ನವದೆಹಲಿ: ಕೇಂದ್ರ ಪ್ರೌಢಶಿಕ್ಷಣ ಮಂಡಳಿ (CBSE) ದ್ವಿತೀಯ ಪಿಯುಸಿ ತರಗತಿ ಪರೀಕ್ಷೆ ಫಲಿತಾಂಶದ ದಿನಾಂಕ ನಾಳೆ (ಜುಲೈ 22) ಪ್ರಕಟವಾಗಬೇಕಿತ್ತು. ಆದರೆ, ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಯ ಫಲಿತಾಂಶದ ದಿನಾಂಕ ಮುಂದೂಡಿಕೆಯಾಗಿದ್ದು, ಜುಲೈ 25ರಂದು ವಿದ್ಯಾರ್ಥಿಗಳ ಅಂಕಗಳ ಅಂತಿಮ ಪಟ್ಟಿ ಸಿದ್ಧಗೊಳ್ಳಲಿದೆ.
ಸಿಬಿಎಸ್‌ಇ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಅಂತಿಮಗೊಳಿಸುವ ದಿನಾಂಕವನ್ನು ಜುಲೈ 25ಕ್ಕೆ ಮುಂದೂಡಲಾಗಿದೆ. ಶಾಲೆಗಳ ಜೊತೆಗೆ ಮಂಡಳಿಯು ದತ್ತಾಂಶವನ್ನು ಒಟ್ಟು ಸೇರಿಸಲು ರಾತ್ರಿ ಹಗಲು ಕೆಲಸ ಮಾಡುತ್ತಿದೆ. ಇಂದು ಈದ್ ಮಿಲಾದ್ ಹಬ್ಬದಂದು ಸರ್ಕಾರಿ ರಜೆಯಿದ್ದರೂ ಇಂದು ಕೂಡ ಸಿಬಿಎಸ್‌ಇ ಸಿಬ್ಬಂದಿ ಇಂದು ಕೂಡ ಕೆಲಸ ಮಾಡಿದ್ದಾರೆ. ವಿದ್ಯಾರ್ಥಿಗಳಿಗೆ ಯಾವುದೇ ಅನ್ಯಾಯವಾಗದಂತೆ ಫಲಿತಾಂಶವನ್ನು ಪ್ರಕಟ ಮಾಡಲಾಗುವುದು ಎಂದು ಸಿಬಿಎಸ್‌ಇ ತಿಳಿಸಿದೆ.
ಸಿಬಿಎಸ್‌ಇ 12ನೇ ತರಗತಿ ಅಂತಿಮ ಫಲಿತಾಂಶವನ್ನು ಸಿದ್ಧಪಡಿಸುವ ಪ್ರಕ್ರಿಯೆಯಲ್ಲಿ ಭಾಗಿಯಾಗಿರುವ ಶಿಕ್ಷಕರು ಬಹಳ ಒತ್ತಡದಲ್ಲಿದ್ದಾರೆ. ಹೀಗಾಗಿ ಫಲಿತಾಂಶದಲ್ಲಿ ಏರುಪೇರಾಗುವ ಉದ್ದೇಶದಿಂದ ಫಲಿತಾಂಶದ ದಿನಾಂಕವನ್ನು ಮುಂದೂಡಲಾಗಿದೆ. ಈ ವರ್ಷ ಕೊರೋನಾ ಅಟ್ಟಹಾಸದಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವುದು ಸುರಕ್ಷಿತವಲ್ಲವೆಂದು ಸಿಬಿಎಸ್‌ಇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ರದ್ದುಪಡಿಸಲಾಗಿತ್ತು.
ಎಸ್ಎಸ್ಎಲ್ಸಿ, ಪ್ರಥಮ ಪಿಯುಸಿಯಲ್ಲಿ ವಿದ್ಯಾರ್ಥಿಗಳು ಪಡೆದುಕೊಂಡಿರುವ ಅಂಕಗಳ ಆಧಾರದ ಮೇಲೆ 12ನೇ ತರಗತಿಯ ಫಲಿತಾಂಶ ನೀಡಲು ಸಿಬಿಎಸ್ ಮಂಡಳಿ ಮುಂದಾಗಿದೆ. ಈಗಾಗಲೇ ಇದೇ ಮಾದರಿಯಲ್ಲಿ ಕರ್ನಾಟಕದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಕರ್ನಾಟಕದಲ್ಲಿ ದ್ವಿತೀಯ ಪಿಯುಸಿಯಲ್ಲಿ ಈ ಬಾರಿ 6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 3,35,138 ವಿದ್ಯಾರ್ಥಿಗಳು, 3,31,359 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ. 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆ ಆಗಿದ್ದಾರೆ. 4,50,706 ಡಿಸ್ಟಿಂಕ್ಷನ್, ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, ಪ್ರಥಮ ದರ್ಜೆಯಲ್ಲಿ ಹಾಗೂ 2,52,056 ವಿದ್ಯಾರ್ಥಿನಿಯರು ಡಿಸ್ಟಿಂಕ್ಷನ್, ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದಾರೆ. 1,47,055 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. 68,729 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಇದನ್ನೂ ಓದಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ; ಯಾವ ಜಿಲ್ಲೆಗೆ ಎಷ್ಟನೇ ಸ್ಥಾನ?
(CBSE Class 12 result 2021 Last Date to Submit Final Marks Extended to July 25 )
Published On - 9:31 pm, Wed, 21 July 21