CBSE Results 2023: ಸಿಬಿಎಸ್​ಇ 12ನೇ ತರಗತಿ ಫಲಿತಾಂಶ ಪ್ರಕಟ, ಆದ್ರೆ ಟಾಪರ್ಸ್​ ಲಿಸ್ಟ್​ ಇಲ್ಲ ಏಕೆ?

ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್ಇ) ಶುಕ್ರವಾರ 12 ನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸಿದ್ದು ಶೇಕಡಾ 87.33 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ.

CBSE Results 2023: ಸಿಬಿಎಸ್​ಇ 12ನೇ ತರಗತಿ ಫಲಿತಾಂಶ ಪ್ರಕಟ, ಆದ್ರೆ ಟಾಪರ್ಸ್​ ಲಿಸ್ಟ್​ ಇಲ್ಲ ಏಕೆ?
ಸಿಬಿಎಸ್​ಇImage Credit source: Mint
Follow us
ನಯನಾ ರಾಜೀವ್
|

Updated on: May 12, 2023 | 11:28 AM

ಕೇಂದ್ರೀಯ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್ಇ) ಶುಕ್ರವಾರ 12 ನೇ ತರಗತಿಯ ಫಲಿತಾಂಶಗಳನ್ನು ಪ್ರಕಟಿಸಿದ್ದು ಶೇಕಡಾ 87.33 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ. ಈ ಬಾರಿ ಟಾಪರ್ಸ್​ ಹೆಸರುಗಳನ್ನು ಶಿಕ್ಷಣ ಮಂಡಳಿ ಬಿಡುಗಡೆ ಮಾಡಿಲ್ಲ, ವಿದ್ಯಾರ್ಥಿಗಳ ನಡುವಿನ ಅನಾರೋಗ್ಯಕರ ಸ್ಪರ್ಧೆಯನ್ನು ತಪ್ಪಿಸಲು ಮಂಡಳಿ ಈ ನಿರ್ಧಾರ ಮಾಡಿದೆ. ಟಾಪರ್ಸ್​ ಲಿಸ್ಟ್​ ನೋಡಿ ತಮ್ಮದು ಕಡಿಮೆ ಬಂದಿದೆ ಎಂದು ಯಾರೂ ಕೂಡ ಬೇಸರಗೊಳ್ಳಬಾರದು, ದುಡುಕಿನ ನಿರ್ಧಾರ ತೆಗೆದುಕೊಳ್ಳಬಾರದು ಎನ್ನುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ.

ಲಕ್ಷಾಂತರ ವಿದ್ಯಾರ್ಥಿಗಳು ಬೋರ್ಡ್ ಪರೀಕ್ಷೆಯ ಫಲಿತಾಂಶಗಳನ್ನು ಏಕಕಾಲದಲ್ಲಿ ಪರಿಶೀಲಿಸುತ್ತಾರೆ. ಇಂತಹ ಪರಿಸ್ಥಿತಿಯಲ್ಲಿ ವೆಬ್ ಸೈಟ್ ಡೌನ್ ಆಗುವ ಸಾಧ್ಯತೆಯೂ ಇದೆ. ಅಂತಹ ಪರಿಸ್ಥಿತಿಯಲ್ಲಿ, ವಿದ್ಯಾರ್ಥಿಗಳು ಡಿಜಿಲಾಕರ್ ಮತ್ತು ಉಮಾಂಗ್ ಅಪ್ಲಿಕೇಶನ್‌ಗೆ ಭೇಟಿ ನೀಡುವ ಮೂಲಕ ತಮ್ಮ ಫಲಿತಾಂಶವನ್ನು ಪರಿಶೀಲಿಸಬಹುದು ಮತ್ತು ಡೌನ್‌ಲೋಡ್ ಮಾಡಬಹುದು. ಇದಕ್ಕಾಗಿ ಅವರು ತಮ್ಮ ಪಿನ್ ಅಥವಾ ಪಾಸ್‌ವರ್ಡ್ ಅನ್ನು ಬಳಸಬೇಕಾಗುತ್ತದೆ.

CBSE ಬೋರ್ಡ್ ಪರೀಕ್ಷೆಯ ಫಲಿತಾಂಶಗಳು cbseresults.nic.in, cbse.digitallocker.gov.in ಮತ್ತು cbse.gov.in ನಲ್ಲಿ ಲಭ್ಯವಾಗಲಿವೆ. ಶಾಲೆಗಳು ಪರೀಕ್ಷಾ ಸಂಗಮ್ ಪೋರ್ಟಲ್‌ನಿಂದ ಫಲಿತಾಂಶವನ್ನು ಡೌನ್‌ಲೋಡ್ ಮಾಡಲು ಸಹ ಸಾಧ್ಯವಾಗುತ್ತದೆ. CBSE ಫಲಿತಾಂಶಗಳು IVR ಮತ್ತು SMS ಮೂಲಕವೂ ಲಭ್ಯವಿವೆ. ನೇರ ಫಲಿತಾಂಶಕ್ಕೆ ಈ ಲಿಂಕ್ ಕ್ಲಿಕ್ ಮಾಡಿ.

