸಿ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ಫೋಲ್ಡರ್ ಮೇಲೆ ಕ್ಲಿಕ್ ಮಾಡಿ

ನಿಮ್ಮ ತಾತ್ಕಾಲಿಕ ಮಾರ್ಕ್ ಶೀಟ್ ಅನ್ನು ಸ್ಕ್ರೀನ್ ಮೇಲೆ ಪ್ರದರ್ಶಿಸಲಾಗುತ್ತದೆ

ಅದನ್ನು PDFನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಿ.

ಇದನ್ನೂ ಓದಿ: ಸಿಬಿಎಸ್​ಇ 10ನೇ ತರಗತಿ ಪ್ರಶ್ನೆ ಪತ್ರಿಕೆ ವಿರುದ್ಧ ಪ್ರಿಯಾಂಕಾ ಗಾಂಧಿ, ನೆಟ್ಟಿಗರ ಕಿಡಿ; ಟ್ರೆಂಡ್ ಆಯ್ತು ಸ್ತ್ರೀನಿಂದಕ ಸಿಬಿಎಸ್​ಇ ಎಂಬ ಹ್ಯಾಷ್​ಟ್ಯಾಗ್​

ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು SMS ಮೂಲಕವೂ ಪರಿಶೀಲಿಸಬಹುದು.

cbse10 <space> ರೋಲ್ ಸಂಖ್ಯೆ ಹಾಕಿ ಸಂದೇಶವನ್ನು ಟೈಪ್ ಮಾಡಿ.

ಆ ಮೆಸೇಜನ್ನು 7738299899 ನಂಬರ್​ಗೆ ಕಳುಹಿಸಿ

ಆಗ ನಿಮ್ಮ ನೋಂದಾಯಿತ ಮೊಬೈಲ್ ಸಂಖ್ಯೆಯ ಮೂಲಕ ಫಲಿತಾಂಶವನ್ನು ನೋಡಬಹುದು.

ಈ ವರ್ಷ CBSE 10 ನೇ ತರಗತಿಯ ಟರ್ಮ್ 2 ಪರೀಕ್ಷೆಗಳು ಏಪ್ರಿಲ್ 26ರಿಂದ ಮೇ 24ರವರೆಗೆ ನಡೆದಿದ್ದವು. CBSE ಬೋರ್ಡ್ ಮಾರ್ಚ್‌ನಲ್ಲಿ 10ನೇ ತರಗತಿಯ ಅವಧಿ 1 ಫಲಿತಾಂಶವನ್ನು ಪ್ರಕಟಿಸಿತ್ತು. ಸಿಬಿಎಸ್‌ಇ ಮಂಡಳಿಯು 1ನೇ ತರಗತಿಯ 10ನೇ ತರಗತಿಯ ಅಂಕಪಟ್ಟಿಯನ್ನು ಆಯಾ ಶಾಲೆಗಳಿಗೆ ಕಳುಹಿಸಿತ್ತು. ಸಿಬಿಎಸ್‌ಇ 10ನೇ ತರಗತಿಯ 1ನೇ ಅವಧಿಯ ಥಿಯರಿ ಪೇಪರ್‌ಗಳ ಫಲಿತಾಂಶಗಳನ್ನು ಮಾತ್ರ ಶಾಲೆಗಳಿಗೆ ಕಳುಹಿಸಲಾಗಿದೆ.

Published On - 12:26 pm, Mon, 4 July 22

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?