ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯ ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ. 88.39 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಂಡಳಿಯ ಅಧಿಕೃತ ವೆಬ್‌ಸೈಟ್ ಹೊರತುಪಡಿಸಿ, ವಿದ್ಯಾರ್ಥಿಗಳು ಡಿಜಿಲಾಕರ್‌ನಲ್ಲಿಯೂ ಫಲಿತಾಂಶವನ್ನು ಪರಿಶೀಲಿಸಬಹುದು. ವಿಶೇಷವೆಂದರೆ ಪ್ರತಿ ಬಾರಿಯಂತೆ ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಶೇ. 91.64 ರಷ್ಟು ಹುಡುಗಿಯರು ಉತ್ತೀರ್ಣರಾಗಿದ್ದರೆ, ಬಾಲಕರ ಉತ್ತೀರ್ಣ ಪ್ರಮಾಣ ಶೇ. 85.70 ರಷ್ಟಿದೆ. ಬೆಂಗಳೂರಿಗೆ ನಾಲ್ಕನೇ ಸ್ಥಾನ ಬಂದಿದೆ. ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯ ರಿಸಲ್ಟ್ ಕೂಡ ಇಂದೇ ಹೊರ ಬರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಈ ವರ್ಷ, 17,04,367 ವಿದ್ಯಾರ್ಥಿಗಳು ಸಿಬಿಎಸ್‌ಇ 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಿದ್ದರು; ಇವರಲ್ಲಿ 16,92,794 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ 14 ಲಕ್ಷ 96 ಸಾವಿರ 307. ವಿಶೇಷವೆಂದರೆ ಕಳೆದ ವರ್ಷವೂ ಪರೀಕ್ಷೆಯ ಫಲಿತಾಂಶವನ್ನು ಮಂಡಳಿಯು ಮೇ 13 ರಂದು ಘೋಷಿಸಿತ್ತು. ಈ ಹಿಂದೆ, ಮಂಡಳಿಯು ವಿದ್ಯಾರ್ಥಿಗಳಿಗೆ ಡಿಜಿಲಾಕರ್ ಪ್ರವೇಶವನ್ನು ಈಗಾಗಲೇ ನೀಡಿದೆ. ಅದರ ಪಿನ್ ಅನ್ನು ಆಯಾ ಶಾಲೆಗಳು ಈಗಾಗಲೇ ವಿದ್ಯಾರ್ಥಿಗಳಿಗೆ ನೀಡಿವೆ. ಕಳೆದ ಬಾರಿ ಸಿಬಿಎಸ್‌ಇ 12ನೇ ತರಗತಿಯಲ್ಲಿ ಶೇ. 87.98 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.
ಇದನ್ನೂ ಓದಿ: ಜನಿವಾರ ಧರಿಸಬಾರದೆಂದು ಪ್ರಾಧಿಕಾರವು ವಸ್ತ್ರಸಂಹಿತೆ ವಿಷಯದಲ್ಲಿ ಹೇಳಿಲ್ಲ: ಹೆಚ್ ಪ್ರಸನ್ನ, ಕಾರ್ಯನಿರ್ವಾಹಕ ನಿರ್ದೇಶಕ-ಕೆಇಎ
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 12:55 pm, Tue, 13 May 25