AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE 10th Result 2025: ಮೇ ತಿಂಗಳ ಎರಡನೇ ವಾರದಲ್ಲಿ CBSE ಫಲಿತಾಂಶ ಪ್ರಕಟ ಸಾಧ್ಯತೆ

ಸಿಬಿಎಸ್‌ಇ 10ನೇ ತರಗತಿಯ ಫಲಿತಾಂಶದ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. 2023 ಮತ್ತು 2024ರಲ್ಲಿ ಫಲಿತಾಂಶ ಪ್ರಕಟವಾದ ಆಧಾರದ ಮೇಲೆ ಈ ವರ್ಷದ ಅಂದರೆ 2025ರ ಸಿಬಿಎಸ್‌ಇ ಫಲಿತಾಂಶ ಮೇ ತಿಂಗಳ ಎರಡನೇ ವಾರದಲ್ಲಿ ಪ್ರಕಟವಾಗಲಿದೆ ಎಂದು ಹೇಳಲಾಗುತ್ತಿದೆ. cbse.gov.in ಮತ್ತು results.cbse.nic.in ವೆಬ್‌ಸೈಟ್‌ಗಳಲ್ಲಿ ಅಥವಾ DigiLocker ಮತ್ತು UMANG ಅಪ್ಲಿಕೇಶನ್‌ಗಳ ಮೂಲಕ ಫಲಿತಾಂಶ ಪರಿಶೀಲಿಸಬಹುದು.

CBSE 10th Result 2025: ಮೇ ತಿಂಗಳ ಎರಡನೇ ವಾರದಲ್ಲಿ CBSE ಫಲಿತಾಂಶ ಪ್ರಕಟ ಸಾಧ್ಯತೆ
Cbse 10th Result
Follow us
ಅಕ್ಷತಾ ವರ್ಕಾಡಿ
|

Updated on: Apr 24, 2025 | 4:27 PM

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (CBSE) 10ನೇ ತರಗತಿಯ ಫಲಿತಾಂಶವನ್ನು ಯಾವಾಗ ಬಿಡುಗಡೆ ಮಾಡುತ್ತದೆ ಎಂಬ ದಿನಾಂಕವನ್ನು ಇನ್ನೂ ಘೋಷಿಸಲಾಗಿಲ್ಲ, ಆದರೆ ಮುಂದಿನ ತಿಂಗಳ ಎರಡನೇ ಅಥವಾ ಮೂರನೇ ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸಬಹುದು ಎಂದು ಹೇಳಲಾಗುತ್ತಿದೆ. ಫಲಿತಾಂಶ ಪ್ರಕಟವಾದ ನಂತರ, ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಸಿಬಿಎಸ್‌ಇಯ ಅಧಿಕೃತ ವೆಬ್‌ಸೈಟ್ cbse.gov.in ನಲ್ಲಿ ಪರಿಶೀಲಿಸಬಹುದು. ಇದಲ್ಲದೆ, ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು results.cbse.nic.in ನಲ್ಲಿಯೂ ಪರಿಶೀಲಿಸಬಹುದು.

ಇದಲ್ಲದೆ, ವಿದ್ಯಾರ್ಥಿಗಳು ತಮ್ಮ 10 ನೇ ತರಗತಿ ಫಲಿತಾಂಶಗಳನ್ನು ಪರಿಶೀಲಿಸಲು ಡಿಜಿಲಾಕರ್ ಮತ್ತು ಉಮಾಂಗ್‌ನಂತಹ ಸ್ಮಾರ್ಟ್‌ಫೋನ್ ಅಪ್ಲಿಕೇಶನ್‌ಗಳನ್ನು ಸಹ ಬಳಸಬಹುದು. ಎರಡೂ ಅಪ್ಲಿಕೇಶನ್‌ಗಳು ಪ್ಲೇ ಸ್ಟೋರ್‌ನಲ್ಲಿ (ಆಂಡ್ರಾಯ್ಡ್ ಸಾಧನಗಳಿಗೆ) ಮತ್ತು ಆಪ್ ಸ್ಟೋರ್‌ನಲ್ಲಿ (ಐಒಎಸ್ ಸಾಧನಗಳಿಗೆ) ಲಭ್ಯವಿದೆ. ಅಧಿಕೃತ ವೆಬ್‌ಸೈಟ್‌ಗಳು, ಡಿಜಿಲಾಕರ್ ಮತ್ತು ಉಮಾಂಗ್ ಅಪ್ಲಿಕೇಶನ್‌ಗಳ ಹೊರತಾಗಿ, ವಿದ್ಯಾರ್ಥಿಗಳು ತಮ್ಮ ಫಲಿತಾಂಶಗಳನ್ನು SMS ಮೂಲಕವೂ ಪರಿಶೀಲಿಸಬಹುದು. ಕಳೆದ ಎರಡು ವರ್ಷಗಳಲ್ಲಿ 10ನೇ ತರಗತಿಯ ಫಲಿತಾಂಶಗಳನ್ನು ಯಾವಾಗ ಘೋಷಿಸಲಾಯಿತು ಮತ್ತು, ಈ ಬಾರಿ ಮಂಡಳಿಯು ಫಲಿತಾಂಶಗಳನ್ನು ಯಾವಾಗ ಬಿಡುಗಡೆ ಮಾಡಬಹುದು ಎಂಬುದನ್ನು ಇಲ್ಲಿ ತಿಳಿದುಕೊಳ್ಳಿ.

