ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್, ಸಿಬಿಎಸ್ಇ 10 ನೇ ತರಗತಿ ಫಲಿತಾಂಶ 2023 (CBSE 10th Result 2023) ಪ್ರಕಟಿಸಿದ್ದು, ತನ್ನ ಅಧಿಕೃತ ವೆಬ್‌ಸೈಟ್ ಅಲ್ಲಿ ಬಿಡುಗಡೆ ಮಾಡಿದೆ. ಫಲಿತಾಂಶವನ್ನು ಪರಿಶೀಲಿಸಲು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ cbseresults.nic.in ಅಲ್ಲಿ ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಬೇಕಾಗುತ್ತದೆ. ಇದೀಗ 10 ನೇ ತರಗತಿ ಫಲಿತಾಂಶ ಪ್ರಕಟವಾಗಿದೆ.
ಈ ವರ್ಷ ಸುಮಾರು 38,83,710 ವಿದ್ಯಾರ್ಥಿಗಳು ಸಿಬಿಎಸ್ಇ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಿದ್ದಾರೆ. ಒಟ್ಟು 21,86,940 ವಿದ್ಯಾರ್ಥಿಗಳು CBSE 10 ನೇ ತರಗತಿ ಪರೀಕ್ಷೆಗೆ ಹಾಜರಾಗಿದ್ದರು ಮತ್ತು 16,96,770 ವಿದ್ಯಾರ್ಥಿಗಳು 12 ನೇ ತರಗತಿ ಪರೀಕ್ಷೆಗೆ ಹಾಜರಾಗಿದ್ದರು.
Central Board of Secondary Education (CBSE) class 10 exam results will be announced today: CBSE pic.twitter.com/mwngcXob0O
— ANI (@ANI) May 12, 2023
ಸಿಬಿಎಸ್ಇ ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಘೋಷಿಸಿದ ನಂತರ, ಅಭ್ಯರ್ಥಿಗಳು cbse.gov.in, cbseresults.nic.in ಮತ್ತು results.cbse.nic.in ಸೇರಿದಂತೆ ಅಧಿಕೃತ ವೆಬ್‌ಸೈಟ್‌ಗಳಿಂದ ಸ್ಕೋರ್‌ಕಾರ್ಡ್ ಅನ್ನು ಪರಿಶೀಲಿಸಲು ಮತ್ತು ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತದೆ. ನಿಮ್ಮ ಸಿಬಿಎಸ್ಇಬೋರ್ಡ್ ಮಾರ್ಕ್‌ಶೀಟ್ 2023 ಅನ್ನು ಹೇಗೆ ಡೌನ್‌ಲೋಡ್ ಮಾಡುವುದು ಎಂಬುದನ್ನು ತಿಳಿಯಲು ಕೆಳಗೆ ತಿಳಿಸಲಾದ ಹಂತಗಳನ್ನು ಪರಿಶೀಲಿಸಿ.
ಇದನ್ನೂ ಓದಿ: ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಪ್ರಕಟ: ಪರ್ಯಾಯ ವೆಬ್‌ಸೈಟ್‌ಗಳಲ್ಲಿ ಫಲಿತಾಂಶ ಪರಿಶೀಲಿಸುವುದು ಹೇಗೆ?
Published On - 1:27 pm, Fri, 12 May 23