AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CBSE Class 12 Result 2021: ಸಿಬಿಎಸ್​ಇ 12ನೇ ತರಗತಿ ಫಲಿತಾಂಶ ಮಧ್ಯಾಹ್ನ 2 ಗಂಟೆಗೆ ಪ್ರಕಟ; ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ

CBSE Class 12 Result: ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿದ್ದಕ್ಕೆ ದೃಢೀಕರಣ ಪತ್ರ, ಅಂಕಪಟ್ಟಿ, ವಲಸೆ ಪ್ರಮಾಣಪತ್ರದಂತಹ ಅಗತ್ಯ ದಾಖಲೆಗಳು ಡಿಜಿಲಾಕರ್​ನಲ್ಲಿ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು ಡಿಜಿಲಾಕರ್ ವೆಬ್​ಸೈಟ್ ಅಥವಾ ಆ್ಯಪ್​ ಮೂಲಕ ಅವುಗಳನ್ನು ಡೌನ್​ಲೋಡ್ ಮಾಡಿಕೊಳ್ಳಬಹುದಾಗಿದೆ.

CBSE Class 12 Result 2021: ಸಿಬಿಎಸ್​ಇ 12ನೇ ತರಗತಿ ಫಲಿತಾಂಶ ಮಧ್ಯಾಹ್ನ 2 ಗಂಟೆಗೆ ಪ್ರಕಟ; ಫಲಿತಾಂಶ ವೀಕ್ಷಿಸಲು ಹೀಗೆ ಮಾಡಿ
ಪರೀಕ್ಷಾ ಫಲಿತಾಂಶ (ಪ್ರಾತಿನಿಧಿಕ ಚಿತ್ರ)
TV9 Web
| Updated By: Skanda|

Updated on: Jul 30, 2021 | 11:37 AM

Share

ದೆಹಲಿ: ಕೇಂದ್ರ ಪ್ರೌಢ ಶಿಕ್ಷಣ ಮಂಡಳಿಯು (CBSE) ದ್ವಿತೀಯ ಪಿಯುಸಿ ತರಗತಿ ಪರೀಕ್ಷೆ ಫಲಿತಾಂಶವನ್ನು ಇಂದು (ಜುಲೈ 30) ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಿದೆ. 12ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶವು (CBSE Class 12 Result 2021) ಬೋರ್ಡ್​ನ ಅಧಿಕೃತ ವೆಬ್​ಸೈಟ್​ನಲ್ಲಿ ಲಭ್ಯವಾಗಲಿದ್ದು, cbseresults.nic.in ಅಥವಾ digilocker.gov.in ಮೂಲಕ ಫಲಿತಾಂಶ ವೀಕ್ಷಿಸಬಹುದಾಗಿದೆ. ಜತೆಗೆ ಡಿಜಿಲಾಕರ್​ ಆ್ಯಪ್​ನಲ್ಲಿ ಕೂಡಾ ಫಲಿತಾಂಶ ನೋಡಬಹುದಾಗಿದ್ದು, ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆಯನ್ನು ಲಗತ್ತಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ. ಈ ಬಗ್ಗೆ ಕೇಂದ್ರ ಪ್ರೌಢ ಶಿಕ್ಷಣ ಮಂಡಳಿ ಅಧಿಕೃತ ಮಾಹಿತಿ ನೀಡಿದ್ದು, 12ನೇ ತರಗತಿ ಫಲಿತಾಂಶವನ್ನು ಅಪರಾಹ್ನ 2 ಗಂಟೆಗೆ ಪ್ರಕಟಿಸುವುದಾಗಿ ಹೇಳಿದೆ.

ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿದ್ದಕ್ಕೆ ದೃಢೀಕರಣ ಪತ್ರ, ಅಂಕಪಟ್ಟಿ, ವಲಸೆ ಪ್ರಮಾಣಪತ್ರದಂತಹ ಅಗತ್ಯ ದಾಖಲೆಗಳು ಡಿಜಿಲಾಕರ್​ನಲ್ಲಿ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು ಡಿಜಿಲಾಕರ್ ವೆಬ್​ಸೈಟ್ ಅಥವಾ ಆ್ಯಪ್​ ಮೂಲಕ ಅವುಗಳನ್ನು ಡೌನ್​ಲೋಡ್ ಮಾಡಿಕೊಳ್ಳಬಹುದಾಗಿದೆ. ಶೈಕ್ಷಣಿಕ ವಿಭಾಗದಲ್ಲಿ (ಎಜುಕೇಶನ್​ ಸೆಕ್ಷನ್​) ಸಿಬಿಎಸ್​ಇ ಎಂಬ ಆಯ್ಕೆ ಇರಲಿದ್ದು ಅಲ್ಲಿಂದ ಇವುಗಳನ್ನು ಪಡೆಯಬಹುದಾಗಿದೆ. ಗಮನಾರ್ಹ ಅಂಶವೆಂದರೆ ವಲಸೆ ಪ್ರಮಾಣಪತ್ರಕ್ಕೆ ವಿಶೇಷ ಕೋರಿಕೆ ಸಲ್ಲಿಸಿದಲ್ಲಿ ಮಾತ್ರ ಅದರ ಮುದ್ರಿತ ಪ್ರತಿಯನ್ನು ನೀಡಲಿದೆ. ಉಳಿದಂತೆ ತುರ್ತು ಅಗತ್ಯಕ್ಕೆ ಡಿಜಿ ಲಾಕರ್​ನಿಂದಲೇ ಡೌನ್​ಲೋಡ್ ಮಾಡಿಕೊಳ್ಳಬೇಕಿದೆ.