2023 ರಲ್ಲಿ ಫಲಿತಾಂಶ ಪ್ರಕಟವಾಗಿದ್ದು ಯಾವಾಗ?

2023 ರಲ್ಲಿ, CBSE 10 ನೇ ತರಗತಿಯ ಪರೀಕ್ಷೆಗಳನ್ನು ಫೆಬ್ರವರಿ 14 ರಿಂದ ಮಾರ್ಚ್ 21 ರವರೆಗೆ ನಡೆದಿದ್ದು, ಮೇ 12 ರಂದು ಫಲಿತಾಂಶಗಳನ್ನು ಘೋಷಿಸಿತ್ತು.

2024 ರಲ್ಲಿ ಫಲಿತಾಂಶ ಪ್ರಕಟವಾಗಿದ್ದು ಯಾವಾಗ?

2024 ರಲ್ಲಿ, CBSE 10 ನೇ ತರಗತಿಯ ಪರೀಕ್ಷೆ ಫೆಬ್ರವರಿ 15 ರಿಂದ ಮಾರ್ಚ್ 13 ರವರೆಗೆ ನಡೆಸಲಾಯಿತು. ಅದರಂತೆ ಫಲಿತಾಂಶವನ್ನು ಮೇ 13 ರಂದು ಬಿಡುಗಡೆ ಮಾಡಲಾಯಿತು. ಪರೀಕ್ಷೆಗಳಲ್ಲಿ ಕಳೆದ ವರ್ಷ ಶೇ. 93.6 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು. ಅತ್ಯುತ್ತಮ ಪ್ರದರ್ಶನ ನೀಡಿದ ನಗರಗಳಲ್ಲಿ ತಿರುವನಂತಪುರಂ, ವಿಜಯವಾಡ, ಚೆನ್ನೈ, ಬೆಂಗಳೂರು, ಅಜ್ಮೀರ್ ಮತ್ತು ಪುಣೆ ಸೇರಿವೆ. ಅದೇ ಸಮಯದಲ್ಲಿ, ಗುವಾಹಟಿಯಲ್ಲಿ ಅತಿ ಕಡಿಮೆ ಉತ್ತೀರ್ಣ ಶೇಕಡಾವಾರು ದಾಖಲಾಗಿದೆ.

2023 ಮತ್ತು 2024ರ ಆಧಾರದ ಮೇಲೆ ಈ ವರ್ಷದ ಅಂದರೆ 2025ರ ಸಿಬಿಎಸ್‌ಇ ಫಲಿತಾಂಶ ಮೇ ತಿಂಗಳ ಎರಡನೇ ವಾರದಲ್ಲಿ ಪ್ರಕಟವಾಗಲಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಒಂದನೇ ತರಗತಿ ಸೇರ್ಪಡೆಗೆ ವಯೋಮಿತಿ ಸಡಿಲ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಹತ್ವದ ಘೋಷಣೆ

ಫಲಿತಾಂಶ ಬಿಡುಗಡೆಯಾದಾಗ ಪರಿಶೀಲಿಸುವುದು ಹೇಗೆ?

  • ಮೊದಲನೆಯದಾಗಿ ನೀವು CBSE ಯ ಅಧಿಕೃತ ವೆಬ್‌ಸೈಟ್ cbse.gov.in ಗೆ ಭೇಟಿ ನೀಡಬೇಕು.
  • ನಂತರ ಫಲಿತಾಂಶ ವಿಭಾಗಕ್ಕೆ ಹೋಗಿ ಮತ್ತು CBSE 10ನೇ ತರಗತಿಯ ಫಲಿತಾಂಶ 2025 ಅನ್ನು ಪರಿಶೀಲಿಸಲು ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಅದರ ನಂತರ ನಿಮ್ಮ ಲಾಗಿನ್ ವಿವರಗಳನ್ನು ನಮೂದಿಸಿ ಮತ್ತು ಸಲ್ಲಿಸು ಕ್ಲಿಕ್ ಮಾಡಿ.
  • ಈಗ ನಿಮ್ಮ CBSE 10ನೇ ತರಗತಿಯ ಫಲಿತಾಂಶ/ಅಂಕಪಟ್ಟಿಯನ್ನು ಸ್ಕ್ರೀನ್​ ಮೇಲೆ ನೋಡಿ.
  • ಭವಿಷ್ಯದ ಬಳಕೆಗಾಗಿ ಅದರ ಪ್ರಿಂಟ್​ ಕಾಪಿಯನ್ನು ತೆಗೆದಿಟ್ಟುಕೊಳ್ಳಿ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್