ಮತ್ತಷ್ಟು ಓದಿ: CBSE Results 2023 Declared: ಸಿಬಿಎಸ್​ಇ 12 ನೇ ತರಗತಿ ಫಲಿತಾಂಶ ಪ್ರಕಟ; ಪರಿಶೀಲಿಸುವ ವಿಧಾನ ಇಲ್ಲಿದೆ

ವಿದ್ಯಾರ್ಥಿಗಳು ತಮ್ಮ CBSE ಮಾರ್ಕ್ ಶೀಟ್‌ಗಳನ್ನು ಡಿಜಿಲಾಕರ್‌ನಿಂದ ಡೌನ್‌ಲೋಡ್ ಮಾಡಬಹುದು. ಡಿಜಿಲಾಕರ್‌ನಲ್ಲಿ ತಮ್ಮ ಸಿಬಿಎಸ್‌ಇ ಫಲಿತಾಂಶವನ್ನು ವೀಕ್ಷಿಸಲು ವಿದ್ಯಾರ್ಥಿಗಳು ತಮ್ಮ ರೋಲ್ ಸಂಖ್ಯೆ ಮತ್ತು ಪಿನ್ ಬಳಸಿ ಲಾಗಿನ್ ಮಾಡಬೇಕಾಗುತ್ತದೆ. ಶಾಲೆಗಳಿಗೆ ಪಿನ್ ಕಳುಹಿಸಲಾಗಿದೆ. ಪಿನ್‌ಗಳನ್ನು ಪಡೆಯಲು ವಿದ್ಯಾರ್ಥಿಗಳು ಶಾಲೆಯನ್ನು ಸಂಪರ್ಕಿಸಬಹುದು.

ತೆಲಂಗಾಣ ರಾಜ್ಯ ಮಧ್ಯಂತರ ಶಿಕ್ಷಣ ಮಂಡಳಿ (TSBIE) 2023ರ ಪ್ರಥಮ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ(Exam Result)ವನ್ನು ಪ್ರಕಟಿಸಿತ್ತು, ತೆಲಂಗಾಣದಲ್ಲಿ ಮಂಗಳವಾರ 11 ಹಾಗೂ 12ನೇ ತರಗತಿಯ ಫಲಿತಾಂಶಕ್ಕೆ ಸಮಾನವಾದ ಇಂಡರ್​ಮೀಡಿಯೇಟ್​ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿ 24 ಗಂಟೆಗಳಲ್ಲಿ 6 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳ ಮೇಲಿನ ಒತ್ತಡವನ್ನು ಕಡಿಮೆ ಮಾಡಲು ಸರ್ಕಾರವು ಎಲ್ಲರನ್ನು ಉತ್ತೀರ್ಣ ಎಂದು ಘೋಷಿಸಿತು.

ಶಿಕ್ಷಣಕ್ಕೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ನಾನಿಲ್ಲದಿದ್ದರೂ ಕಾಂಗ್ರೆಸ್ ಅಸ್ತಿತ್ವಕ್ಕೆ ಯಾವುದೇ ತೊಂದರೆಯಿಲ್ಲ: ಡಿಕೆಶಿ
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಕ್ಯಾಪ್ಟನ್​ ಆಗೋಕೆ ಬಿಗ್ ಬಾಸ್ ಬೆಡ್​ರೂಂನಲ್ಲಿ ದೊಡ್ಡ ಡೀಲಿಂಗ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ಸಾಯೋವರೆಗೂ ಕುಮಾರಣ್ಣ ಮತ್ತು ದೇವೇಗೌಡರ ಜೊತೆ ಇರ್ತೀವಿ :ಸಾರಾ ಮಹೇಶ್
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ನೋಡ ನೋಡ್ತಿದ್ದಂತೆಯೇ ಹತ್ತಾರು ಲೀಟರ್ ಹಾಲು ರಸ್ತೆಗೆ ಸುರಿದರು!
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ವಕ್ಫ್ ಬೋರ್ಡ್ ವಿರುದ್ಧ 5 ಜಿಲ್ಲೆಗಳಲ್ಲಿ ನಡೆಯಲಿದೆ ಯತ್ನಾಳ್ ತಂಡದ ಅಭಿಯಾನ
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಪಾರ್ಕಿಂಗ್ ವಿಚಾರವಾಗಿ ಜಗಳ, ವ್ಯಕ್ತಿಗೆ ಮನಬಂದಂತೆ ಥಳಿಸಿದ ಗುಂಪು
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಜನಪ್ರತಿನಿಧಿಗಳ ನಿರ್ಲಕ್ಷ್ಯ ಜಲಾಶಯದಲ್ಲಿ ಸೋರುವಿಕೆಗೆ ಕಾರಣವಾಯಿತೆ?
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮುಡಾ ಪ್ರಕರಣದಲ್ಲಿ ಲೋಕಾಯುಕ್ತವೇ ಅಪರಾಧಿ ಸ್ಥಾನದಲ್ಲಿದೆ: ಸ್ನೇಹಮಯಿ ಕೃಷ್ಣ
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು
ಮಹಾರಾಜನಾಗಿ ದರ್ಪ ತೋರಿದ್ರು; ಉಳಿದವರ ಉಪವಾಸ ಕೆಡವಿ ತಾನು ಊಟ ಮಾಡಿದ ಮಂಜು