ಕೊರೊನಾ ಎರಡನೇ ಅಲೆ ಕಾರಣದಿಂದಾಗಿ ಈ ವರ್ಷ ಸಿಬಿಎಸ್​ಇ 12ನೇ ತರಗತಿ ಪರೀಕ್ಷೆಯನ್ನು ರದ್ದುಪಡಿಸಲಾಗಿತ್ತು. ಹೀಗಾಗಿ ಪರ್ಯಾಯ ಮೌಲ್ಯಮಾಪನ ನೀತಿಯಡಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಲಾಗುತ್ತಿದ್ದು, ಇಂದು ಫಲಿತಾಂಶ ಪ್ರಕಟಗೊಳ್ಳಲಿದೆ. ಎಸ್​ಎಸ್​ಎಲ್​ಸಿ, ಪ್ರಥಮ ಪಿಯುಸಿಯಲ್ಲಿ ವಿದ್ಯಾರ್ಥಿಗಳು ಪಡೆದುಕೊಂಡಿರುವ ಅಂಕಗಳ ಆಧಾರದ ಮೇಲೆ 12ನೇ ತರಗತಿಯ ಫಲಿತಾಂಶ ನೀಡಲು ಸಿಬಿಎಸ್‌ ಮಂಡಳಿ ಮುಂದಾಗಿದೆ. ಇಂದಿನ ಫಲಿತಾಂಶದ ಬಗ್ಗೆ ಯಾವುದೇ ಅಸಮಾಧಾನವಿದ್ದಲ್ಲಿ ವಿದ್ಯಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ಪಡೆಯಲು ಅವಕಾಶವನ್ನೂ ನೀಡಲಾಗಿದೆ.

ಈಗಾಗಲೇ ಇದೇ ಮಾದರಿಯಲ್ಲಿ ಕರ್ನಾಟಕದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಕರ್ನಾಟಕದಲ್ಲಿ ದ್ವಿತೀಯ ಪಿಯುಸಿಯಲ್ಲಿ ಈ ಬಾರಿ 6,66,497 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 3,35,138 ವಿದ್ಯಾರ್ಥಿಗಳು, 3,31,359 ವಿದ್ಯಾರ್ಥಿನಿಯರು ತೇರ್ಗಡೆ ಹೊಂದಿದ್ದಾರೆ. 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್​ನಲ್ಲಿ ತೇರ್ಗಡೆ ಆಗಿದ್ದಾರೆ. 4,50,706 ಡಿಸ್ಟಿಂಕ್ಷನ್​, ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. 1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್​, ಪ್ರಥಮ ದರ್ಜೆಯಲ್ಲಿ ಹಾಗೂ 2,52,056 ವಿದ್ಯಾರ್ಥಿನಿಯರು ಡಿಸ್ಟಿಂಕ್ಷನ್​, ಪ್ರಥಮ ದರ್ಜೆಯಲ್ಲಿ ಪಾಸ್ ಆಗಿದ್ದಾರೆ. 1,47,055 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. 68,729 ವಿದ್ಯಾರ್ಥಿಗಳು ತೃತೀಯ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಇದನ್ನೂ ಓದಿ: CBSE Class 10 Board Result 2021: ಶೀಘ್ರದಲ್ಲೇ ಸಿಬಿಎಸ್​ಇ 10ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ; ರಿಸಲ್ಟ್ ನೋಡಲು ಹೀಗೆ ಮಾಡಿ 

CBSE Class 10, 12 Board Exam 2022: 2022ನೇ ಸಾಲಿನಲ್ಲಿ ಸಿಬಿಎಸ್​ಇ ಬೋರ್ಡ್ 10 ಮತ್ತು 12ನೇ ತರಗತಿ 2 ಭಾಗಗಳಾಗಿ ವಿಂಗಡಣೆ

(CBSE Class 12 Result 2021 to be announced today afternoon 2 pm here is the details)

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್