
ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಸಿಬಿಎಸ್‌ಇ 10ನೇ ತರಗತಿಯ ಪರೀಕ್ಷಾ ಫಲಿತಾಂಶ ಬಿಡುಗಡೆ ಮಾಡಿದೆ. ಈ ಬಾರಿ ಶೇ. 93.66 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಸಿಬಿಎಸ್‌ಇಯ ಅಧಿಕೃತ ವೆಬ್‌ಸೈಟ್‌ನ ಹೊರತಾಗಿ, ವಿದ್ಯಾರ್ಥಿಗಳು ಡಿಜಿಲಾಕರ್‌ನಲ್ಲಿಯೂ ಫಲಿತಾಂಶವನ್ನು ಪರಿಶೀಲಿಸಬಹುದು. ಈ ಬಾರಿ ಸಿಬಿಎಸ್‌ಇ ಮಂಡಳಿಯ 10ನೇ ತರಗತಿ ಪರೀಕ್ಷೆಗೆ ಸುಮಾರು 23 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದು, ಅದರಲ್ಲಿ 22 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಇದರಲ್ಲಿ ಬಾಲಕಿಯರು ಮೇಲು ಗೈ ಸಾಧಿಸಿದ್ದಾರೆ. ಈ ಬಾರಿ ಶೇ. 95 ರಷ್ಟು ಬಾಲಕಿಯರು ಹಾಗೂ ಶೇ. 92.63 ರಷ್ಟು ಬಾಲಕರು ಪಾಸ್ ಆಗಿದ್ದಾರೆ.
ಸಿಬಿಎಸ್‌ಇ 10ನೇ ತರಗತಿ ಫಲಿತಾಂಶದಲ್ಲಿ ಸುಮಾರು 2 ಲಕ್ಷ ವಿದ್ಯಾರ್ಥಿಗಳು ಶೇ. 90 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ, ಅದರಲ್ಲಿ 45 ಸಾವಿರ ವಿದ್ಯಾರ್ಥಿಗಳು ಶೇ. 95 ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದ್ದಾರೆ. ಆದರೆ ಈ ಬಾರಿ ಜುಲೈ ಮೊದಲ ಅಥವಾ ಎರಡನೇ ವಾರದಲ್ಲಿ ನಡೆಯಲಿರುವ ಪೂರಕ ಪರೀಕ್ಷೆ ಅಂದರೆ ಕಂಪಾರ್ಟ್‌ಮೆಂಟ್ ಪರೀಕ್ಷೆಯನ್ನು 1 ಲಕ್ಷ 41 ಸಾವಿರ ವಿದ್ಯಾರ್ಥಿಗಳು ಬರೆಯಬೇಕಾಗುತ್ತದೆ.
ಈ ಬಾರಿಯೂ ಸಹ, ಸಿಬಿಎಸ್‌ಇ 10ನೇ ತರಗತಿಯ ಫಲಿತಾಂಶದಲ್ಲಿ ತಿರುವನಂತಪುರಂ, ವಿಜಯವಾಡ, ಬೆಂಗಳೂರು ನಗರಗಳು ಟಾಪ್ -3 ಪಟ್ಟಿಯಲ್ಲಿದೆ. ದೆಹಲಿ 7 ನೇ ಸ್ಥಾನದಲ್ಲಿದೆ. ಗುವಾಹಟಿ ಕೊನೆಯ ಸ್ಥಾನದಲ್ಲಿದೆ.
ಇದನ್ನೂ ಓದಿ: ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ; ರಿಸಲ್ಟ್ ಪರಿಶೀಲಿಸುವ ಲಿಂಕ್ ಇಲ್ಲಿದೆ
ಇದಲ್ಲದೆ DigiLocker ಮತ್ತು UMANG ಅಪ್ಲಿಕೇಶನ್‌ಗಳ ಮೂಲಕ ಫಲಿತಾಂಶ ಪರಿಶೀಲಿಸಬಹುದು.
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