CBSE Class 12 Exam 2021: ಸಿಬಿಎಸ್​ಇ ಹತ್ತರಂತೆ, ಕ್ಲಾಸ್​ 12 ಪರೀಕ್ಷೆ ಸಹ ಕ್ಯಾನ್ಸಲ್​? ಹಾಗಾದ್ರೆ ಮುಂದೇನು?

CBSE Class 12 Board Exams 2021: ಕೊರೊನಾ ಕಾಟದಿಂದ ಬಸವಳಿದಿರುವ ಪೋಷಕರು ಸೇರಿದಂತೆ ಎಲ್ಲೆಡೆಯಿಂದ ಪರೀಕ್ಷೆ ರದ್ದು ಮಾಡಲು ಆಗ್ರಹಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಇಂದು (May 17) ಸಂಬಂಧಪಟ್ಟ ಉನ್ನತಾಧಿಕಾರಿಗಳ ಸಭೆ ನಡೆಸಿ, ಶಿಕ್ಷಣ ಸಚಿವ ರಮೇಶ್​ ಪೋಖ್ರಿಯಾಲ್ ಒಂದು ನಿರ್ಧಾರಕ್ಕೆ ಬರುವ ಸಾಧ್ಯತೆಯಿದೆ. ಎಲ್ಲ ರಾಜ್ಯಗಳ ಶಿಕ್ಷಣ ಕಾರ್ಯದರ್ಶಿಗಳೂ ಸಹ ವರ್ಚುಯಲ್ ಸಭೆಯಲ್ಲಿ ಪಾಳ್ಗೊಳ್ಳಲಿದ್ದಾರೆ.

CBSE Class 12 Exam 2021: ಸಿಬಿಎಸ್​ಇ ಹತ್ತರಂತೆ, ಕ್ಲಾಸ್​ 12 ಪರೀಕ್ಷೆ ಸಹ ಕ್ಯಾನ್ಸಲ್​? ಹಾಗಾದ್ರೆ ಮುಂದೇನು?
ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್
Follow us
ಸಾಧು ಶ್ರೀನಾಥ್​
| Updated By: Digi Tech Desk

Updated on:May 17, 2021 | 12:02 PM

ಕಳೆದ ಎರಡು ಶೈಕ್ಷಣಿಕ ವರ್ಷಗಳಲ್ಲಿ ಶಾಲಾ ಮಕ್ಕಳಿಗೆ ಶಾಲೆಯೂ ಇಲ್ಲ; ಪರೀಕ್ಷೆಯೂ ಇಲ್ಲ. ಶಿಕ್ಷಣ ಭವಿಷ್ಯ ಏನೋ ಎಂತೋ ಎಂಬಂತಾಗಿದೆ. ಇದರಿಂದ ಒಂದು ಕಡೆ ವಿದ್ಯಾರ್ಥಿಗಳು ಒತ್ತಡಕ್ಕೆ ಒಳಗಾಗಿದ್ದರೆ ಮತ್ತೊಂದೆಡೆ ಪೋಷಕರು ಮತ್ತು ಶಾಲಾ ಶಿಕ್ಷಕರು, ಆಡಳಿತ ಮಂಡಳಿಗಳು ಭಾರೀ ಚಿಂತೆಗೀಡಾಗಿವೆ. ಪರಿಸ್ಥಿತಿ ಹೀಗಿರುವಾಗ ಮುಖ್ಯವಾದ 10ನೆಯ ತರಗತಿ ಪರೀಕ್ಷೆಗಳನ್ನು ರದ್ದು ಮಾಡಿರುವ CBSE Board ಇದೀಗ ಹೆಚ್ಚುತ್ತಿರುವ ಕೊರೊನಾ ಸೋಂಕಿನ ಕಾಟದಿಂದ ಕ್ಲಾಸ್​ 12 (Class 12) ಪರೀಕ್ಷೆಯನ್ನು ಸಹ ಕ್ಯಾನ್ಸಲ್​ ಮಾಡುವ ಸಾಧ್ಯತೆ ದಟ್ಟವಾಗಿದೆ. ಈ ಬಗ್ಗೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್​ ಪೋಖ್ರಿಯಾಲ್ ನಿಶಾಂಕ್​ (Union Education Minister Ramesh Pokhriyal Nishank) ಅಂತಿಮ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.

ಕೊರೊನಾ ಕಾಟದಿಂದ ಬಸವಳಿದಿರುವ ಪೋಷಕರು ಸೇರಿದಂತೆ ಎಲ್ಲೆಡೆಯಿಂದ ಸಿಬಿಎಸ್​ಇ ಪರೀಕ್ಷೆಗಳನ್ನು ರದ್ದು ಮಾಡಲು ಆಗ್ರಹಗಳು ಕೇಳಿಬಂದಿರುವ ಹಿನ್ನೆಲೆಯಲ್ಲಿ ಇಂದು (May 17) ಸಂಬಂಧಪಟ್ಟ ಉನ್ನತಾಧಿಕಾರಿಗಳ ಸಭೆ ನಡೆಸಿ, ಶಿಕ್ಷಣ ಸಚಿವ ರಮೇಶ್​ ಪೋಖ್ರಿಯಾಲ್ ಒಂದು ನಿರ್ಧಾರಕ್ಕೆ ಬರುವ ಸಾಧ್ಯತೆಯಿದೆ. ಎಲ್ಲ ರಾಜ್ಯಗಳ ಶಿಕ್ಷಣ ಕಾರ್ಯದರ್ಶಿಗಳೂ ಸಹ ವರ್ಚುಯಲ್ ಸಭೆಯಲ್ಲಿ ಪಾಳ್ಗೊಳ್ಳಲಿದ್ದಾರೆ. ಇದೇ ವೇಳೆ, ಆನ್​ಲೈನ್ ಶಿಕ್ಷಣಕ್ಕೆ ಒತ್ತುಕೊಡುವ ಮತ್ತು ನೂತನ ಶಿಕ್ಷಣ ನೀತಿಯ (NEP) ಬಗ್ಗೆ ಮಹತ್ವದ ಚರ್ಚೆಗಳು ನಡೆಯುವ ಸೂಚನೆಗಳಿವೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯದ ಮೂಲಗಳು ಹೇಳಿವೆ.

ಪೂರ್ವನಿಗದಿಯಂತೆ ಮೇ 4ರಿಂದ CBSE ಕ್ಲಾಸ್​ 10 ಪರೀಕ್ಷೆಗಳು ನಡೆಯಬೇಕಿತ್ತು. ಆದರೆ ದೇಶಾದ್ಯಂತ COVID-19 ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಕಳೆದ ಏಪ್ರಿಲ್​ ತಿಂಗಳಲ್ಲಿ CBSE Class 10 Board Exam 2021 ಅನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿತ್ತು.

(CBSE Class 12 Board Exam 2021 may be cancelled today by Union Education Minister Ramesh Pokhriyal Nishank updates)

CBSE Board Exams 2021: ಸಿಬಿಎಸ್​ಇ 10ನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ದಿನಾಂಕ ಮುಂದೂಡಿಕೆ

Published On - 10:22 am, Mon, 17 May 21

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್